ಪೌರ ಕಾರ್ಮಿಕರ ನಿಯೋಜನೆ ಅವ್ಯವಹಾರ: ತನಿಖೆಗೆ ಸಚಿವರ ಸೂಚನೆ


Team Udayavani, Jun 16, 2020, 2:24 PM IST

ಪೌರ ಕಾರ್ಮಿಕರ ನಿಯೋಜನೆ ಅವ್ಯವಹಾರ: ತನಿಖೆಗೆ ಸಚಿವರ ಸೂಚನೆ

ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ಕೆಲ ವಾರ್ಡ್‌ಗಳಿಗೆ ಅಗತ್ಯವಿರುವಷ್ಟು ಪೌರ ಕಾರ್ಮಿಕರ ನಿಯೋಜಿಸದೆ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಸೂಚಿಸಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ಬಗ್ಗೆ ಕೂಲಂಕುಶ ವಿಚಾರಣೆ ಮಾಡಿ ಮುಂದಿನ ತಿಂಗಳು ವರದಿ ನೀಡಬೇಕು ಎಂದು ತಾಕೀತು ಮಾಡಿದರು. ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ, ನಾನು ವಾಸವಿರುವ 35ನೇ ವಾರ್ಡ್‌ನಲ್ಲಿ ಕೇವಲ ಮೂರೇ ಮಂದಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರ ನಿಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಶಾಸಕ ಬಸವರಾಜ ಮುತ್ತಿಮೂಡ್‌ ಮಾತನಾಡಿ, ನಮ್ಮ ವಾರ್ಡ್‌ನಲ್ಲಿಯೂ ಇದೇ ಸ್ಥಿತಿ ಎಂದು ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಾರ್ಡ್‌ವಾರು ಪೌರ ಕಾರ್ಮಿಕರ ನೇಮಕ, ನಿಯೋಜನೆ ಮುಂತಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು. ಇದಕ್ಕೂ ಮುನ್ನ, ಮಹಾನಗರ ಪಾಲಿಕೆಯ ಪರಿಸರ ಇಂಜಿನಿಯರ್‌ ಮುನಾಫ್‌ ಪಟೇಲ್‌ ಮಾತನಾಡಿ, ಕಲಬುರಗಿ ಮಹಾನಗರದಲ್ಲಿ 55 ವಾರ್ಡ್‌ಗಳಲ್ಲಿ ಮನೆ-ಮನೆ ಕಸ ಸಂಗ್ರಹಣೆಗೆ 351 ಮಂದಿ, ಕಸಗುಡಿಸುವಿಕೆಗೆ 651, ಸಾಗಾಣಿಕೆ 166 ಮಂದಿ ಸೇರಿ ಒಟ್ಟು 1168 ಪೌರ ಕಾರ್ಮಿಕರಿದ್ದಾರೆ. ನಗರದ ಘನತ್ಯಾಜ್ಯ ನಿರ್ವಹಣೆಗೆ ಪ್ರತಿ ತಿಂಗಳು 2.5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 10 ಪ್ಯಾಕೇಜ್‌ ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಈ ಪೈಕಿ 10 ಸಾವಿರ ಜನರಿರುವ 35ನೇ ವಾರ್ಡ್‌ಗೆ 44 ಪೌರ ಕಾರ್ಮಿಕರ ಅಗತ್ಯತೆ ಇದೆ. ಹಾಲಿ 22 ಮಂದಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ ಸ್ವೀಪಿಂಗ್‌ ಮಾಡುವ ಮಹಿಳಾ ಕಾರ್ಮಿಕರು, ವಾಹನ ಚಾಲಕರು ಕೂಡ ಸೇರಿದ್ದಾರೆ ಎಂದು ಪರಿಸರ ಇಂಜಿನಿಯರ್‌ ಮುನಾಫ್‌ ಪಟೇಲ್‌ ವಿವರಿಸಿದರು. ಇದರಿಂದ ತೃಪ್ತರಾಗದ ಸಚಿವರು, ತನಿಖೆಗೆ ಸೂಚಿಸಿ, ಸಂಜೆ 4 ಗಂಟೆಗೆ ಎಲ್ಲಾ ಪೌರಕಾರ್ಮಿಕರನ್ನು ಪ್ರದರ್ಶಿಸಬೇಕೆಂದು ಸೂಚಿಸಿದರು.

