ನುಡಿಹಬ್ಬಕ್ಕೆ ಚಿತ್ತಾಪುರ ಸಜು
Team Udayavani, Jan 5, 2018, 11:04 AM IST
ಚಿತ್ತಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆಯುವ ನಾಗಾವಿ ನಾಡು ನುಡಿ ಹಬ್ಬಕ್ಕೆ ಪಟ್ಟಣ ನವ ವಧುವಿನಂತೆ ಸಿಂಗಾರಗೊಂಡಿದೆ. ಡಾ| ನೀಲಮ್ಮ ಕತ್ನಳ್ಳಿ ಶಹಾಬಾದ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಶುಕ್ರವಾರ ಬೆಳಗ್ಗೆ 8:00ಕ್ಕೆ ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ, ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ರಾಷ್ಟ್ರ ಹಾಗೂ ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮ್ಮೇಳನಾಧ್ಯಕ್ಷೆ ಡಾ| ನೀಲಮ್ಮ ಕತ್ನಳ್ಳಿ ಶಹಾಬಾದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ನಂತರ ತಾಲೂಕು ಹಾಗೂ ವಿವಿಧ ಕಡೆಗಳಿಂದ ಆಗಮಿಸುವ ಕಲಾ ತಂಡದವರೊಂದಿಗೆ ತಹಶೀಲ್ದಾರ ಕಚೇರಿಯಿಂದ ಆರಂಭಗೊಂಡ ಮೆರವಣಿಗೆಯಲ್ಲಿ ವಿಜ್ಞಾನೇಶ್ವರ ಮಿತಾಕ್ಷರ ಮಹಾ ಮಂಟಪ-ಸಂತ ಚಿತ್ತಾಶಾವಲಿ ಮಹಾದ್ವಾರ ಸೇರಿದಂತೆ ಇನ್ನಿತರ ಮಹಾದ್ವಾರಗಳು ರಾರಾಜಿಸಲಿವೆ. ಅಂಗನವಾಡಿ ಕಾರ್ಯಕರ್ತರು, ಆಟೋ ಚಾಲಕರು ಹಾಗೂ ಯುವಕರು ಬೈಕ್‌ರ್ಯಾಲಿ ನಡೆಸಲಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಸಮ್ಮೇಳನಕ್ಕೆ ಚಾಲನೆ ನೀಡುವವರು. ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಆಶಯ ನುಡಿ ಹೇಳುವರು. ವಿವಿಧ ಶ್ರೀಗಳು ಹಾಗೂ ಸನ್ನತಿ ಪೂಜ್ಯ ಭಂತೆ ಧಮ್ಮಾನಂದ ಅಣದೂರು, ಹಲಕಟ್ಟಾದ ಖಾಜಾ ಸೈಯ್ಯದ್ ಅಬುತುರಾಬ್ ಶಹಾ ಖಾದ್ರಿ ಚಿಸ್ತಿಯಮನಿ ಶರೀಫ್ ಮಾತನಾಡುವರು.
ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸ್ಮರಣ ಸಂಚಿಕೆ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ ಚಿಂಚನಸೂರ ಕವನ ಸಂಕಲನ ಬಿಡುಗಡೆ ಮಾಡುವುದು. ಅಲ್ಲದೆ ವಿವಿಧ ಲೇಖಕರು ಬರೆದ ಪುಸ್ತಕಗಳು ಬಿಡುಗಡೆಯಾಗಲಿವೆ. ಪಕ್ಕದ ಕೆ.ಇ.ಬಿ ಆವರಣದಲ್ಲಿ ಊಟದ ಕೌಂಟರ್ ತೆರೆದಿದ್ದು, ಗಣ್ಯರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ 62 ಮೀಟರ್ ಉದ್ದದ ಕನ್ನಡ ಧ್ವಜ ಪ್ರದರ್ಶಿಸಲಾಗುತ್ತಿದೆ. ನಂತರ ಮಲ್ಲಕಂಬ ಪ್ರದರ್ಶನ ಹಾಗೂ ವಿವಿಧ ಶಾಲೆ-ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಇತಿಹಾಸದ ಪುಟಗಳಲ್ಲಿ ಬರೆದಿಡುವ ದಿನ
ಚಿತ್ತಾಪುರ: ಜನವರಿ ಐದನೇ ದಿನಾಂಕವನ್ನು ಚಿತ್ತಾಪುರ ಇತಿಹಾಸದ ಪುಟಗಳಲ್ಲಿ ಬರೆದು ಇಡುವಂತಹ
ದಿನ. ಕಾರಣ ತಾಲೂಕಿನಲ್ಲಿ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಿ ಶತಮಾನ ಕಳೆದರೂ ಚಿತ್ತಾಪುರ ತಾಲೂಕಿನಲ್ಲಿ ಇಲ್ಲಿವರೆಗೂ ಒಂದು ಕನ್ನಡ ಸಾಹಿತ್ಯ
ಸಮ್ಮೇಳನ ಆಗಿರಲಿಲ್ಲ. ಇದನ್ನು ಮನಗಂಡು ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ 2014ರಲ್ಲಿ ಪ್ರಥಮ ಹಾಗೂ 2016ರಲ್ಲಿ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಸ್ತುತ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲು ಅಣಿಯಾಗುತ್ತಿರುವುದು ಈ ಭಾಗದ ಸಾಹಿತ್ಯಾಭಿಮಾನಿಗಳಿಗೆ ತೀವ್ರ ಹರ್ಷ ತಂದಿದೆ.
