ಕೇಂದ್ರದ ಆರ್ಥಿಕ ಪ್ಯಾಕೇಜ್ ಆಶಾದಾಯಕ: ಗುತ್ತೇದಾರ
Team Udayavani, May 16, 2020, 5:40 AM IST
ಆಳಂದ: ಕೋವಿಡ್ ಲಾಕ್ ಡೌನ್ ಸಂಕಷ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಪ್ಯಾಕೇಜ್ ರೈತರು, ಕಾರ್ಮಿಕರು ಹಾಗೂ ತೊಂದರೆಯಲ್ಲಿದ್ದವರಿಗೆ ಸಹಾಯಹಸ್ತ ನೀಡಿದಂತಾಗಿದೆಎಂದು ಶಾಸಕ ಸುಭಾಷ್ ಗುತ್ತೇದಾರ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಪ್ರಧಾನಿಗಳು ಪ್ಯಾಕೇಜ್ ಘೋಷಿಸಿರುವುದರಿಂದ ರಾಜ್ಯದ ಜನರಿಗೆ ಎರಡು ರೀತಿಯಿಂದ ಲಾಭವಾಗಲಿದೆ. ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಮೊತ್ತದ ಪ್ಯಾಕೇಜ್ ಇದಾಗಿದೆ. ಇದು ದೇಶದ ಜಿಡಿಪಿಯ ಶೇ. 10ರಷ್ಟು ಮೊತ್ತ ಹೊಂದಿದೆ. ಇದರಿಂದ ದೇಶದ ಎಲ್ಲ ವರ್ಗದವರಿಗೆ ಲಾಭವಾಗಲಿದೆ. ಪ್ರಧಾನಿಗಳು ಕರೆ ನೀಡಿರುವ ಸ್ವದೇಶಿ ಮಂತ್ರಕ್ಕೆ ಎಲ್ಲರೂ ಕೈಜೋಡಿಸಿ ದೇಶವನ್ನು ಆರ್ಥಿಕವಾಗಿ ಮೇಲೆತ್ತುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಈಗಾಗಲೇ ಗ್ರಾಮೀಣ ಪ್ರದೇಶಕ್ಕೆ ಮರಳಿ ಬಂದ ಹಾಗೂ ಸ್ಥಳೀಯವಾಗಿ ವಾಸವಾಗಿದ್ದ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡಲಾಗುತ್ತಿದೆ. ತಮ್ಮ ದಾಖಲೆ ನೀಡಿ ಕೆಲಸದಲ್ಲಿ ತೊಡಗಬೇಕು ಎಂದು ಅವರು ಕಾರ್ಮಿಕರಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.