ಸಿಎಂ ಗ್ರಾಮ ವಾಸ ನಡೆ-ನುಡಿ
•ಈ ಗ್ರಾಮಗಳ ಸುತ್ತಲೂ ಹರಿಸಬೇಕಿದೆ ಗಮನ•ಕೊಟ್ಟ ಮಾತಿಗೆ ಸಿಗಬೇಕಿದೆ ಮೂರ್ತರೂಪ
Team Udayavani, Jun 18, 2019, 8:49 AM IST
ಕಲಬುರಗಿ: ಮಣ್ಣೂರ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣವಾಗದ್ದರಿಂದ ಕೆಸರು ಗದ್ದೆಯಂತಾದ ರಸ್ತೆ.
ಕಲಬುರಗಿ: ಬರೋಬ್ಬರಿ 13 ವರ್ಷಗಳ ಹಿಂದೆ ಜಿಲ್ಲೆಯ ಅಫಜಲಪುರದ ತಾಲೂಕಿನ ಭೀಮಾ ನದಿ ತಟದ ಗ್ರಾಮ ಮಣ್ಣೂರಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ಮತ್ತೆ ಅದೇ ತಾಲೂಕಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಗ್ರಾಮ ವಾಸ್ತವ್ಯ ಮಾಡುವ ಮೂಲಕ ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಿದ್ದರು. ಆ ಸಂದರ್ಭದಲ್ಲಿ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅನೇಕ ಭರವಸೆ ನೀಡಿದ್ದರು. ಆದರೆ ಸಿಎಂ ವಾಸ್ತವ್ಯದ ಬಳಿಕ ಮಣ್ಣೂರ ಗ್ರಾಮದಲ್ಲಿ ಹೇಳಿಕೊಳ್ಳುವ ಬದಲಾವಣೆಗಳೇನು ಆಗಿಲ್ಲ.
ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಮಣ್ಣೂರ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಯೋಜನೆ ಅಡಿಯಲ್ಲಿ ಗ್ರಾಮದ ಪ್ರತಿಯೊಂದು ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿ, ಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸುವುದಾಗಿತ್ತು. ಆದರೆ ಸುವರ್ಣ ಗ್ರಾಮವಾಗಿ ಆಯ್ಕೆಯಾದ ಬಳಿಕವು ಗ್ರಾಮದಲ್ಲಿ ಹೇಳಿಕೊಳ್ಳುವ ಬದಲಾವಣೆಗಳಾಗಿಲ್ಲ. ಕೆಲವು ಬಡಾವಣೆಗಳಲ್ಲಿ ಮಾತ್ರ ಸಿಸಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಚರಂಡಿಗಳನ್ನು ನಿರ್ಮಿಸಿಲ್ಲ, ಹೀಗಾಗಿ ಚರಂಡಿ ನೀರು ರಸ್ತೆಗಳ ಮೇಲೆ ಹರಿದಾಡುತ್ತಿದೆ. ಬೀದಿ ದೀಪಗಳನ್ನು ಅಳವಡಿಸಿಲ್ಲ. ಸುವರ್ಣ ಗ್ರಾಮವಾದ ಬಳಿಕವೂ ಗ್ರಾಮದ ಸ್ಥಿತಿ ಬದಲಾಗಿಲ್ಲ ಎನ್ನುತ್ತಾರೆ ಮಣ್ಣೂರ ಗ್ರಾಮಸ್ಥರು.
ದೇವಸ್ಥಾನಗಳಿಗೆ ಸಿಕ್ಕಿಲ್ಲ ಕಾಯಕಲ್ಪ: ಮಣ್ಣೂರ ಗ್ರಾಮದಲ್ಲಿ ಐತಿಹಾಸಿಕ ಚನ್ನಕೇಶವ ದೇವಸ್ಥಾನ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನಗಳಿವೆ. ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಸಂದರ್ಭದಲ್ಲಿ ಈ ದೇವಸ್ಥಾನಗಳಿಗೆ ಕಾಯಕಲ್ಪ ಕಲ್ಪಿಸುವ ಭರವಸೆ ನೀಡಿದ್ದರು. ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಸಂಪೂರ್ಣ ವಿದ್ಯುತ್ ಸಂಪರ್ಕ, ಸಿಸಿ ರಸ್ತೆ ನಿರ್ಮಿಸಬೇಕಾಗಿತ್ತು. ಭೀಮಾ ನದಿಯಲ್ಲಿರುವ ಯಲ್ಲಮ್ಮ ದೇವಸ್ಥಾನಕ್ಕೆ ಸುಸಜ್ಜಿತ ಸೇತುವೆ, ತಡೆಗೋಡೆ ಸೇರಿದಂತೆ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸುವುದಾಗಿಯೂ ಭರವಸೆ ನೀಡಿದ್ದರು. ಈಗ ಅವರು ನೀಡಿದ ಭರವಸೆಗಳಲ್ಲಿ ಅರ್ಧದಷ್ಟು ಈಡೇರಿಲ್ಲ. ಐತಿಹಾಸಿಕ ದೇವಸ್ಥಾನಗಳಿಗೆ ಕಾಯಕಲ್ಪ ಕಲ್ಪಿಸುವುದಾಗಿ ಹೇಳಿ ಈಡೇರಿಸದೆ ಹೋಗಿದ್ದಾರೆ ಎನ್ನುವ ಆರೋಪವಿದೆ.
