ಕ್ಷೇತ್ರದ ಅಭಿವೃದ್ಧಿಗೆ ಬದ್ಧ: ಶಾಸಕ ಡಾ| ಅಜಯಸಿಂಗ್
Team Udayavani, Aug 16, 2017, 11:05 AM IST
ಜೇವರ್ಗಿ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಸಾಕಷ್ಟು ಶ್ರಮಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಡಾ| ಅಜಯಸಿಂಗ್ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಮಂಗಳವಾರ ತಾಲೂಕಾಡಳಿತ ವತಿಯಿಂದ ಆಯೋಜಿಸಲಾಗಿದ್ದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರಕಾರ ದೀನ, ದಲಿತ, ಹಿಂದುಳಿದ ವರ್ಗದ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಅದರಲ್ಲೂ ತಾಲೂಕಿಗೆ ಕೋಟ್ಯಂತರ ರೂ.
ಅನುದಾನ ಒದಗಿಸಿದೆ. ಸರ್ಕಾರ ತಾಲೂಕಿಗೆ ಮೂರು ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರಿಗೊಳಿಸಿದೆ. ತಾಲೂಕಿನ ಕೋಳಕೂರ, ಅರಳಗುಂಡಗಿ ಹಾಗೂ ಯಡ್ರಾಮಿಯಲ್ಲಿ ನೂತನ ವಸತಿ ಶಾಲೆಗಳು ಪ್ರಾರಂಭವಾಗಿದೆ ಎಂದು ಹೇಳಿದರು. ಪಟ್ಟಣದಲ್ಲಿ ಟೌನ್ ಹಾಲ್, ಶಾಪಿಂಗ್ ಮಹಲ್, ತರಕಾರಿ ಮಾರುಕಟ್ಟೆ, ಕೆರೆ ನಿರ್ಮಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುತ್ತಿದೆ. ಬರುವ ಒಂದು ವರ್ಷದ ಅವಧಿಯೊಳಗೆ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತೇನೆ ಎಂದರು. ಇದಕ್ಕೂ ಮುನ್ನ ತಹಶೀಲ್ದಾರ ಯಲ್ಲಪ್ಪ ಸುಬೇದಾರ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಶಂಕ್ರಪ್ಪ ಸಾಹು ಹುಗ್ಗಿ , ಮಡಿವಾಳಪ್ಪ ನೆಲೋಗಿ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ, ಜಿಪಂ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ, ಟಿಎಚ್‌ಒ ಡಾ| ಸಿದ್ಧು ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಲಿಂಗರಾಜ ಮೂಲಿಮನಿ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಾ, ಪ್ರಭು ಮಾನೆ, ಬ್ಲಾಕ್
ಕಾಂಗ್ರೆಸ್ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಹಾಗೂ ವಿದ್ಯಾರ್ಥಿಗಳು ಇದ್ದರು. ಮೊರಾರ್ಜಿ ವಸತಿ ಶಾಲೆ ಮಕ್ಕಳು ರೈತ ಗೀತೆ, ನಾಡಗೀತೆ, ರಾಷ್ಟ್ರಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.