ಚಿತ್ತಾಪುರದಲ್ಲಿ ಕಮಲ ಅರಳಿಸಲು ತಂತ್ರ
Team Udayavani, Jul 4, 2021, 3:15 PM IST
ವಾಡಿ: ಜಿಪಂ, ತಾಪಂ ಚುನಾವಣೆಗೆ ಕ್ಷೇತ್ರವಾರು ಮೀಸಲು ಪ್ರಕಟಗೊಳ್ಳುತ್ತಿದ್ದಂತೆ ಚಿತ್ತಾಪುರ ವಿಧಾನಸಭೆ ಮೀಸಲು ಮತಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡ ದಿ|ವಾಲ್ಮೀಕಿ ನಾಯಕ ಪುತ್ರ ವಿಠuಲ ನಾಯಕ ರಾಜಕೀಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಹಿರಿಯ ಮುಖಂಡರಾಗಿದ್ದ ವಾಲ್ಮೀಕಿ ನಾಯಕ ಅಗಲಿದ ಮೇಲೆ ಬಿಜೆಪಿಗೆ ನಾಯಕರಾರು ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಮೂಡುತ್ತಿರುವಾಗಲೇ ರಾಜಕೀಯ ಕಣಕ್ಕೆ ಧುಮುಕಿರುವ ಯುವ ಮುಖಂಡ ವಿಠuಲ ನಾಯಕ ಕಾಂಗ್ರೆಸ್ ಪಕ್ಷದ ನಾಗಾಲೋಟಕ್ಕೆ ಬ್ರೇಕ್ ಹಾಕಲು ಪಣ ತೊಟ್ಟಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಡಲು ರಾಜ್ಯ ನಾಯಕರ ಮಾರ್ಗದರ್ಶನಕ್ಕಾಗಿ ಈಗಿನಿಂದಲೇ ಸುತ್ತಾಟ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಅವರನ್ನು ಶನಿವಾರ ಗಾಣಗಾಪುರದ ತೋಟದ ಮನೆಯಲ್ಲಿ ಸ್ಥಳೀಯ ಮುಖಂಡರೊಂದಿಗೆ ಭೇಟಿ ಮಾಡಿದ್ದ ವಿಠuಲ ನಾಯಕ, ಕ್ಷೇತ್ರ ರಾಜಕಾರಣ ಕುರಿತು ಸುದೀರ್ಘ ಮಾತುಕತೆ ನಡೆಸುವ ಮೂಲಕ ಜಿಪಂ-ತಾಪಂ ಚುನಾವಣೆ ಎದುರಿಸಲು ಮಾರ್ಗದರ್ಶನ ಕೋರಿದ್ದಾರೆ.
ಅಲ್ಲದೇ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಜತೆಗಿದ್ದು, ಪ್ರಚಾರ ತಂತ್ರದ ಸೂತ್ರ ತಿಳಿಸುವಂತೆ ಮನವಿ ಮಾಡಿದ್ದಾರೆನ್ನಲಾಗಿದೆ. ಚಿತ್ತಾಪುರದ ಮುಂದಿನ ಶಾಸಕ ಸ್ಥಾನದ ಮೇಲೂ ಕಣ್ಣಿಟ್ಟಿರುವ ವಿಠuಲ ನಾಯಕ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ, ಸಂಸದ ಡಾ| ಉಮೇಶ ಜಾಧವ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.