ಬಾಲ್ಯವಿವಾಹ ನಿಷೇಧ ಕಾನೂನು ಜಾರಿಗೆ ಬರಲಿ: ಕುಮಾರ
Team Udayavani, Jun 5, 2017, 4:31 PM IST
ಜೇವರ್ಗಿ: ಬಾಲ್ಯ ವಿವಾಹ ತಡೆಗಟ್ಟಲು ಅಧಿಕಾರಿಗಳ ಜತೆಗೆ ಸಾರ್ವಜನಿಕರ ಪಾತ್ರವು ಬಹಳ ಮುಖ್ಯವಾಗಿರುತ್ತದೆ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಕುಮಾರ ಜಿ. ಅಭಿಪ್ರಾಯಪಟ್ಟರು.
ಪಟ್ಟಣದ ಹಳೆ ತಹಶೀಲ್ದಾರ ಕಚೇರಿ ಹಿಂಬಾಗದಲ್ಲಿರುವ ತಾಪಂ ಸಭಾಂಗಣದಲ್ಲಿ ರವಿವಾರ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧ ಅರಿವು ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ತಡೆಗಟ್ಟಲು ಅಧಿಕಾರಿಗಳಿಗೆ ಜನರ ಸಹಕಾರ ಮುಖ್ಯವಾಗುತ್ತದೆ. ತಾಲೂಕಿನ ಯಾವುದೇ ಗ್ರಾಮದಲ್ಲಿ ಇಂತಹ ಘಟನೆ ನಡೆಯುವುದು ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೊಡಬೇಕು. ಬಾಲ್ಯವಿವಾಹ ಮಾಡುತ್ತಿರುವ ಬಗ್ಗೆ ದೂರು ನೀಡಿದರೆ ಅಂತಹವರ ಹೆಸರನ್ನು ಗೌಪ್ಯವಿಡಲಾಗುವುದು.
ಮಕ್ಕಳು ಇನ್ನು ಜಗತ್ತು ಅರಿಯುವ ಮೊದಲೇ ಮದುವೆ ಮಾಡುವುದರಿಂದ ಅನೇಕ ದುಷ್ಪರಿಣಾಮಗಳು ಎದುರಿಸಬೇಕಾಗುತ್ತದೆ. ಸರಕಾರ ಬಾಲ್ಯವಿವಾಹ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿರುವುದರಿಂದ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ತಹಶೀಲ್ದಾರ ಯಲ್ಲಪ್ಪ ಸುಬೇದಾರ ಮಾತನಾಡಿ, ಬಾಲ್ಯವಿವಾಹ ತಡೆದ ಸಂದರ್ಭದಲ್ಲಿ ಅನೇಕ ರಾಜಕೀಯ ಹಾಗೂ ಪ್ರಭಾವಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತವೆ. ಇಂತಹ ಸಂದರ್ಭ ಬಂದರೂ ಎದೆಗುಂದದೆ ಹಲವಾರು ಬಾಲ್ಯವಿವಾಹ ತಡೆಗಟ್ಟಲಾಗಿದೆ. ಸರಕಾರಿ ಅಧಿಕಾರಿಗಳು ಸಹ ತಮ್ಮ ಸಂಬಂಧಿಕರು ಬಾಲ್ಯವಿವಾಹ ಮಾಡುತ್ತಿದ್ದರೆ ತಿಳಿವಳಿಕೆ ನೀಡಬೇಕು.
ಸರಕಾರದ ಯಾವುದೇ ಇಲಾಖೆ ಅಧಿಕಾರಿಗಳಿಗೆ ಬಾಲ್ಯವಿವಾಹದ ಮಾಹಿತಿ ಇದ್ದರೆ ತಕ್ಷಣ ಸಂಬಂ ಧಿಸಿದವರಿಗೆ ಮಾಹಿತಿ ನೀಡಬೇಕು. ತಾಲೂಕಿನ 168 ಹಳ್ಳಿಗಳಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರೆ ಕೂಡಲೇ ಕಾರ್ಯಪ್ರವೃತ್ತರಾಗುತ್ತೇವೆ. ಜನರು ಸಹ ನಮ್ಮ ಜತೆಗೆ ಕೈಜೋಡಿಸಿದರೆ ಮಕ್ಕಳ ಭವಿಷ್ಯ ಬದಲಾಯಿಸಬಹುದು.
ಹೆಣ್ಣುಮಕ್ಕಳು ಹೆಚ್ಚು ಶಿಕ್ಷಣವಂತರಾದರೆ ಇಡೀ ಕುಟುಂಬ ಸುಕ್ಷಿತವಾಗುತ್ತದೆ. ಬಾಲ್ಯವಿವಾಹ ತಡೆಗಟ್ಟುವ ಸಂದರ್ಭದಲ್ಲಿ ಅನೇಕ ಅವಮಾನ ಅನುಭವಿಸಿದ್ದೇವೆ. ಗ್ರಾಮದ ಜನರು ನಮ್ಮನ್ನೇ ಅಪರಾಧಿ ಎಂಬಂತೆ ನೋಡುತ್ತಾರೆ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಇಂತಹ ಜಾಗೃತಿ ಕಾರ್ಯಕ್ರಮಗಳು ಅವಶ್ಯಕ ಎಂದು ಹೇಳಿದರು.
ವಕೀಲರಾದ ಶಿವಾನಂದ ಕುಂಟೋಜಿಮಠ, ಸಿವಿಲ್ ನ್ಯಾಯಾಧೀಶ ಶಿವರಾಜ ಸಿದ್ದೇಶ್ವರ, ಎಸ್.ಬಿ. ಯಂಕಂಚಿ, ಎಸ್.ಎಸ್. ಪಾಟೀಲ ಮಾತನಾಡಿದರು. ಸಿಡಿಪಿಒ ಪಾಪಮ್ಮ ಹಾಬಾಳ್ಕರ್ ಅಧ್ಯಕ್ಷತೆ ವಹಿಸಿದ್ದರು.
ಬಸವರಾಜ ಕಂದಗಲ, ರಾಜಶೇಖರ ಶಿಲ್ಪಿ, ಸೋಮು ಸರಾದಾರ, ಗುರುನಾಥ ಬಳಬಟ್ಟಿ, ವಿಜಯಕುಮಾರ ನರಿಬೋಳ, ವೈ.ಜಿ. ಪಾಟೀಲ, ಮಲ್ಲು ಸೊನ್ನದ, ಬಸವರಾಜ ಕೊಂಬಿನ್, ಎಂ.ಐ. ಸೂಗೂರ, ರವಿ ಪಾಟೀಲ, ತ್ರಿವೇಣಿ ಕುಳಗೇರಿ ಇದ್ದರು. ಜ್ಯೋತಿ ಎಂ. ಬೊಮ್ಮನಹಳ್ಳಿ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.