ಜಿಇ ವಿರುದ್ಧ ಕಾರ್ಮಿಕ ಉಪ ಆಯುಕ್ತರಿಗೆ ದೂರು


Team Udayavani, May 18, 2018, 10:29 AM IST

gul-2.jpg

ಶಹಾಬಾದ: ನಗರದ ಜಿಇ ಕಾರ್ಖಾನೆಯ ಕಾರ್ಮಿಕ ಮುಖಂಡರ ನಿಯೋಗ ಗುರುವಾರ ಕಲಬುರಗಿ ಉಪ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ಕಂಪನಿಯು ಕಾರ್ಮಿಕರ ಮೇಲೆ ನಡೆಸುತ್ತಿರುವ ಶೋಷಣೆ ಬಗ್ಗೆ ದೂರು ಸಲ್ಲಿಸಿತು.

ನಂತರ ಮಾತನಾಡಿದ ಜಿಲ್ಲಾ ಕಾರ್ಮಿಕ ಮುಖಂಡ ಮಾರುತಿ ಮಾನ್ಪಡೆ, ಯಾವುದೇ ಮುನ್ಸೂಚನೆಯಿಲ್ಲದೇ ನಗರದ ಬಹುರಾಷ್ಟ್ರೀಯ ಜನರಲ್‌ ಇಲೆಕ್ಟ್ರಿಕಲ್‌ (ಜಿಇ) ಕಾರ್ಖಾನೆ ಆಡಳಿತ ಮಂಡಳಿ ಸೋಮವಾರ ಕಾನೂನು ಬಾಹಿರವಾಗಿ
ಕಾರ್ಖಾನೆಯ ಮುಖ್ಯ ದ್ವಾರಕ್ಕೆ ಬೀಗ ಹಾಕಿ, ಕಾರ್ಮಿಕರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಕಾರ್ಖಾನೆಯ 86 ಕಾರ್ಮಿಕರಲ್ಲಿ 33 ಜನರಿಗೆ ಹಣದ ಆಸೆ ತೋರಿಸಿ ಹೊರಹಾಕಿದ್ದಾರೆ.

ಸ್ವಯಂ ನಿವೃತ್ತಿ ಯೋಜನೆ ಮೂಲಕ 176 ಜನ ತಾತ್ಕಾಲಿಕ ಕಾರ್ಮಿಕರನ್ನು ಹಾಗೂ ಉಳಿದ 53ಜನ ಶಾಶ್ವತ ಕಾರ್ಮಿಕರನ್ನು ಹೊರಹಾಕಲು ಮುಂದಾಗಿರುವುದಕ್ಕೆ ಕಾರ್ಮಿಕ ಮುಖಂಡರು ವಿರೋಧ ವ್ಯಕ್ತಡಿಸಿ, ಸಹಾಯಕ ಕಾರ್ಮಿಕ ಆಯುಕ್ತರಿಗೂ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿ ಸಿದಂತೆ ಸಹಾಯಕ ಕಾರ್ಮಿಕ ಆಯುಕ್ತರು ಮೇ 26 ರಂದು ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘಟನೆಯವರಿಗೆ ಸಭೆ ನಿಗದಿಪಡಿಸಿದ್ದರು. ಆದರೆ ಹಠಾತ್‌ನೆ ಕಂಪನಿಯ ಗೇಟ್‌ ಬಂದ್‌ ಮಾಡಿ, ಕಾರ್ಮಿಕರನ್ನು ಶೋಷಿಸುವ ಮೂಲಕ ಪರೋಕ್ಷವಾಗಿ ಬಿಟ್ಟು ಹೋಗುವಂತೆ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ದೂರು ಸ್ವೀಕರಿಸಿದ ಉಪ ಕಾರ್ಮಿಕ ಆಯುಕ್ತರು, ಶೀಘ್ರವೇ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಮಿಕ ಮುಖಂಡ ಸತ್ಯನಾರಾಯಣ ಜೋಷಿ, ಮಹಾದೇವ ಮಾನಕರ್‌, ಭೀಮರಾಯ ಸಿರಗೊಂಡ, ದಾವೂದ್‌ ಹುಸೇನ್‌, ಜಿ.ರಮೇಶ, ಶರಣು ಪಾಟೀಲ, ಸುಧಾಕರ, ಸೂರ್ಯಕಾಂತ ಕಲಾಲ, ನಿಂಗಣ್ಣ ಕಾರೊಳ್ಳಿ, ಸ್ಟಾನಿಲಿ, ಜಾನ್‌, ಮಹೇಶ ಹೀರಾಳ ಹಾಗೂ ಇನ್ನಿತರ ಕಾರ್ಮಿಕರು ಇದ್ದರು. 

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.