Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Team Udayavani, Oct 20, 2024, 1:30 PM IST

3

ಚಿತ್ತಾಪುರ: ಊರಿಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಕೊಲೆ ಮಾಡಿದ ಘಟನೆ ತಾಲೂಕಿನ ರಾಜೋಳ್ಳಾ ಗ್ರಾಮದಲ್ಲಿ ನಡೆದಿದೆ.

ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (72) ಕೊಲೆಯಾದವರು. ಜಟ್ಟೆಪ್ಪ ದೊಡ್ಡಬೀರಪ್ಪ ಪೂಜಾರಿ (34) ಕೊಲೆ ಆರೋಪಿ.

ದೇವಕಮ್ಮ ಅವರು ಕಳೆದ ನಾಲ್ಕೈದು ದಿನಗಳ ಹಿಂದೆ ತಾಲೂಕಿನ ಲಕ್ಷ್ಮೀಪುರವಾಡಿ ಗ್ರಾಮಕ್ಕೆ ಹೋಗಿ ಶನಿವಾರ ಬೆಳಿಗ್ಗೆ ರಾಜೋಳ್ಳಾ ಗ್ರಾಮಕ್ಕೆ ಬಂದಿದ್ದರು. ಊರಿಗೆ ಏಕೆ ಹೋಗಿದ್ದಿ, ನನ್ನ ಹೊಟ್ಟೆ ಬಟ್ಟೆ ಯಾರು ನೋಡಬೇಕು ಎಂದು ಜಟ್ಟೆಪ್ಪ ತಾಯಿಯೊಂದಿಗೆ ಜಗಳ ಮಾಡಿ, ಕಟ್ಟಿಗೆಯಿಂದ ಹೊಡೆದಿದ್ದಾನೆ. ಭಯದಿಂದ ದೇವಕಮ್ಮ ಅವರು ಮನೆಯಿಂದ ಹೊರಗೆ ಓಡಿ ಹೋಗುವಾಗ ಮನೆ ಹತ್ತಿರ ಕೆಸರಿನಲ್ಲಿ ಬಿದ್ದಿದ್ದಾರೆ. ಮತ್ತೆ ಕಟ್ಟಿಗೆಯಿಂದ ಹೊಡೆದು ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಟ್ಟೆಪ್ಪಗೆ 12 ವರ್ಷಗಳ ಹಿಂದೆ ಹಂದರಕಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದು ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಜಟ್ಟೆಪ್ಪನ ಕಿರುಕುಳ ತಾಳದೆ ಪತ್ನಿ ಮಕ್ಕಳನ್ನು ಕರೆದುಕೊಂಡು ತವರಿನಲ್ಲೇ ಉಳಿದಿದ್ದಾರೆ. ತಾಯಿ ಮತ್ತು ಮಗ ಮಾತ್ರ ಮನೆಯಲ್ಲಿ ವಾಸ ಮಾಡುತ್ತಿದ್ದರು. ತಾಯಿಯೇ ಮಗನಿಗೆ ಅಡುಗೆ ಮಾಡುವುದು, ಬಟ್ಟೆ ತೊಳೆಯುವುದು ಮಾಡುತ್ತಿದ್ದರು ಎಂದು ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ ಅವರು ಮಾಹಿತಿ ನೀಡಿದರು.

ಕ್ರೈಂ ಪಿಎಸ್‌ಐ ಚಂದ್ರಾಮಪ್ಪ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಟಾಪ್ ನ್ಯೂಸ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.