ಮಕ್ಕಳಿಗಿನ್ನೂ ಸಿಕ್ಕಿಲ್ಲ ಶೂ-ಸಾಕ್ಸ್
Team Udayavani, Aug 20, 2019, 11:18 AM IST
ಅಫಜಲಪುರ: ಶೂ ವಿತರಣೆ ಮಾಡದೇ ಇರುವುದರಿಂದ ಬರಿಗಾಲಿನಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳು.
ಅಫಜಲಪುರ: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ-ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎಲ್ಲೆಡೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡುತ್ತಿದ್ದರೂ ತಾಲೂಕಿನ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಿಸಿಲ್ಲ.
ತಾಲೂಕಿನ 16 ಕ್ಲಸ್ಟರ್‌ಗಳ 273 ಸರ್ಕಾರಿ ಪ್ರಾಥಮಿಕ ಶಾಲೆ, 31 ಪ್ರೌಢಶಾಲೆ, ಆರು ಅನುದಾನಿತ ಪ್ರಾಥಮಿಕ ಶಾಲೆ, 11 ಪ್ರೌಢಶಾಲೆಗಳ ಒಟ್ಟು ಅಂದಾಜು 26 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆಲ್ಲ ಜೂನ್ ಅಂತ್ಯದ ವೇಳೆಗೆ ಶೂ ಮತ್ತು ಸಾಕ್ಸ್ ವಿತರಿಸಬೇಕಿತ್ತು. ಆದರೆ ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಶೂ, ಸಾಕ್ಸ್ ವಿತರಣೆ ಮಾಡಿಲ್ಲ.
ಆರೋಪ: ತಾಲೂಕಿನಾದ್ಯಂತ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಶೂ, ಸಾಕ್ಸ್ ವಿತರಣೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 1ರಿಂದ 5 ತರಗತಿ ವಿದ್ಯಾರ್ಥಿಗಳಿಗೆ 265 ರೂ. ವೆಚ್ಚದಲ್ಲಿ ಶೂ, ಸಾಕ್ಸ್ ಖರೀದಿಯಾಗಬೇಕು. 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ. ಹಾಗೂ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ವೆಚ್ಚದ ಶೂ, ಸಾಕ್ಸ್ ಖರೀದಿಯಾಗಬೇಕು. ಆದರೆ ಕಳೆದ ಬಾರಿ ಕಡಿಮೆ ಬೆಲೆಯಲ್ಲಿ ಖರೀದಿಸಿದ್ದರಿಂದ ವಿತರಿಸಿದ ಮೂರ್‍ನಾಲ್ಕು ತಿಂಗಳಲ್ಲಿ ಶೂ, ಸಾಕ್ಸ್ ಹರಿದು ಹೋಗಿದ್ದವು. ಎಂದು ಮಕ್ಕಳು ಪಾಲಕರು ಆರೋಪಿಸಿದ್ದಾರೆ.
ಮನವಿ: ಶಾಲೆಗಳು ಆರಂಭವಾಗುವ ಸಮಯದಲ್ಲೇ ಸರ್ಕಾರ ಶೂ, ಸಾಕ್ಸ್ ವಿತರಿಸಬೇಕಿತ್ತು. ಇಲಾಖೆ ಹಾಗೂ ಸರ್ಕಾರ ಎಚ್ಚೆತ್ತುಕೊಂಡು ಪಠ್ಯ-ಪುಸ್ತಕ ಹಾಗೂ ಸಮವಸ್ತ್ರದೊಂದಿಗೆ ಶೂ, ಸಾಕ್ಸ್ ವಿತರಣೆ ಮಾಡಬೇಕು ಎಂದು ಮಕ್ಕಳ ಪಾಲಕರಾದ ಸದ್ದಾಮಹುಸೇನ್ ನಾಕೇದಾರ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.