ಜ.5ರಂದು ಚಿತ್ತಾಪುರದಲ್ಲಿ ಕನ್ನಡ ಹಬ್ಬದ ವಾತಾವರಣ, ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲ ಕಡೆಯಿಂದ ಕನ್ನಡಿಗರು ಚಿತ್ತಾಪುರದ ಕಡೆಗೆ ನೋಟ ಹರಿಸುವ ದಿನ. ತೃತೀಯ ಸಾಹಿತ್ಯ ಸಮ್ಮೇಳನವಾಗಿದ್ದು ಡಾ. ನೀಲಮ್ಮ ಕತ್ನಳ್ಳಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಸಮ್ಮೇಳನ್ನಕ್ಕಾಗಿ ಶ್ರಮಿಸಿದ್ದಾರೆ.
ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು ನುಡಿ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ
ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ನಡೆಸುವ ಮೂಲಕ ನಾಡಿನ ಮೂಲೆ ಮೂಲೆಗಳಲ್ಲಿ ಸಾಹಿತ್ಯ ಹರಡಿಸಿದೆ. ಕನ್ನಡ ಸಾಹಿತ್ಯ ಲೋಕದ ದಿಗ್ಗಜರು, ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು ಒಂದೇಡೆ ಸೇರಿ, ಪ್ರಚಲಿತ ಸಾಹಿತ್ಯದ ಸ್ಥಿತಿಗತಿ ಚರ್ಚಿಸುವಂತಹ ವೇದಿಕೆಯೇ ಕನ್ನಡ ಸಾಹಿತ್ಯ ಸಮ್ಮೇಳನ.
ಈಗ ನಾಗಾವಿ ನಾಡಿನಲ್ಲಿ ತೃತೀಯ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಇಲ್ಲಿನ ಸಾಹಿತ್ಯಾಭಿಮಾನಿಗಳಿಗೆ
ಹರ್ಷ ತಂದಿದೆ. ಕನ್ನಡ ಹಾಗೂ ಕನ್ನಡಿಗರ ಪರವಾಗಿ ಕನ್ನಡಿಗರನ್ನು ಬೆಸೆಯುತ್ತಾ ಎಚ್ಚರಿಸುತ್ತಾ ಹಾಗೂ ಹುರಿದುಂಬಿಸುತ್ತಾ ಬೆಳೆದುಕೊಂಡು ಬಂದಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನ ಒಳ್ಳೆಯ ಕೆಲಸವಾಗಿದೆ. ಇದು ಹೀಗೆ ಮುಂದುವರೆಯಿಲಿ.
ಕನ್ನಡ ಸಾಹಿತ್ಯದ ಇತಿಹಾಸ ತಿಳಿಸುವ ನಿಟ್ಟಿನಲ್ಲಿ ಕನ್ನಡಿಗರಿಗೆ ಪ್ರೇರಣೆ ನೀಡಬೇಕು ಮತ್ತು ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕು. ಅಂದಾಗ ಸಮ್ಮೇಳನ ಮಾಡಿದ್ದಕ್ಕೂ ಸಾರ್ಥಕ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ.
ಸಚಿವ ಖರ್ಗೆ ಅಭಯಹಸ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನ ತಮ್ಮ ಶಾಸಕತ್ವದ ಅವಧಿಯಲ್ಲಿ ನಡೆಯುತ್ತಿರುವುದರಿಂದ ಸ್ವಾಗತ ಸಮಿತಿ ಅಧ್ಯಕ್ಷರಾದ ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಮಾದರಿ ಸಮ್ಮೇಳನ ಆಗಬೇಕು. ಯಾವುದೇ ಅಡೆತಡೆಗಳು ಬಾರದಂತೆ ಅಚ್ಚುಕಟ್ಟಾಗಿ ಮಾಡಬೇಕು ಎಂಬ ಆಶಯದಿಂದ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ.
ಇಲ್ಲಿಯವರೆಗೆ ಕನ್ನಡದ ಚಟುವಟಿಕೆಗಳು ಮಾಡುವುದಕ್ಕೆ ಚಿತ್ತಾಪುರ ಕೇಂದ್ರಸ್ಥಾನದಲ್ಲಿ ಸ್ಥಳಾವಕಾಶ ಇರಲಿಲ್ಲ. ಇದನ್ನು ಪರಿಗಣನೆಗೆ ತೆಗೆದುಕೊಂಡು ಕನ್ನಡ ಸಾಹಿತ್ಯಕ್ಕೆ ಉತ್ತೇಜನ ನೀಡುವುದಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ಸ್ಥಳಾವಕಾಶ ಹಾಗೂ 50 ಲಕ್ಷ ರೂ. ಅನುದಾನ ಸಹ ನೀಡಿದ್ದಾರೆ. ಪ್ರಸ್ತುತ ತಾಂತ್ರಿಕ ಕಾರಣಗಳಿಂದ ಕಾಮಗಾರಿ ನನೆಗುದಿಯಲ್ಲಿದೆ
ಎಂ.ಡಿ ಮಶಾಖ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.