ಚಿತ್ತಾಪುರ: 25 ಗ್ರಾಮಗಳಲ್ಲಿ ಬಿಗಡಾಯಿಸಿದ ನೀರಿನ ಸಮಸ್ಯೆ
Team Udayavani, Feb 18, 2019, 6:21 AM IST
ಚಿತ್ತಾಪುರ: ಮಳೆ ಕೊರತೆ, ಬರ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದು, ಕೊಡ ನೀರಿಗಾಗಿ ಕೆಲಸ ಬಿಟ್ಟು ನೀರು ಹುಡುಕಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕಾದ ತಾಲೂಕು ಆಡಳಿತ ಮೌನವಹಿಸಿದೆ.
ತಾಲೂಕು ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಅಳವಡಿಸಿದ ಕುಡಿಯುವ ನೀರಿನ ಟ್ಯಾಂಕರ್ ನಿರುಪಯುಕ್ತವಾಗಿದ್ದು, ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕುಸಿದಿದೆ. ಬರ ಪೀಡಿತ ಪ್ರದೇಶದಲ್ಲಿ ಹನಿ ನೀರಿಗೂ ಪರದಾಡುವಂತಾಗಿದೆ. ಜನರು ಕೈಯಲ್ಲಿ ಖಾಲಿ ಕೊಡ ಹಿಡಿದುಕೊಂಡು ಹೋಗುವ ದೃಶ್ಯ ಸಾಮಾನ್ಯವಾಗಿದೆ. ಕೆಲವೆಡೆ ಕುಡಿಯುವ ನೀರಿಗೆ ತಾಸುಗಟ್ಟಲೇ ಕಾಯುವಂತಹ ಅನಿವಾರ್ಯತೆ ಎದುರಾಗಿದೆ.
ತಾಲೂಕಿನ ಕಟ್ಟ ಕಡೆಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಯಿಂದಲೂ ನೀರು ಸಿಗುತ್ತಿಲ್ಲ. ಕೊಡ ನೀರು ತರಲು ಹರಸಾಹಸ ಪಡುತ್ತಿದ್ದಾರೆ. ಈ ಬಾರಿ ಸಂಪೂರ್ಣ ಮಳೆ ಕೈಕೊಟ್ಟಿದ್ದರಿಂದ ಚಳಿಗಾಲದಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿತ್ತು. ಇದೀಗ ಆರಂಭದ ಬೇಸಿಗೆಯ ಸುಡುವ ಬಿಸಿಲು ಮತ್ತಷ್ಟು ಪರದಾಡುವಂತೆ ಮಾಡಿದೆ.
ತಾಲೂಕಿನ ಡೋಣಗಾಂವ, ದಿಗ್ಗಾಂವ, ರಾಜೋಳ್ಳಾ, ರಾಮತೀರ್ಥ, ಭಂಕಲಗಾ, ತೆಂಗಳಿ, ಭೀಮನಳ್ಳಿ, ಹೊಸ್ಸುರ್, ಅಳ್ಳೋಳ್ಳಿ, ಅಲ್ಲೂರ್ (ಕೆ), ಅಲ್ಲೂರ್ (ಬಿ), ಪೇಠಶಿರೂರ ಸೇರಿದಂತೆ ಅಂದಾಜು 25ಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದೆ.
