ಸಾಕ್ಷರತಾ ಹೆಚ್ಚಳಕ್ಕೆ ಮುತುವರ್ಜಿ
•ಸ್ವಯಂ ಸೇವಾ ಸಂಸ್ಥೆಗಳ ಬೆಂಬಲಕ್ಕೆ ಹರ್ಷ •ಗ್ರಾಮಗಳಲ್ಲೂ ಸಾಕ್ಷರತೆ ಹೆಚ್ಚಿಸಿ
Team Udayavani, Aug 27, 2019, 10:47 AM IST
ಕಲಬುರಗಿ: ಜಿ.ಪಂ ಸಭಾಂಗಣದಲ್ಲಿ ನಡೆದ ಲೋಕ ಶಿಕ್ಷಣ ಇಲಾಖೆ ಸಾಕ್ಷರತಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ| ಎಂ.ಟಿ. ರೇಜು ಹಾಗೂ ಇತರರಿದ್ದರು.
ಕಲಬುರಗಿ: ಸಾಕ್ಷರತಾ ಕಾರ್ಯಕ್ರಮಗಳನ್ನು ನೀಡುವ ಸಂಯೋಜಕರ ಗುರುತಿಗಾಗಿ ಅವರಿಂದ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಪ್ರತಿಯನ್ನು ಅಧಿಕಾರಿಗಳು ಪಡೆಯಬೇಕು ಎಂದು ಲೋಕ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ| ಎಂ.ಟಿ. ರೇಜು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕ ಶಿಕ್ಷಣ ಇಲಾಖೆಯ 2018-19ನೇ ಮತ್ತು 2019-20ನೇ ಸಾಲಿನಲ್ಲಿ ವಿವಿಧ ಮೂಲ ಸಾಕ್ಷರತಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಾಕ್ಷರತಾ ಪ್ರಮಾಣ ಹೆಚ್ಚಳಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದ್ದು, ಜಿಲ್ಲೆಯ ಪ್ರತಿ ಗ್ರಾಮದಲ್ಲಿಯೂ ಅನುಷ್ಠಾನ ಮಾಡುವ ಮೂಲಕ ಸಾಕ್ಷರತೆಯನ್ನು ಪ್ರತಿಶತ ಹೆಚ್ಚಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
ಡಾ| ಡಿ.ಎಂ. ನಂಜುಂಡಪ್ಪ ವರದಿ ಅನ್ವಯ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಸಾಕ್ಷರತಾ ಪ್ರಮಾಣ ಹೆಚ್ಚಳಕ್ಕೆ ಇಲಾಖೆಯು ಹೆಚ್ಚಿನ ಒತ್ತು ನೀಡುತ್ತಿದೆ. ಇದಕ್ಕೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಲು ಮುಂದೆ ಬರುತ್ತಿರುವುದು ಆಶಾದಾಯಕವಾಗಿದೆ ಎಂದರು. ಲೋಕ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಕೆ.ಎನ್. ವಿಜಯ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಕಾರ್ಯಕ್ರಮ ಸಹಾಯಕಿ ಅರ್ಚನಾ ಎಸ್. ಮಾಡ್ಯಾಳಕರ್, ಸುನೀತಾ ರಾಠೊಡ, ಅಜೀತ್ ಅಹ್ಮದ್ ಹಾಗೂ ಜಿಲ್ಲೆಯ ತಾಲೂಕು ಸಂಯೋಜಕರು, ಸಾಕ್ಷರತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.