ಚೆಕ್‌ಪೋಸ್ಟ್‌ಗಳಿಗೆ ವೀಕ್ಷಕರ ಭೇಟಿ ಕಡ್ಡಾಯ


Team Udayavani, Mar 30, 2019, 1:40 PM IST

gul-1

ಹಾಕಿ ಮತದಾರರಿಗೆ ಉಚಿತವಾಗಿ ಹಂಚಲು ಬರುವ ಉಡುಗೊರೆಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಸಹಾಯಕ ಖರ್ಚು-ವೆಚ್ಚ ವೀಕ್ಷಕರು ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಖರ್ಚು-ವೆಚ್ಚ ವೀಕ್ಷಕ ರೋಹಿತ ಆನಂದ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಖರ್ಚು-ವೆಚ್ಚಕ್ಕೆ ಸಂಬಂಧಿಸಿದಂತೆ ಸಹಾಯಕ ಖರ್ಚು-ವೆಚ್ಚ ವೀಕ್ಷಕರ ಹಾಗೂ ಇತರೆ ಅ ಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕಲಬುರಗಿ ಜಿಲ್ಲೆಯೂ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಕ್ಕೆ ಹೊಂದಿಕೊಂಡಿರುವುದರಿಂದ ಅಂತಾರಾಜ್ಯ ಚೆಕ್‌ಪೋಸ್ಟ್‌ ಸಹ ಇಲ್ಲಿ ಸ್ಥಾಪಿಸಲಾಗಿದೆ. ಅಕ್ರಮ ಸಾಗಾಣಿಕೆ ತಡೆಯಲು ದಿನದ 24 ಗಂಟೆಗಳ ಕಾಲ ಎಸ್‌. ಎಸ್‌.ಟಿ. ತಂಡಗಳು ಕಾರ್ಯನಿರ್ವಹಿಸುತ್ತಿವೆ. ಎಸ್‌.ಎಸ್‌.ಟಿ ತಂಡಕ್ಕೆ ಪ್ಯಾರಾ ಮಿಲಿಟರಿ ಮತ್ತು ಸ್ಥಳೀಯ ಪೊಲೀಸ್‌ ಸಿಬ್ಬಂದಿ ಸೇವೆ ಸಹ ನೀಡಿರುವುದರಿಂದ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಖರ್ಚು-ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ದೂ.ಸಂ.08472-1950ಗೆ ಕರೆ ಮಾಡಿ ಸಲ್ಲಿಸಬಹುದಾಗಿದೆ ಎಂದರು. ಖರ್ಚು-ವೆಚ್ಚಗಳ ನೋಡಲ್‌ ಅಧಿಕಾರಿ ರಾಮಣ್ಣ ಅಥಣಿ, ಆದಾಯ ತೆರಿಗೆ ಇಲಾಖೆ ನೋಡಲ್‌ ಅಧಿಕಾರಿ ವಾಸುದೇವನ್‌, ಪೊಲೀಸ್‌ ನೋಡಲ್‌ ಅಧಿಕಾರಿ ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ, ಕಲಬುರಗಿ ಲೋಕಸಭಾ ಮತಕ್ಷೇತ್ರದ ಖರ್ಚು-ವೆಚ್ಚಗಳ ಸಹಾಯಕ ವೀಕ್ಷಕ ವಿಕಾಸ ಸಜ್ಜನ, ಸಹಾಯಕ ಖರ್ಚು-ವೆಚ್ಚ ವೀಕ್ಷಕರಾದ ಶಿವರಾಜ ಪಾಟೀಲ, ಬಸವರಾಜ ಚಟನಳ್ಳಿ, ಸಿದ್ಧಮ್ಮ, ಭಾರತಿ ಜ್ಯೋತಿ, ಬಾಬು, ರಾಜಕುಮಾರ, ಪಾಪಣ್ಣ ಇಟಗಿಕರ್‌, ಪ್ರಕಾಶ ಜಾಧವ, ಅಬಕಾರಿ ನೋಡಲ್‌ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿದ್ದರು.

ಸಾಮಾನ್ಯ-ಪೊಲೀಸ್‌ ವೀಕ್ಷಕರ ನೇಮಕ
ಕಲಬುರಗಿ: ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಭಾರತ ಚುನಾವಣೆ ಆಯೋಗವು 05-ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರಕ್ಕೆ ತಲಾ ಒಬ್ಬರು ಸಾಮಾನ್ಯ ವೀಕ್ಷಕ ಹಾಗೂ ಪೊಲೀಸ್‌ ವೀಕ್ಷಕರನ್ನು ನೇಮಕ ಮಾಡಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರು ಹಾಗೂ ಅಹವಾಲುಗಳಿದ್ದರೆ ನೇರವಾಗಿ ಸಾಮಾನ್ಯ ಹಾಗೂ ಪೊಲೀಸ್‌ ವೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕ: ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ವೆಸ್ಟ್‌ಬೆಂಗಾಲ ರಾಜ್ಯದ ಐ.ಎ.ಎಸ್‌. ಅ ಧಿಕಾರಿ ಪರ್ವೇಜ್‌ ಅಹ್ಮದ್‌ ಸಿದ್ಧಿಕ್ಕಿ (ಮೊ.ಸಂಖ್ಯೆ: 9933770000) ಅವರನ್ನು ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಿದೆ. ಪೊಲೀಸ್‌ ವೀಕ್ಷಕ: ಕಲಬುರಗಿ ಲೋಕಸಭೆ ಕ್ಷೇತ್ರಕ್ಕೆ ಹರಿಯಾಣ ರಾಜ್ಯದ ಐ.ಪಿ.ಎಸ್‌. ಅಧಿಕಾರಿ ಡಾ| ರಾಜಶ್ರೀ ಸಿಂಗ್‌ ಅವರನ್ನು (ಮೊ.ಸಂಖ್ಯೆ: 9582200101 ) ಪೊಲೀಸ್‌ ವೀಕ್ಷಕರನ್ನಾಗಿ ನೇಮಿಸಿದೆ.

