ವಿಶ್ವಕರ್ಮರಿಗೆ ಕುಲಕಸುಬೆ ಕಾಯಕ
Team Udayavani, Sep 18, 2017, 10:17 AM IST
ಕಲಬುರಗಿ: ತಮ್ಮ ಕುಲಕಸುಬನ್ನೇ ಯಕವನ್ನಾಗಿಸಿಕೊಂಡು ಜೀವಿಸುವುದರೊಂದಿಗೆ ಸಮಾಜಕ್ಕೆ ಶ್ರಮ ಸಂಸ್ಕೃತಿ ಪರಿಚಯಿಸಿದ ಕೊಡುಗೆ ವಿಶ್ವಕರ್ಮ ಸಮಾಜಕ್ಕೆ ಸಲ್ಲಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ರವಿವಾರ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ವಿಶ್ವಕರ್ಮ ಮಹೋತ್ಸವ ಸಮನ್ವಯ ಸಮಿತಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಭಾಗದ ಖ್ಯಾತ ಕಲಾವಿದರಾಗಿದ್ದ ಶಿಲ್ಪಿ ಡಾ| ಎಸ್. ಎಂ.ಪಂಡಿತ ನೆನಪಿನಲ್ಲಿ ಇಲ್ಲಿನ ರಂಗಮಂದಿರಕ್ಕೆ ಅವರ ಹೆಸರಿಡಲಾಗಿದೆ. ಇದೀಗ ರಂಗಮಂದಿರ ಆವರಣದಲ್ಲಿ ಡಾ|ಎಸ್.ಎಂ. ಪಂಡಿತ ಅವರ ಪುತ್ಥಳಿ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಅದನ್ನು ಆದಷ್ಟು ಶೀಘ್ರವಾಗಿ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ಅಶೋಕ ಪೋದ್ದಾರ ಹರಸೂರ ಉಪನ್ಯಾಸ ನೀಡಿ, ಸರ್ವಧರ್ಮ ಸಮನ್ವಯ ಕ್ಷೇತ್ರವಾದ ಸುರಪುರ ತಾಲೂಕಿನ ತಿಂಥಣಿ ಮೌನೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರಾಧಿಕಾರ ರಚಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದರು.
ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ವಿಶ್ವಕರ್ಮ ಪೂಜಾ ಮಹೋತ್ಸವ
ಸಮನ್ವಯ ಸಮಿತಿ ಅಧ್ಯಕ್ಷ ಮೋಹನ ಎಸ್.ಪಂಡಿತ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ
ತೆಗ್ಗೆಳ್ಳಿ, ಶಿಷ್ಠಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್ ಹಾಗೂ ವಿಶ್ವಕರ್ಮ ಸಮಾಜದ ಗಣ್ಯರು ಹಾಜರಿದ್ದರು.
ಶಿವಾನಂದ ಅಣಜಗಿ ಸ್ವಾಗತಿಸಿದರು.
ಇದಕ್ಕೂ ಮುನ್ನ ನಗರದ ಸಂತ್ರಾಸವಾಡಿ ಕಾಳಿಕಾ ಮಂದಿರದಿಂದ ಸರಾಫ ಬಜಾರ, ಕಪಡಾ ಬಜಾರ, ಚೌಕ್
ಪೊಲೀಸ್ ಠಾಣೆ, ಸೂಪರ್ ಮಾರ್ಕೇಟ್, ಜಗತ್ ವೃತ್ತದಿಂದ ಡಾ| ಎಸ್.ಎಂ.ಪಂಡಿತ ರಂಗಮಂದಿರದ ವರೆಗೆ ವಿಶ್ವಕರ್ಮ ಭಾವಚಿತ್ರದ ಮತ್ತು ವಿವಿಧ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.