ವಾಸವದತಾ ವಿರುದ್ಧ ದೂರು

Team Udayavani, Feb 24, 2019, 8:31 AM IST

gul-5.jpg

ಸೇಡಂ: ಮನೆಗೊಂದು ನೌಕರಿ ಕೊಡುವುದಾಗಿ ಭರವಸೆ ನೀಡಿದ್ದ ವಾಸವದತ್ತಾ ಕಾರ್ಖಾನೆ ಮಾತಿಗೆ ತಪ್ಪಿದ ಕಾರಣ ಇಂಜೆಪಲ್ಲಿ ಗ್ರಾಮಸ್ಥರು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅವರಿಗೆ ದೂರು ಸಲ್ಲಿಸಿದ್ದಾರೆ.

2006-07ರಲ್ಲಿ ವಾಸವದತ್ತಾ ಸಿಮೆಂಟ್‌ ಕಾರ್ಖಾನೆಗೆ ಹೊಂದಿಕೊಂಡಿರುವ ಇಂಜೆಪಲ್ಲಿ ಗ್ರಾಮ ತೆರವುಗೊಳಿಸುವಂತೆ ಕಾರ್ಖಾನೆ ಆಡಳಿತ ಮಂಡಳಿ ಸೂಚಿಸಿತ್ತು. ಅಲ್ಲದೇ ಕುರಕುಂಟಾ ಕ್ರಾಸ್‌ ಬಳಿ ಹೊಸ ಮನೆ ನಿರ್ಮಿಸಿಕೊಡುವ ಮತ್ತು ಮನೆಗೊಂದು ನೌಕರಿ ನೀಡುವ ಭರವಸೆ ನೀಡಿತ್ತು. 

ಆದರೆ 170 ಮನೆಗಳ ಪೈಕಿ ಕೇವಲ 60 ಮನೆಗಳನ್ನು ನಿರ್ಮಿಸಿರುವ ಕಾರ್ಖಾನೆ ಮಂಡಳಿ, ಬಡ ಜನರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ. ಅತ್ತ ಹೊಸ ಸೂರಿಗೂ ಸೇರಲಾಗದೆ, ಇತ್ತ ಇರುವ ಮನೆಗಳನ್ನು ರಕ್ಷಿಸಿಕೊಳ್ಳಲಾಗದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ವಾಸವದತ್ತಾ ಸಿಮೆಂಟ್‌ ಕಾರ್ಖಾನೆ ನಡೆಸುವ ಬ್ಲಾಸ್ಟಿಂಗ್‌ನಿಂದ ಮನೆಗಳು ಬಿರುಕು ಬಿಡುತ್ತಿವೆ. ಮಕ್ಕಳು ಶಾಲೆಗಳಿಗೆ ತೆರಳಲು ಹೆದರುತ್ತಿದ್ದಾರೆ. ಮನೆಯಿಂದ ಹೊರಬರಬೇಕಾದರೆ ಜೀವ ಕೈಯಲ್ಲಿಟ್ಟುಕೊಂಡು ತಿರುಗಾಡುವ ಪರಿಸ್ಥಿತಿ ಇದೆ. ಅಲ್ಲದೇ ಸ್ಥಳೀಯ ಕನ್ನಡಿಗರಿಗೆ ನೌಕರಿ ನೀಡುವ ಬದಲು ಬೇರೆ ರಾಜ್ಯದವರಿಗೆ ನೌಕರಿ ನೀಡಿ, ಸ್ಥಳೀಯರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.

15 ದಿನಗಳ ಒಳಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು. ನಿರಂತರ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ವೀರ ಕನ್ನಡಿಗರ ಸೇನೆ ಕಾರ್ಯಕರ್ತರು ಮತ್ತು ಇಂಜೇಪಲ್ಲಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. 

ವೀರ ಕನ್ನಡಿಗರ ಸೇನೆ ರಾಜ್ಯಾಧ್ಯಕ್ಷ ಅಮೃತರಾವ್‌ ಪಾಟೀಲ ಸಿರನೂರ, ರಾಜ್ಯ ಉಪಾಧ್ಯಕ್ಷ ರವಿ ಒಂಟಿ, ಭೀಮಶಾ ಇಂಜಳ್ಳಿ, ಅರ್ಜುನ ಇಂಜಳ್ಳಿ, ಲಕ್ಷ್ಮಣ ತಳವಾರ, ಸಾಯಪ್ಪ ನಾಡೇಪಲ್ಲಿ, ಕಾಶಪ್ಪ ತಳವಾರ, ಗುಡಸಾಬ ಮುಲ್ಲಾ, ನಾಗರಾಜ ಸಜ್ಜನ್‌, ಶಿವಪ್ಪ ತಳವಾರ, ಅರ್ಜುನ ಇಂಜಳ್ಳಿ, ದ್ಯಾವಮ್ಮ ಇಂಜಳ್ಳಿ, ನರಸಮ್ಮ ಆಡಕಿ, ರಾಜಮ್ಮ ಇಂಜಳ್ಳಿ, ಸಿದ್ರಾಮಪ್ಪ ಪಾಟೀಲ, ಹಣಮಂತ ಇಂಜಳ್ಳಿ, ವಿಠ್ಠಲ ಇಂಜಳ್ಳಿ, ಸುಧೀರ ಇಂಜಳ್ಳಿ, ಅಶೋಕ ಇಂಜಳ್ಳಿ, ಇಮಾಮಸಾಬ, ಸುಕ್ರಮಿಯಾ, ಶಾಮಪ್ಪ, ಪರಶುರಾಮ, ಬಸವಣ್ಣ ದಿಗ್ಗಾವಿ, ನಾಗಪ್ಪ ರಂಜೋಳ, ಚಂದಪ್ಪ, ಶರಣಪ್ಪ, ಅಂಜಲಮ್ಮ, ಕಲ್ಲಪ್ಪ ಮಾಡೆನೂರ, ದೇವಿಂದ್ರಪ್ಪ ಡೋಣಗಾಂವ್‌, ಭರತ ಭೂಷಣ, ರಿಷಿ ವಾಡೇಕರ್‌, ಶಿವಕುಮಾರ ದೇವರಮನಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.