ವಿಡಿಯೋ ಕಣ್ಗಾವಲು ತಂಡ ರಚನೆ
ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿನ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ನಡೆಸುವ ಚುನಾವಣಾ ಸಭೆ-ಸಮಾರಂಭ, ಮೆರವಣಿಗೆ ಮತ್ತು ಸೂಕ್ಷ್ಮ ಘಟನಾವಳಿಗಳನ್ನು ಚಿತ್ರೀಕರಿಸಲು ಚುನಾವಣಾ ವೀಡಿಯೋ ಕಣ್ಗಾವಲು ತಂಡ (ವಿಡಿಯೋ ಸರ್ವಲನ್ಸ್‌ ಟೀಮ್‌) ರಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಎರಡು ಅಥವಾ ಮೂರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಿಡಿಯೋ ಗ್ರಾಫರ್‌ಗಳು ಈ ತಂಡದಲ್ಲಿ ಇರಲಿದ್ದಾರೆ. ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರಗಳಿಗೆ ನೇಮಕ ಮಾಡಲಾದ ತಂಡದ ಅಧಿಕಾರಿಗಳ ವಿವರ ಕೆಳಗಿನಂತಿದೆ: 34-ಅಫಜಲಪುರ ವಿಧಾನಸಭಾ ಕ್ಷೇತ್ರ: ಅಫಜಲಪುರ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಕಾಸೀಮ್‌ ಮೊ. ಸಂಖ್ಯೆ 8277931510, ಅಫಜಲಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಧೀಕ್ಷಕ ರಾಜು ದೇಶಪಾಂಡೆ ಮೊ. ಸಂಖ್ಯೆ 8971492068 ಹಾಗೂ ಅಫಜಲಪುರ ಐಟಿಐ ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊ. ಸಂಖ್ಯೆ 9449513639.

35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಜೇವರ್ಗಿ ಕ್ಷೇತ್ರ ಶಿಕ್ಷಣಾ ಧಿಕಾರಿ ಶಾಂತಪ್ಪ ಎಸ್‌. ಮೊ. ಸಂಖ್ಯೆ 9480695214, ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇ.ಸಿ.ಒ.ರಾದ ಜಿ.ಬಿ. ಹಿರೇಮಠ ಮೊ. ಸಂಖ್ಯೆ 8073199919 ಹಾಗೂ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಬಿ.ಆರ್‌.ಸಿ. ಲಿಂಗರಾಜ ಮೂಲಿಮನಿ ಮೊ. ಸಂಖ್ಯೆ 9480695225.

40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಚಿತ್ತಾಪುರ ಸಹಾಯಕ ತೋಟಗಾರಿಕೆ ಅಧಿಕಾರಿ ಜಗದೀಶ ಗಾಜರೆ ಮೊ. ಸಂಖ್ಯೆ 9845224716 ಹಾಗೂ ಚಿತ್ತಾಪುರ ಎ.ಪಿ.ಎಂ.ಸಿ. ಕಾರ್ಯದರ್ಶಿ ಚನ್ನಬಸಯ್ಯ ಹಿರೇಮಠ ಮೊ. ಸಂಖ್ಯೆ 9480409788. 41-ಸೇಡಂ ವಿಧಾನಸಭಾ ಕ್ಷೇತ್ರ: ಎ.ಪಿ.ಎಂ.ಸಿ.ಕಾರ್ಯದರ್ಶಿ ಸಂತೋಷ ಬುಡಗೆ ಮೊ. ಸಂಖ್ಯೆ 9916258254 ಹಾಗೂ ಸೇಡಂ ಸಮಾಜ ಕಲ್ಯಾಣ ಅಧಿಕಾರಿ ಶಶಿಕಾಂತ ನಂದಿಕೂರ ಮೊ. ಸಂಖ್ಯೆ 9164707575.

42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಚಿಂಚೋಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ ಮೊ. ಸಂಖ್ಯೆ 8277931514 ಹಾಗೂ ಚಿಂಚೋಳಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಪದ್ಮಾ ಮೊ. ಸಂಖ್ಯೆ 7259984589.

