ಹಣ್ಣಾಗಲು ಕಾರ್ಬೈಡ್ ಬಳಕೆ ಮಾಡಿಲ್ಲ
Team Udayavani, May 26, 2017, 3:32 PM IST
ಕಲಬುರಗಿ: ನಗರದಲ್ಲಿರುವ ಹಣ್ಣಿನ ಅಂಗಡಿಗಳಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಕಂಡು ಬಂದಿಲ್ಲ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯ ಜಿಲ್ಲಾ ಅಂಕಿತ ಅಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ನಗರದ ವಿವಿಧ ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿದಾಗ ಈ ಅಂಶ ಕಂಡು ಬಂದಿಲ್ಲ,
ಆದರೆ, ವ್ಯಾಪಾರಿಗಳು ಕಾಯಿಗಳನ್ನು ಹಣ್ಣು ಮಾಡಲು ಇಥಲಿನ್ ಎನ್ನುವ ಪದಾರ್ಥ ಪತ್ತೆಯಾಗಿದೆ. ಇದು ಕಾಯಿಗಳನ್ನು ಹಣ್ಣು ಮಾಡಲು ಬಳಕೆ ಮಾಡಲಾಗುತ್ತಿದೆ. ಇದಕ್ಕೆ ನಿಷೇಧವಿಲ್ಲ. ಆದರೆ, ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು ಎನ್ನುವ ಕುರಿತು ಗೊಂದಲವಿದ್ದು, ಈ ಕುರಿತು ಅಧಿಕಾರಿಗಳು ಬಳಕೆಯ ಪ್ರಮಾಣವನ್ನು ತಿಳಿ ಹೇಳಿದ್ದಾರೆ ಎಂದು ಅಂಕಿತ ಅಧಿಕಾರಿ ಆರ್.ಎಸ್. ಬಿರಾದಾರ ತಿಳಿಸಿದ್ದಾರೆ.
ಪ್ರಾದೇಶಿಕ ಆಯುಕ್ತರ ಆದೇಶದಂತೆ ದಾಳಿ ನಡೆಸಿದ್ದಾಗಿ ತಿಳಿಸಿರುವ ಅವರು, ದಾಳಿಯ ವೇಳೆ ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ನಗರದಲ್ಲಿರುವ ಸುಮಾರು ಎಲ್ಲ ಹಣ್ಣುಗಳ ದಾಸ್ತಾನುಗಳಿಗೆ, ಹಣ್ಣುಮಾಡುವ ಘಟಕಗಳಿಗೆ ಬೇಟಿ ನೀಡಿದ ಮಹಾನಗರ ಪಾಲಿಕೆ ಅಧಿಕಾರಿಗಳು
-ಹಾಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಪ್ರಾಧಿಕಾರದ ಅಂಕಿತ ಅಧಿಕಾರಿಗಳು ದಾಳಿ ನಡೆಸಿ ಆಹಾರ ಮಾದರಿಯಾಗಿ ಪಡೆದು ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದೆ. ಕಲಬೆರಕೆ ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪಾಲಿಕೆಯ ಮುಜಾಮಿಲ್, ಮುನಾಫ ಪಟೇಲ್, ಚೇತನಕುಮಾರ, ಕುಮಾರಿ ಸುಷ್ಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.