•13 ವರ್ಷಗಳ ಹಿಂದೆ ಮಣ್ಣೂರಿನಲ್ಲಿ ವಾಸ್ತವ್ಯ ಮಾಡಿದ್ದ ಸಿಎಂ
•ಕೊಟ್ಟ ಭರವಸೆಯಲ್ಲಿ ಒಂದನ್ನೂ ಈಡೇರಿಸಿಲ್ಲ
ಅಫಜಲಪುರ ತಾಲೂಕಿನಲ್ಲಿ ವಾಸ್ತವ್ಯ ನಡೆಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಮಂಗಳವಾರ ಬೆಂಗಳೂರಿನಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರೊಂದಿಗೆ ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ತಮ್ಮ ವಾಸ್ತವ್ಯಕ್ಕೆ ಸಮಸ್ಯಾತ್ಮಕ ಸರ್ಕಾರಿ ಶಾಲೆ ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸಲಹೆಯಂತೆ ಬೆಂಗಳೂರಿನಿಂದ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ವಾಸ್ತವ್ಯ ಹೂಡಬೇಕಾದ ಶಾಲೆಯನ್ನು ಪರಿಶೀಲಿಸಿ ಅಂತಿಮಗೊಳಿಸಲಾಗುವು ಎಂದು ಶಾಸಕ ಎಂ.ವೈ. ಪಾಟೀಲ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಗ್ರಾಮಸ್ಥರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದರು. ಆದರೆ ಅವರು ಕೊಟ್ಟ ಭರವಸೆಯ ಅರ್ಧದಷ್ಟು ಈಡೇರಿಲ್ಲ. ವಸತಿ ಯೋಜನೆಗಳಲ್ಲಿ ಮನೆಗಳನ್ನು ನೀಡುವ ಭರವಸೆ ಕೂಡ ನೀಡಿ ಈಗ ಮರೆತಿದ್ದಾರೆ. ಮುಖ್ಯಮಂತ್ರಿಗಳಾಗಿ ಕೊಟ್ಟ ಭರವಸೆಗಳನ್ನು ಮರೆತಿರುವ ಕುಮಾರಸ್ವಾಮಿ ಅವರು ಈಗ ಮತ್ತೂಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. 2006ರಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಅವರು ಈಗ ಮತ್ತೂಮ್ಮೆ ಗ್ರಾಮ ವಾಸ್ತವ್ಯದ ಹೆಸರಲ್ಲಿ ತಾಲೂಕಿಗೆ ಬರುತ್ತಿದ್ದಾರೆ. ಜತೆಗೆ ಮೊದಲು ಕೊಟ್ಟ ಭರವಸೆಗಳನ್ನು ಈಡೇರಿಸುವ ಕಡೆ ಗಮನ ಹರಿಸಬೇಕೆಂದು ಮಣ್ಣೂರ ಗ್ರಾಮದ ಮಾಜಿ ಗ್ರಾಪಂ ಅಧ್ಯಕ್ಷ ಸಿದ್ರಾಮಪ್ಪ ಹಿರೇಕೂರುಬರ್, ಮಾಜಿ ಸದಸ್ಯ ಶ್ರೀಕಾಂತ ನೀವರಗಿ, ಗ್ರಾಮಸ್ಥ ರಾಚಪ್ಪ ಕೊಪ್ಪ ಮತ್ತಿತರರು ಒತ್ತಾಯಿಸಿದ್ದಾರೆ.
•ಹಣಮಂತ ಬೈರಾಮಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.