ಪಾಲಿಕೆ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ
Team Udayavani, Jan 12, 2019, 5:23 AM IST
ಕಲಬುರಗಿ: ಮಹಾನಗರ ಪಾಲಿಕೆ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ನಗರದ ಇಂದಿರಾ ಸ್ಮಾರಕ ಭವನದಲ್ಲಿ ನಡೆಯಿತು. ಪಾಲಿಕೆಯ ಕರ, ಹಣಕಾಸು ಮತ್ತು ಮೇಲ್ಮನವಿ ಸ್ಥಾಯಿ ಸಮಿತಿಯ ಅಧ್ಯಕ್ಷ ರಮೇಶ ಟಿ. ಕಮಕನೂರ, ಸಾರ್ವಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮಹ್ಮದ್ ಅಜಮಲ್ ಗೋಳಾ, ಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರಾಜಕುಮಾರ ಎಚ್. ಕಪನೂರ ಅವರನ್ನು ಆಯ್ಕೆ ಮಾಡಲಾಯಿತು.
ಇದೇ ವೇಳೆ ಪಾಲಿಕೆಯಿಂದ ಕುಡಾ ಸದಸ್ಯರಾಗಿ ರಹೀಂಮುಲ್ಲಾ, ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಸಲೀಂ ಭಾಯ್ ಅವರನ್ನು ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷರು, ಕುಡಾ ಸದಸ್ಯರು ಹಾಗೂ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದವರಿಗೆ ಪಾಲಿಕೆ ಮೇಯರ್ ಮಲ್ಲಮ್ಮ ಸಿದ್ದರಾಮಪ್ಪ ವಳಕೇರಿ, ಉಪಮೇಯರ್ ಆಲಿಯಾ ಸಿರೀನ್ ಹೂಗುಚ್ಛ ನೀಡಿ ಸನ್ಮಾನಿಸಿದರು.
ಮಜರ್ ಆಲಂ ಖಾನ್, ಗಣೇಶ ವಳಕೇರಿ, ವಾಹೇದ್ ಅಲಿ ಫಾತೇಖಾನ್, ಹುಲಿಗೆಪ್ಪ ಕನಕಗಿರಿ, ಮಹೇಶ ಹೋಸೂರಕರ್, ಜಾವೀದ್ ಎನ್‌ಆರ್‌ಐ, ಅಸ್ಫಕ್ ಅಹ್ಮದ್ ಚುಲಬುಲ್, ರಾಜಶ್ರೀ ಜಾಧವ, ಈರಣ್ಣ ಹೊನ್ನಳ್ಳಿ, ಶಂಕರಸಿಂಗ್, ಈರಣ್ಣ ಝಳಕಿ, ಶಫಿ ಹುಂಡೇಕಾರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.