ಬಿಜೆಪಿ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿಬಿಐ ದುರುಪಯೋಗ: ಕಾಂಗ್ರೆಸ್ ಶಾಸಕ ಅಜಯ್ ಸಿಂಗ್
Team Udayavani, Oct 5, 2020, 7:38 PM IST
ಕಲಬುರಗಿ: ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇವಲ 25 ದಿನಗಳು ಮಾತ್ರವೇ ಬಾಕಿ ಇರುವ ಸಮಯದಲ್ಲೇ ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ದಾಳಿ ಮಾಡಿರುವುದು ರಾಜಕೀಯ ಪ್ರೇರಿತ ಎಂಬುವುದು ಸ್ಪಷ್ಟ. ಬಿಜೆಪಿ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿಬಿಐ ದುರುಪಯೋಗ ಪಡಿಸಿಕೊಂಡು ಈ ದಾಳಿ ಮಾಡಿಸಿರಬಹುದು ಎಂದು ವಿಧಾನಸಭೆಯಲ್ಲಿನ ಕಾಂಗ್ರೆಸ್ ಮುಖ್ಯ ಸಚೇತಕರಾದ ಶಾಸಕ ಡಾ.ಅಜಯ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಅಧ್ಯಕ್ಷರ ಮನೆ ಮತ್ತು ಬೇರೆ-ಬೇರೆ ಕಡೆ ಸಿಬಿಐನವರು ದಾಳಿ ಮಾಡಿದ್ದಾರೆ. ಈ ಹಿಂದಿನ ದಾಳಿ ಪ್ರಕರಣದಲ್ಲಿ ಪ್ರತಿ ಸಲವೂ ಡಿಕೆಶಿ ಸಹಕಾರ ನೀಡುತ್ತಾ ಬಂದಿದ್ದಾರೆ. ಆದರೂ, ಅವರ ಮೇಲೆ ದಾಳಿ ಮಾಡುವ ಅವಶಕತ್ಯೆ ಏನು ?. ಚುನಾವಣೆ ಸಮಯದಲ್ಲಿ ದಾಳಿ ಮಾಡಿದ್ದು ಎಷ್ಟು ಸರಿ?. ಬಿಜೆಪಿಯವರಿಗೆ ಚುನಾವಣೆಯನ್ನೇ ಎದುರಿಸಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.
ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವ ಎಲ್ಲ ಪ್ರತಿಪಕ್ಷದವರ ಮೇಲೆ ಐಟಿ, ಇಡಿ, ಸಿಬಿಐಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜಸ್ಥಾನದ ರಾಜಕೀಯ ಬಿಕ್ಕುಟ್ಟು ಸಂದರ್ಭದಲ್ಲಿ ಅಶೋಕ ಗೆಹ್ಲೋಟ್ ಅವರ ಅಣ್ಣನ ಮೇಲೆ ದಾಳಿ ಮಾಡಿಸಿದ್ದರು. ಕಳೆದ ಎರಡು ವರ್ಷದಲ್ಲಿ ಎಷ್ಟು ಜನ ಬಿಜೆಪಿಯವರ ಮೇಲೆ ಎಷ್ಟು ಬಾರಿ ಐಟಿ, ಇಡಿ, ಸಿಬಿಐ ಮಾಡಿವೆ ಎಂದು ಖಾರವಾಗಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.