ಚಿತ್ತಾಪುರ: ಹಿಂದುಳಿದ ವರ್ಗದ ಸದಸ್ಯೆಯರೇ ಇಲ್ಲ!
ಆಕಾಂಕ್ಷಿಗಳಿಗೆ ನಿರಾಸೆಯುಂಟಾದ ಮೀಸಲಾತಿ
Team Udayavani, Mar 13, 2020, 10:39 AM IST
ಚಿತ್ತಾಪುರ: ಪುರಸಭೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲಿ ತೀವ್ರ ಸಂಚಲನ ಮೂಡಿದೆ.
ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳಾ ಮೀಸಲು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮೀಸಲಾತಿ ಪ್ರಕಟವಾಗಿದೆ.
ಒಟ್ಟು 23 ಸದಸ್ಯ ಸ್ಥಾನ ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್ 18, ಬಿಜೆಪಿಯ ಐವರು ಸದಸ್ಯರು ಚುನಾಯಿತರಾಗಿದ್ದಾರೆ. ಆದರೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯುವ ಆಶಯ ಇಟ್ಟುಕೊಂಡಿದ್ದ ಕಾಂಗ್ರೆಸ್‌ನ 18 ಸದಸ್ಯರಲ್ಲಿ ಹಿಂದುಳಿದ ವರ್ಗದ ಮಹಿಳಾ ಸದಸ್ಯೆಯರೇ ಇಲ್ಲದಂತಾಗಿದೆ.
2018 ಅಗಸ್ಟ್ 31ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 18 ಸ್ಥಾನಗಳಲ್ಲಿ ಗೆಲುವು ಸಾ ಸುವುದರ ಮೂಲಕ ಚಿತ್ತಾಪುರ ಪುರಸಭೆ ಭದ್ರಪಡಿಸಿಕೊಂಡಿತ್ತು. ಅಲ್ಲದೇ ಬಿಜೆಪಿ ಐದು ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬಿಜೆಪಿಯಲ್ಲೂ ಒಬ್ಬರೂ ಹಿಂದುಳಿದ ವರ್ಗದ ಮಹಿಳಾ ಸದಸ್ಯರೇ ಇಲ್ಲ.
ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ರಾಜಕೀಯ ಚಟುವಟಿಕೆಗಳು ಸ್ಥಗಿತವಾಗಿದ್ದವು. ಆಯ್ಕೆಯಾದ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಪ್ರಕಟವಾಗುವುದನ್ನೇ ಕಾಯುತ್ತಿದ್ದರು. ಆದರೀಗ ಪ್ರಕಟವಾದ ಮೀಸಲಾತಿ ಆಕಾಂಕ್ಷಿಗಳಿಗೆ ನಿರಾಸೆ ಉಂಟು ಮಾಡಿದೆ.
ಕಳೆದ 2013ರಲ್ಲಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ 15 ಸದಸ್ಯರು ಆಯ್ಕೆಯಾಗಿ ಸ್ಪಷ್ಟ ಬಹುಮತ ಪಡೆದಿದ್ದರು. ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ “ಬಿಸಿಬಿ’ಗೆ ಮೀಸಲಾತಿ ನೀಡಲಾಗಿತ್ತು.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮೊದಲ ಅಧ್ಯಕ್ಷರಾಗಿ ಶಿವಕಾಂತ ಬೆಣ್ಣೂರಕರ್, ಉಪಾಧ್ಯಕ್ಷರಾಗಿ ನಾಗರಾಜ ಕಡಬೂರ ಅಧಿಕಾರ ನಡೆಸಿದ್ದರು. ಎರಡನೇ ಅವ ಗೆ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾಗಿತ್ತು. ಅಧ್ಯಕ್ಷರಾಗಿ ಅನ್ನಪೂರ್ಣ ಹೋತಿಮಡಿ, ಉಪಾಧ್ಯಕ್ಷರಾಗಿ ಮಹ್ಮದ್ ರಸೂಲ್ ಮುಸ್ತಫಾ ಅಧಿಕಾರ ನಡೆಸಿದ್ದರು.
2018ರಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಲ್ಲಿ ಒಬ್ಬರೂ ಹಿಂದುಳಿದ ವರ್ಗದ ಮಹಿಳಾ ಸದರಿಲ್ಲ. ಹೀಗಾಗಿ ಈ ಬಾರಿಯ ಲೆಕ್ಕಾಚಾರವೇ ತಲೆಕೆಳಗಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.