ಸ್ವಚ್ಛತೆಗೆ ವೈಜ್ಞಾನಿಕ ಕಸ ವಿಲೇವಾರಿ ಅವಶ್ಯ
Team Udayavani, Dec 29, 2021, 8:29 PM IST
ಕಲಬುರಗಿ: ನಮ್ಮ ಸುತ್ತಮುತ್ತಲಿನ ಪರಿಸರ, ವಾತಾವರಣ ಸ್ವತ್ಛತೆಗಾಗಿ ಕಸವನ್ನು ವೈಜ್ಞಾನಿಕ ವಿಲೇವಾರಿ ಮಾಡಬೇಕು ಮತ್ತು ಮನೆಯಲ್ಲೇ ಒಣ ಕಸಿ-ಹಸಿ ಕಸ ವಿಗಂಡಿಸುವುದು ಅಗತ್ಯವಾಗಿದೆ ಎಂದು ಸಹಾಯಕ ಆಯುಕ್ತೆ ಮೋನಾ ರೋತ್ ಹೇಳಿದರು.
ನಗರದ ಟೌನ್ ಹಾಲ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಸಮೀಪ ಮಹಿಳಾ ಪ್ರಗತಿಪರ ಚಿಂತಕರ ವೇದಿಕೆ ಹಾಗೂ ಸ್ತ್ರೀಶಕ್ತಿ ಒಕ್ಕೂಟ, ಈಗಲ್ಸ್ ಯೂತ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಡೆದ ಕಸ ವಿಂಗಡಣೆ ಕುರಿತು ಜನರಲ್ಲಿ ಜಾಗೃತಿ ಕಾರ್ಯಕ್ರಮ, ಕ್ರಿಸ್‌ಮಸ್ ಅಂಗವಾಗಿ ಪೌರಕಾರ್ಮಿಕರಿಗೆ ಸೀರೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾವು ನಮ್ಮ ಮನೆಯಲ್ಲಿ ಉತ್ಪತ್ತಿ ಮಾಡುವ ಕಸವನ್ನು ಬೇರೊಬ್ಬರು ಬಂದು ಎತ್ತಬೇಕು ಎನ್ನುವ ಭಾವನೆ ಇಟ್ಟುಕೊಳ್ಳುವುದು ಸರಿಯಲ್ಲ. ಸ್ವತ್ಛತಾ ಕಾರ್ಯಕ್ಕೆ ಪೌರ ಕಾರ್ಮಿಕರು ನಿಯೋಜನೆಗೊಂಡಿದ್ದಾರೆ. ಆದರೆ, ಅವರೊಂದಿಗೆ ಕೈಜೋಡಿಸಿ ಮನೆಯ ಪರಿಸರ ಸ್ವತ್ಛವಾಗಿ ಇಟ್ಟುಕೊಳ್ಳುವುದು ಎಲ್ಲರ ಜವಾಬ್ದಾರಿ ಆಗಬೇಕೆಂದು ಸಲಹೆ ನೀಡಿದರು. ಕಲಬುರಗಿ ನಗರ ಸ್ವತ್ಛತೆಗಾಗಿ ಮಹಾನಗರ ಪಾಲಿಕೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅವುಗಳ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಜತೆಗೆ ಪೌರಕಾರ್ಮಿಕರ ಆರೋಗ್ಯ ಕಾಳಜಿ ವಹಿಸುವ ದೃಷ್ಟಿಯಿಂದ ಎಲ್ಲರೂ ಕಸ ವಿಲೇವಾರಿ ಶಿಸ್ತು ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಹಸಿ ಕಸ-ಒಣ ಕಸ ವಿಂಗಡಣೆ ಕಡ್ಡಾಯವಾಗಿ ಮಾಡುವಂತೆ ಆಗಬೇಕು ಎಂದರು. ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಡಾ| ಗೀತಾ ಎಸ್.ಪಾಟೀಲ, ಜೈನ ಸಮಾಜ ಸಂಘಟನೆ ಅಧ್ಯಕ್ಷೆ ಶೀತಲ್ ಕುಲಕರ್ಣಿ, ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಹಾಯಕಿ ಜಾನಕಿ ಎಂ.ಗುದ್ದಿ, ಈಗಲ್ಸ್ ಯೂತ್ ಕ್ಲಬ್‌ನ ಅಧ್ಯಕ್ಷೆ ಆಯಾ¾ನ್ ತಾಜೀನ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಕಡ್ಲಾ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಹಿಳಾ ಪ್ರಗತಿಪರ ಚಿಂತಕರ ವೇದಿಕೆ ಅಧ್ಯಕ್ಷೆ ನಾಗರತ್ನಾ ಬಿ.ದೇಶಮಾನೆ ಅಧ್ಯಕ್ಷತೆ ವಹಿಸಿದ್ದರು. ಪೌರ ಕಾರ್ಮಿಕರಿಗೆ ಸೀರೆ ಹಾಗೂ ಬೆಡ್‌ಶೀಟ್ ಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.