ಪ್ರತಿ ಕ್ಷೇತ್ರದಲ್ಲೂ ಸ್ಪರ್ಧೆ ಅನಿವಾರ್ಯ
Team Udayavani, Sep 9, 2017, 9:56 AM IST
ಕಲಬುರಗಿ: ತಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಅದಕ್ಕಾಗಿ ವಿದ್ಯಾರ್ಥಿಗಳಷ್ಟೆ ಅಲ್ಲ, ನೌಕರಸ್ಥರು ಹಾಗೂ ವಿವಿಧ ಸ್ತರದ ಜನರು ಸ್ಪರ್ಧೆಗಳಿಗೆ ಮಾನಸಿಕ ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಗುವಿವಿ ಕುಲಪತಿ ಪ್ರೊ| ಎಸ್.ಆರ್.ನಿರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಸಾಯಿ ಪ್ರಿಸಿಡೆನ್ಸಿ ಪದವಿ ಕಾಲೇಜಿನ ಸ್ವಾಗತ ಹಾಗೂ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಕ್ಷೇತ್ರದಲ್ಲೂ ಸ್ಪರ್ಧೆ ಇದೆ. ಉತ್ತಮ ಅಂಕಗಳಷ್ಟೆ ಅಲ್ಲದೆ, ಉತ್ತಮ ದೈಹಿಕ, ಆಂಗಿಕ ಭಾಷೆ ಬೇಕಾಗುತ್ತದೆ.
ಅದನ್ನು ನೋಡಿ ಖಾಸಗಿ ವಲಯದಲ್ಲಿ ನೌಕರಿ ಗಿಟ್ಟಿಸಬಹುದು. ಅದರೊಂದಿಗೆ ಉನ್ನತ ಶಿಕ್ಷಣದಲ್ಲೂ ಸ್ಪರ್ಧೆ ಇದೆ. ಈಗಂತೂ ಪ್ರವೇಶಕ್ಕಾಗಿ ಸಿಇಟಿ, ಟಿಇಟಿ ಇತರೆ ಅರ್ಹತಾ ಪರೀಕ್ಷೆಗಳನ್ನು ಬರೆಯುವುದು ಕಡ್ಡಾಯವೂ ಹಾಗೂ ಅನಿವಾರ್ಯವೂ ಆಗಿದೆ ಎಂದರು.
ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ಸಂದರ್ಭದಲ್ಲಿಯೇ ಕಷ್ಟ ಪಟ್ಟು ಓದಿಕೊಂಡು ಸ್ಪರ್ಧೆಗಳಿಗೆ ಅರ್ಹತೆಯನ್ನು ಹಾಗೂ ಸಾಮರ್ಥ್ಯವನ್ನು ಸಂಪಾದಿಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ದತ್ತಾತ್ರೇಯ ಪಾಟೀಲ ಮಾತನಾಡಿ, ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ
ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಶ್ರಮ ವಹಿಸಬೇಕು ಎಂದರು. ಕಾಲೇಜು ಮಟ್ಟದಲ್ಲಿ ಪದವಿ ಪ್ರದಾನ ಕಾರ್ಯಕ್ರಮ
ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಲ್ಲಿಂದ ಹೊರಬರುವ ಕಾಲೇಜು ವಿದ್ಯಾರ್ಥಿಗಳು ಸಮಾಜದಲ್ಲಿ
ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಆಶಯ ವ್ಯಕ್ತಪಡಿಸಿದರು.
ಗುವಿವಿ ಮೌಲ್ಯ ಮಾಪನ ಕುಲಸಚಿವ ಡಾ| ಸಿ.ಎಸ್. ಪಾಟೀಲ, ಜಿ.ಪಂ.ಸದಸ್ಯ ದಿಲೀಪ ಆರ್. ಪಾಟೀಲ,
ನಾರಾಯಣರಾವ ಕಾಳೆ, ಸಂಗಣ್ಣಗೌಡ ಪೋಲಿಸ್ ಪಾಟೀಲ್, ನಾಗೇಶ ಕೊಳ್ಳಿ, ಡಾ| ರಮೇಶ ಲಂಡನಕರ್, ಶಿವಶರಣಪ್ಪ ಸಿಗರಕಂಟಿ, ಡಾ.ಸಂಗಮೇಶ ಹಿರೇಮಠ, ಪ್ರಶಾಂತ ಅತನೂರ, ತೌಸೀಫ್ ಜಿ.ಕೆ., ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.