ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ
Team Udayavani, May 19, 2018, 11:21 AM IST
ಚಿತ್ತಾಪುರ: ರಾಜ್ಯಪಾಲರು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ತಾಲೂಕು ದಲಿತ ಸಮನ್ವಯ ಸಮಿತಿ ಶಾಖೆ ಕಾರ್ಯಕರ್ತರು ಪಟ್ಟಣದ ಲಾಡ್ಜಿಂಗ್ ಕ್ರಾಸ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ದಲಿತ ಮುಖಂಡ ಶಿವಮೂರ್ತಿ ಶಾಸ್ತ್ರಿ ಮಾತನಾಡಿ, ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಬಿಜೆಪಿ ಸರ್ಕಾರ ರಚಿಸಲು ಆಹ್ವಾನ ನೀಡಿರುವುದು ಸಂವಿಧಾನದ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ಪ್ರಜಾತಾಂತ್ರಿಕ ನೀತಿ-ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದೆ. ತರಾತುರಿಯಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಬಹುಮತ ಸಾಬಿತಿಗೆ 15 ದಿನಗಳ ಕಾಲಾವಕಾಶ ನೀಡಿ ಕುದುರೆ ವ್ಯಾಪಾರಕ್ಕೆ ಪರೋಕ್ಷವಾಗಿ ಸಹಕಾರ ನೀಡಲಾಗಿದೆ ಎಂದು ಆರೋಪಿಸಿದರು.
ರಾಜ್ಯಪಾಲರ ಹುದ್ದೆಯ ಗೌರವ, ಘನತೆ ಹಾಳು ಮಾಡಿದ್ದಾರೆ. ಆದ್ದರಿಂದ ಕೂಡಲೇ ರಾಜ್ಯಪಾಲ ವಾಜುಭಾಯಿ ವಾಲಾ ಅವರನ್ನು ಹಿಂದಕ್ಕೆ ಕರೆಯಿಸಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಅವಕಾಶ ಕಲ್ಪಿಸಿಕೊಟ್ಟು ಪ್ರಜಾಪ್ರಭುತ್ವ ಉಳಿಸಬೇಕು ಎಂದು ಆಗ್ರಹಿಸಿದರು.
ಗ್ರೇಡ್-2 ತಹಶೀಲ್ದಾರ್ ರವೀಂದ್ರ ದಾಮಾ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ದಲಿತ ಮುಖಂಡರಾದ ಮಲ್ಲಿಕಾರ್ಜುನ ಬೆಣ್ಣೂರ, ಮಲ್ಲಿಕಾರ್ಜುನ ಬಮ್ಮನಳ್ಳಿ, ಮಲ್ಲಿಕಾರ್ಜುನ ಕಾಳಗಿ, ಆನಂದ ಕಲ್ಲಕ್,
ಮಲ್ಲಿಕಾರ್ಜುನ ಮುಡಬೂಳಕರ್, ಉದಯಕುಮಾರ ಸಾಗರ, ಮಹಾಂತೇಶ ಬಮ್ಮನಳ್ಳಿ, ಶ್ರೀಕಾಂತ ಸಿಂಧೆ, ಮಲ್ಲಿನಾಥರಾವ ಮಲ್ಕನ್, ಸಂಜಯ ಬುಳಕರ್, ಶ್ರೀಕಾಂತ ಹೊಸ್ಸಳಿಕರ್, ಮಾರುತಿ ಹುಳಗೋಳ, ಶಿವಯೋಗಿ ರಾವೂರ್, ನಾಗೇಂದ್ರ ಬುರಲಿ, ಲೋಹಿತ್ ಮುದ್ದಡಗಿ, ದೇವಿಂಧ್ರ ಕುಮಸಿ, ವಿಶ್ವನಾಥ ಬೀದಿಮನಿ, ವಿಜಯಕುಮಾರ ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.