ಇನ್ನು ಕೆಲವು ಗ್ರಾಮಗಳಲ್ಲಿ ಮಳೆ ನೀರು ನಿಂತ ತಗ್ಗು, ಕೆರೆಗಳಿಗೆ ಹೋಗಿ ಹಸಿರು ನೀರು ತರುತ್ತಿದ್ದಾರೆ. ಕೆರೆಯಲ್ಲಿ ನಿಂತ ನೀರು ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದರೂ ಅದೇ ನೀರು ಅಮೃತ ಎಂದು ತಿಳಿದು ಉಪಯೋಗಿಸುತ್ತಿರುವುದು ದೊಡ್ಡ ದುರಂತವಾಗಿದೆ. ಬಟ್ಟೆ ಒಗೆಯಲು, ವಾಹನಗಳನ್ನು ತೊಳೆಯಲು, ಜನ ಜಾನುವಾರುಗಳಿಗೆ ಕುಡಿಯಲು ಅದನ್ನೇ ಬಳಸುತ್ತಿರುವುದರಿಂದ ಗ್ರಾಮಸ್ಥರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುತುವರ್ಜಿ ವಹಿಸಿ ಸರ್ಕಾರದಿಂದ ಪ್ರಕೃತಿ ವಿಕೋಪದಡಿ ಪರಿಹಾರ ನಿಧಿ ಮೂಲಕ ತಾಲೂಕಿಗೆ ಲಕ್ಷಾಂತರ ರೂ. ಬಿಡುಗಡೆಗೊಳಿಸಿದ್ದಾರೆ. ಕುಡಿಯುವ ನೀರಿನ ತೊಂದರೆ ಎದುರಿಸುವ ಗ್ರಾಮಗಳಿಗೆ ಸಕಾಲಕ್ಕೆ
ನೀರು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಅಧಿಕಾರಿಗಳು ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುವಂತೆ ಇದ್ದಾರೆ.
ದಿಗ್ಗಾಂವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಈಗಾಗಲೇ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ನೀರಿನ ಸಮಸ್ಯೆ ಆಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿ ಹೊಸದಾಗಿ ಬೋರ್‌ವೆಲ್ ಹಾಕಲು ಕಾರ್ಯಪಡೆ ಸಮಿತಿಯಲ್ಲಿ ಮಂಜೂರು ಮಾಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಮಿತಿಗೆ 50 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು.
ಉಮಾಕಾಂತ ಹಳ್ಳೆ, ತಹಶೀಲ್ದಾರ್
ಕೆಲಸಕ್ಕೆ ಹೋಗಬೇಕು, ಇಲ್ಲಾಂದ್ರೆ ದೂರದ ಬಾವಿ, ಹಳ್ಳ, ಕೊಳ್ಳಗಳಿಗೆ ಹೋಗಿ ನೀರು ತಂದು ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾವು ಶಾಲೆ ಕಲ್ತಿಲ್ಲ. ನಮ್ಮ ಸಮಸ್ಯೆ ಯಾರಿಗೆ ಹೇಳ್ಳೋಣ ಎನ್ನುವುದು ಗೊತ್ತಾಗುತ್ತಿಲ್ಲ. ಇದು ಅಧಿಕಾರಿಗಳಿಗೆ ಗೊತ್ತಾಗಲ್ವಾ?
ಶರಣಮ್ಮ ರಾಜೋಳ್ಳಾ ಗ್ರಾಮದ ನಿವಾಸಿ
ಮಳೆ ನೀರು ನಿಂತ ಕೆರೆಯಲ್ಲಿನ ಹಸಿರು ನೀರೇ ಗ್ರಾಮದ ಜನರಿಗೆ ಅಮೃತವಾಗಿದೆ. ಅದನ್ನೇ ನಾವು ಬಟ್ಟೆ ಒಗೆಯಲು, ಕುಡಿಯಲು, ದನಕರು ತೊಳೆಯಲು ಬಳಸುತ್ತಿದ್ದೇವೆ. ಅದರಲ್ಲಿ ಏನೇನಿದೆ ಗೊತ್ತಿಲ್ಲ. ಆ ನೀರು ಕುಡಿದು ಆಸ್ಪತ್ರೆಗೆ ಹಣ ಹಾಕಿದ್ದಿವಿ. ನಾವು ಸತ್ತರೂ ಯಾರಿಗೂ ನೋವಾಗಲ್ಲ ಬಿಡ್ರಿ.
ಮಲ್ಲಮ್ಮ ಡೋಣಗಾಂವ ಗ್ರಾಮದ ನಿವಾಸಿ
ಎಂ.ಡಿ. ಮಶಾಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.