43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ: ಕಲಬುರಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ನಾಮದೇವ ರಾಠೊಡ ಮೊ. ಸಂಖ್ಯೆ 9448590003 ಹಾಗೂ ಕಮಲಾಪುರ ಡೈಟ್‌ ಪ್ರಾಚಾರ್ಯ ಶಶಿಕಾಂತ ಮೊ. ಸಂಖ್ಯೆ 9448999370.

44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಕಲಬುರಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ರಾಣುಕಾದೇವಿ ಮೊ. ಸಂಖ್ಯೆ 9482073686 ಹಾಗೂ ಕಲಬುರಗಿ ಎ.ಪಿ.ಎಂ.ಸಿ. ಕಾರ್ಯದರ್ಶಿ ಗಜೇಂದ್ರ ಮೊ. ಸಂಖ್ಯೆ 9481764248. 45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ನಗರ ಯೋಜನಾ ಇಲಾಖೆಯ ಕಲಬುರಗಿ ಜಂಟಿ ನಿರ್ದೇಶಕ ಪ್ರಕಾಶ ಸಿ. ಹರಕುಡೆ ಮೊ. ಸಂಖ್ಯೆ 8073231312 ಹಾಗೂ ಕಲಬುರಗಿ ಎ.ಪಿ.ಎಂ.ಸಿ. ಸಹಾಯಕ ಕಾರ್ಯದರ್ಶಿ ಅನೀಲಕುಮಾರ ಹಾದಿಮನಿ ಮೊ. ಸಂಖ್ಯೆ 9901777781.

46-ಆಳಂದ ವಿಧಾನಸಭಾ ಕ್ಷೇತ್ರ: ಆಳಂದ ಕೈಗಾರಿಕಾ ವಿಸ್ತರಣಾಧಿಕಾರಿ ಜಾಫರ ಅನ್ಸಾರಿ ಮೊ. ಸಂಖ್ಯೆ 9880087863 ಹಾಗೂ ಆಳಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಉಪನ್ಯಾಸಕ ನಿಂಗಪ್ಪಾ ಪೂಜಾರಿ ಮೊ. ಸಂಖ್ಯೆ 9449718309.

24ರ ವರೆಗೆ ಸರ್ಕಾರಿ ಕಚೇರಿ ವೇಳೆಯಲ್ಲಿ ಬದಲಾವಣೆಯಿಲ್ಲ
ಕಲಬುರಗಿ: ಗುಲಬರ್ಗಾ ಲೋಕಸಭಾ (ಮೀಸಲು) ಮತಕ್ಷೇತ್ರದ ಚುನಾವಣೆ ಕಾರ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ನಾಡ ಕಚೇರಿಗಳ ಸಿಬ್ಬಂದಿ ಹಾಗೂ ಇತರೆ ಎಲ್ಲ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ,ಸಿಬ್ಬಂದಿ ಮೊದಲಿನಂತೆ ಏ. 1 ರಿಂದ ಏ. 24ರ ವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆ ವರೆಗೆಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿ, ನೌಕರರು ಚುನಾವಣಾ ಅಧಿಕಾರಿಗಳ ಆದೇಶದಂತೆ ಚುನಾವಣಾ ಕರ್ತವ್ಯಗಳನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಅದೇ ರೀತಿ ಲೋಕಸಭಾ ಚುನಾವಣೆ ಚುನಾವಣೆ ನಂತರ ಅಂದರೆ ಏ. 25 ರಿಂದ ಮೇ 31ರ ವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ಗಂಟೆ ವರೆಗೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಸಮಯವನ್ನು ಏ. 1 ರಿಂದ ಮೇ 31 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ನಿಗದಿಪಡಿಸಿ ಈಗಾಗಲೇ ರಾಜ್ಯ ಸರ್ಕಾರವು ಆದೇಶ ಹೊರಡಿಸಿತ್ತು. ಲೋಕಸಭೆ ಚುನಾವಣಾ ಕಾರ್ಯದ ಹಿನ್ನೆಲೆಯಲ್ಲಿ ಈ ಬದಲಾವಣೆಯನ್ನು ಮಾಡಲಾಗಿದೆ
ಎಂದು ಅವರು ತಿಳಿಸಿದ್ದಾರೆ.

ದೂರಿಗಾಗಿ 1950ಕ್ಕೆ ಕರೆ ಮಾಡಿ: ಡಿಸಿ ಕಲಬುರಗಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮಾಹಿತಿ ಹಾಗೂ ದೂರುಗಳನ್ನು ದಾಖಲಿಸಲು ಶುಲ್ಕರಹಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.1950 ಸಹಾಯವಾಣಿಗೆ ಕರೆ ಮಾಡುವುದರಿಂದ ಚುನಾವಣೆ ಸಮಗ್ರ ಮಾಹಿತಿ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಈ ಸಹಾಯವಾಣಿ ಸಂಖ್ಯೆಗೆ ಕರೆ ದೂರು ಸಹಿತ ದಾಖಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

ICC-Champ

Champions Trophy: ಕೊನೆಗೂ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.