ಬಾಲ್ಯವಿವಾಹ ಮಾಡಿದರೆ ಶಿಕ್ಷಾರ್ಹ ಅಪರಾಧ: ಮಲ್ಲಣ್ಣ
Team Udayavani, Jun 5, 2017, 4:31 PM IST
ಶಹಾಬಾದ: ಗಂಡಿಗೆ 21 ಮತ್ತು ಹೆಣ್ಣಿಗೆ 18 ವರ್ಷ ತುಂಬಿದ ನಂತರ ಮದುವೆ ಮಾಡಬೇಕು. ಒಂದು ವೇಳೆ ಈ ವಯಸ್ಸಿನ ಒಳಗಿರುವ ಗಂಡು ಅಥವಾ ಹೆಣ್ಣು ಮಕ್ಕಳಿಗೆ ಮದುವೆ ಮಾಡಿದರೆ ಅದು ಬಾಲ್ಯವಿವಾಹವಾಗುತ್ತದೆ. ಆದ್ದರಿಂದ ಕಾನೂನಿನ ಬಾಲ್ಯವಿವಾಹ ಕಾಯ್ದೆ ಅರಿತು ಮದುವೆ ಮಾಡಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು.
ನಗರದ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಬಾಲ್ಯ ವಿವಾಹ ನಿಷೇಧ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಂಡಿಗೆ 21 ವರ್ಷ, ಹೆಣ್ಣಿಗೆ 18 ವರ್ಷ ತುಂಬಿದ ವಧುವರರ ವಯಸ್ಸಿನ ದೃಢೀಕರಣ ಪತ್ರ ಪಡೆದು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಕಲ್ಯಾಣ ಮಂಟಪದ ವ್ಯವಸ್ಥಾಪಕರು, ದೇವಾಲಯಗಳ ಅರ್ಚಕರು ಇತರೆ ಸಂಘ ಸಂಸ್ಥೆಗಳ ಆಯೋಜಕರು ವಿವಾಹ ಮಾಡಿಸಲು ಮುಂದಾಗಬೇಕು.
ಬಾಲ್ಯವಿವಾಹ ಕಾಯ್ದೆ 2006ರಲ್ಲಿ ಜಾರಿಯಾಗಿದೆ. ಈ ಕುರಿತು ಪೋಷಕರಿಗೆ ಅರಿವು ಮೂಡಿಸಬೇಕು. ಒಂದು ವೇಳೆ ಬಾಲ್ಯ ವಿವಾಹ ಮಾಡಿದರೆ ಹಾಗೂ ಅವರಿಗೆ ಉತ್ತೇಜನ ನೀಡಿದವರಿಗೆ 2 ವರ್ಷ ಜೈಲು ಶಿಕ್ಷೆ 1 ಲಕ್ಷ ರೂ. ದಂಡ ವಿಧಿಸಲಾಗುವುದು. ಪೋಷಕರು ಚಿಕ್ಕ ಮಕ್ಕಳ ಮದುವೆಗೆ ಒತ್ತಡ ಹೇರದೇ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಶಹಾಬಾದ ವಲಯ ಸಮೂಹ ಸಂಪನ್ಮೂಲ ಅಧಿಕಾರಿ ಶಿವಪುತ್ರ ಕರಣಿಕ್ ಮಾತನಾಡಿದರು. ಅತಿಥಿಗಳಾಗಿ ಬಸವರಾಜ ಬಿರಾಳ, ಶೋಭಾ ಅರಳಿ ಇದ್ದರು. ಇಲಾಖೆ ಮಹಿಳಾ ಮೇಲ್ವಿಚಾರಕಿ ಸರನಾ, ಶಕುಂತಲಾ ಸಾಕರೆ, ಲಕ್ಷಿ, ನೇತ್ರಾವತಿ, ನಾಗಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ಹೊಸ ಸೇರ್ಪಡೆ
ಇಂದು ಜೆಡಿಎಸ್ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು
Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್.ಅಶೋಕ್
Puttur: ಅಂತಾರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
Actor Darshan: ಇಂದು ನಟ ದರ್ಶನ್ ಮೈಸೂರಿಗೆ ಆಗಮನ
Milk Price: ರೈತರಿಂದ ಖರೀದಿಸುವ ಹಾಲಿನ ದರ ಜೂನ್‌ಗೆ ಏರಿಕೆ: ಪಶುಸಂಗೋಪನೆ ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.