ದಾಸೋಹ ಸೂತ್ರ ಅಳವಡಿಕೆಗೆ ಕರೆ
Team Udayavani, Feb 12, 2018, 11:33 AM IST
ಕಲಬುರಗಿ: ಬದುಕಿಗೆ ಹತ್ತಿರವಾಗಿರುವ ಹಾಗೂ ನೆಮ್ಮದಿ ಕಂಡುಕೊಳ್ಳುವ ದಾಸೋಹ ಸೂತ್ರ ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿ ಕೊಳ್ಳಲು ಮುಂದಾಗುವಂತೆ ವಿಜಯಪುರ ಜ್ಞಾನಯೋಗಾಶ್ರಮದ, ಆಧ್ಯಾತ್ಮಿಕ ಚಿಂತಕ ಸಿದ್ದೇಶ್ವರ ಸ್ವಾಮೀಜಿ ಕರೆ ನೀಡಿದರು.
ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ರವಿವಾರ ಆಯೋಜಿಸಿದ್ದ ಎಸ್‌ಬಿಆರ್ ಸುವರ್ಣ ಮಹೋತ್ಸವ ಹಾಗೂ ಎಸ್‌ಬಿಆರ್ ಶಾಲೆ ಹಳೆ ವಿದ್ಯಾರ್ಥಿಗಳ ಸದಸ್ಯರ ಕೂಟ ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು. ಇರುವುದನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವ ಸುಂದರ ತತ್ವ ದಾಸೋಹದಲ್ಲಿ ಪ್ರಮುಖವಾಗಿ ಕಾಣುತ್ತೇವೆ. ಭಾವನಾತ್ಮಕ, ಜ್ಞಾನದ ಫಲವೇ ದಾಸೋಹ. ಶಿಕ್ಷಕರು ಮೊದಲು ಜ್ಞಾನವಾಗಿದ್ದಾರೆ. ಜ್ಞಾನ ಮೂಲಕ ಸಂಪಾದಿಸಿಕೊಂಡಿದ್ದನ್ನು ವಿದ್ಯಾರ್ಥಿಗಳಿಗೆ ಸ್ವಲ್ಪ ಸ್ವಲ್ಪ ಹಂಚುವುದೇ ದಾಸೋಹವಾಗಿದೆ ಎಂದು ಹೇಳಿದರು.
ಬದುಕು ರೂಪಿಸುವ ನಿರಂತರ ಜ್ಞಾನ ದಾಸೋಹ ಮಾಡುತ್ತಿರುವ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಡಾ| ಶರಣಬಸವಪ್ಪ ಅಪ್ಪ ಅವರ ಶೈಕ್ಷಣಿಕ ಕ್ರಾಂತಿ ಅದ್ಭುತ ಹಾಗೂ ಮಾದರಿಯಾಗಿದೆ. ಅವರು ಕೇವಲ ತಮಗಾಗಿ ಇಂತಹ ಶಿಕ್ಷಣ ಸಂಸ್ಥೆ ಕಟ್ಟಿಲ್ಲ ಹಾಗೂ ಸಾಧನೆ ಮಾಡಿಲ್ಲ. ಅವರು ಕಟ್ಟಿರುವ ಈ ಶಿಕ್ಷಣ ಕ್ರಾಂತಿ ಬೆಳಕು ಹೈದರಾಬಾದ್ ಕರ್ನಾಟಕ ಪ್ರದೇಶವನ್ನೇ ಬೆಳಗುತ್ತಿದೆ. ಅಲ್ಲದೇ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ ಎಂದು ಸಿದ್ದೇಶ್ವರ ಸ್ವಾಮೀಜಿ ಶ್ಲಾಘಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಎಸ್‌ಬಿಆರ್ ಕಾಲೇಜಿ ಪ್ರಾಚಾರ್ಯ ಎನ್.ಎಸ್. ದೇವರಕಲ್, ವಿಜ್ಞಾನ ಶಿಕ್ಷಕ ಜೆ.ಕೆ. ಪ್ರಸಾದ ಇದ್ದರು. ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ್ ನಿಷ್ಠಿ ಪ್ರಾಸ್ತಾವಿಕವಾಗಿ ಮಾತನಾಡಾದರು. ಡಾ| ಭರತ್ ಕೋಣಿನ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.