ಹಾಗೆಯೇ ಇನ್ನು ಮುಂದೆ ಆಯಾ ವಾರ್ಡಿನ ಪೌರ ಕಾರ್ಮಿಕರು ಪ್ರತಿನಿತ್ಯ ಆಯಾ ಜನ ಪ್ರತಿನಿ ಧಿಗಳ ಮನೆ ಮುಂದೆ ಸಹಿ ಹಾಕಬೇಕು ಎಂದು ಕಟ್ಟುನಿಟ್ಟಾಗಿ ಹೇಳಿದರು. 2019-20ನೇ ಸಾಲಿನ ಒಟ್ಟು 3790.94 ಲಕ್ಷ ರೂ. ಆಸ್ತಿ ತೆರಿಗೆ ವಸೂಲಾಗಬೇಕಾಗಿದೆ. 2184 ಲಕ್ಷ ರೂ. ತೆರಿಗೆ ಸಂಗ್ರಹಿಸಲಾಗಿದ್ದು, 1606 ಲಕ್ಷ ರೂ. ತೆರಿಗೆ ಬಾಕಿ ಇದೆ. ಶೇ. 57.62 ರಷ್ಟು ಸಂಗ್ರಹವಾಗಿದೆ. 2020-21ನೇ ಸಾಲಿನಲ್ಲಿ ಏಪ್ರಿಲ್‌-1ರಿಂದ ಮೇ 31ರವರೆಗೆ 4715.48 ಲಕ್ಷ ರೂ. ಪೈಕಿ ಕೇವಲ 486.42 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟು 4229.06 ಲಕ್ಷ ರೂ. ತೆರಿಗೆ ವಸೂಲಿ ಬಾಕಿ ಇದೆ ಎಂದು ಪಾಲಿಕೆಯ ಉಪ ಆಯುಕ್ತ ಆರ್‌.ಪಿ. ಜಾಧವ್‌ ಅವರು ಪಿಪಿಟಿ ಮೂಲಕ ವಿವರಿಸಿದರು.

ಈ ಕುರಿತು ಮಾತನಾಡಿದ ಸಚಿವರು, ನಾಗರಿಕರಿಗೆ ರಸ್ತೆ, ನೀರು ಮುಂತಾದ ಮೂಲಸೌಕರ್ಯ ಕಲ್ಪಿಸಲಾಗುತ್ತಿದ್ದು, ಹಾಗೆಯೇ ತೆರಿಗೆ ಸಂಗ್ರಹದಲ್ಲಿ ನಿಗದಿತ ಗುರಿ ಸಾಧಿಸಬೇಕು. ಈ ಬಗ್ಗೆ ಕಂದಾಯ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಿಳಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಲಬುರಗಿ ವಿಭಾಗದ ಇಂಜಿನಿಯರ್‌ ದಿಲೀಪ್‌ ಸಿಂಗ್‌ ಮಾತನಾಡಿ, ನೀರಿನ ಕರದ ಮಾಸಿಕ ಸರಾಸರಿ ಬೇಡಿಕೆ 99.60 ಲಕ್ಷ ರೂ. ಇದ್ದು, ಮಾಸಿಕ ಸರಾಸರಿ 74 ಲಕ್ಷ ರೂ. ವಸೂಲಾಗುತ್ತಿದೆ. ಆದರೆ, ವಿದ್ಯುತ್‌ ಶುಲ್ಕ ಹೊರತುಪಡಿಸಿ ಮಾಸಿಕ ನಿರ್ವಹಣಾ ವೆಚ್ಚಕ್ಕೆಂದೇ 110 ಲಕ್ಷ ರೂ. ಬೇಕಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸುಮಾರು 30 ಲಕ್ಷ ರೂ. ಕೈಯಿಂದಲೇ ಭರಿಸಬೇಕಾಗುತ್ತದೆ. ಇನ್ಮುಂದೆ ಅಗತ್ಯವಿರುವಷ್ಟು ಕರ ಸಂಗ್ರಹಿಸಿ, ವೆಚ್ಚಕ್ಕೆ ಸರಿದೂಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಅವರು, ಕೋವಿಡ್‌-19 ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಮುನ್ನ ಮತ್ತು ನಂತರ ಕೈಗೊಂಡ ಕ್ರಮಗಳನ್ನು ಪಿಪಿಟಿ ಮೂಲಕ ವಿವರಿಸಿದರು.

ಟಾಪ್ ನ್ಯೂಸ್

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.