ಕ್ಷೇತ್ರದ ಸರ್ವಾಂಗೀಣ ಅಭಿವೃದಿಗೆ ಬದ್ದ
Team Udayavani, Jun 21, 2022, 10:37 AM IST
ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಸದಾ ಕಾಲ ಬದ್ಧನಾಗಿರುತ್ತೆನೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾದ 2019-20ನೇ ಸಾಲಿನ ನಬಾರ್ಡ ಆರ್ ಐಡಿಎಫ್-25 ಯೋಜನೆಯಡಿ ನಗರದ ಸರಕಾರಿ ಬಾಲಕ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ಶಾಲಾ ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದ ಮಧ್ಯ ಭಾಗದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಹಳೆಯ ಕಟ್ಟಡಗಳು ಬೀಳುವ ಹಂತದಲ್ಲಿದ್ದವು. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿತ್ತು. ಅದನ್ನು ಅರಿತು ಸುಮಾರು 1.70 ಕೋಟಿ ರೂ. ಅನುದಾನದಲ್ಲಿ ಸುಮಾರು ಹತ್ತು ಕೋಣೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನರೇಂದ್ರ ವರ್ಮಾ, ಲೋಕೋಪಯೋಗಿ ಇಲಾಖೆ ಎಇ ಜಗನ್ನಾಥ, ಶಿಕ್ಷಣ ಸಂಯೋಜಕ ಶ್ರೀಧರ್, ಮುಖ್ಯಗುರು ಏಮನಾಥ ರಾಠೊಡ, ನಗರಸಭೆ ಸದಸ್ಯರಾದ ಡಾ| ಅಹ್ಮದ್ ಪಟೇಲ್, ಸಾಬೇರಾ ಬೇಗಂ, ಪಾರ್ವತಿ ಪವಾರ, ಜಗದೇವ ಸುಬೇದಾರ, ಸದಸ್ಯ ರವಿ ರಾಠೊಡ, ನಿಂಗಣ್ಣ ಹುಳಗೋಳಕರ್, ಸಿದ್ರಾಮ ಕುಸಾಳೆ, ಸದಾನಂದ ಕುಂಬಾರ, ಭೀಮಯ್ಯ ಗುತ್ತೆದಾರ, ರಾಜೇಶ ಯನಗುಂಟಿಕರ್, ಶರಣು ಪಗಲಾಪೂರ, ರಾಮು ಕುಸಾಳೆ, ಶಿವುಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.