ನನೆಗುದಿಗೆ ಬಿದ್ದ ಕಾಮಗಾರಿ ಆರಂಭಿಸಲು ಒತ್ತಾಯ
Team Udayavani, Jul 26, 2022, 2:44 PM IST
ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮಕ್ಕೆ ಕೂಡು ರಸ್ತೆ ಸಂಪರ್ಕ ಡಾಂಬರೀಕರಣ ಕಾಮಗಾರಿಗೆ ಶಾಸಕ ಡಾ| ಅವಿನಾಶ ಜಾಧವ ಚಾಲನೆ ನೀಡಿ ತಿಂಗಳುಗಳೇ ಉರುಳಿದರೂ ಪ್ರಗತಿ ಕಾಣುತ್ತಿಲ್ಲ ಎಂದು ಪೋಲಕಪಳ್ಳಿ ಗ್ರಾಪಂ ಅಧ್ಯಕ್ಷ ಸೈಯದ್ ಜಾಕೀರ ಪಟೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೋಲಕಪಳ್ಳಿ ಗ್ರಾಮಕ್ಕೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವಂತೆ ಮತ್ತು ಮೂಲ ಸೌಕರ್ಯ ಮಂಜೂರಿ ಮಾಡುವಂತೆ ಗ್ರಾಮದ ಪರವಾಗಿ ವಕೀಲರೊಬ್ಬರು ಶಾಸಕರ ಹಾಗೂ ತಹಶೀಲ್ದಾರ್ ಕಚೇರಿ ಎದುರು ಸತ್ಯಾಗ್ರಹ ನಡೆಸಿದ್ದರು. ಆ ನಂತರ ಗ್ರಾಮಸ್ಥರ ಬೇಡಿಕೆಯಂತೆ ತಾಂಡೂರ-ಚಿಂಚೋಳಿ ರಾಜ್ಯಹೆದ್ದಾರಿಯಿಂದ ಪೋಲಕಪಳ್ಳಿ ಅಣವಾರ ಗ್ರಾಮಕ್ಕೆ 2 ಕಿ.ಮಿ ರಸ್ತೆ ಸಂಪರ್ಕ ಕಲ್ಪಿಸುವುದಕ್ಕಾಗಿ ಜಿಪಂ(ಪಿಆರ್‌ಇ) 2021-22ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆ ಅಡಿಯಲ್ಲಿ 94ಲಕ್ಷ ರೂ. ಮಂಜೂರಿಗೊಳಿಸಿ ಕಳೆದ ಮೇ 14ರಂದು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ರಸ್ತೆ ಕಾಮಗಾರಿಯನ್ನು ಮಿರಿಯಾಣ ಗ್ರಾಮದ ಗುತ್ತಿಗೆದಾರರೊಬ್ಬರು ಕೆಲಸ ಆರಂಭಿಸಿ, ಆನಂತರ ಕೆಲವೆಡೆ ತೆಗ್ಗುತೆಗೆದು ನಿಲ್ಲಿಸಿದ್ದಾರೆ. ಇದರಿಂದ ಗ್ರಾಮದೊಳಗೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ರಸ್ತೆಯಲ್ಲಿ ಕಂಕರ ಮೇಲೆದ್ದಿದ್ದರಿಂದ ಜನರಿಗೆ ಓಡಾಡಲು ಬರುತ್ತಿಲ್ಲ. ಇದೇ ರಸ್ತೆ ಮೂಲಕ ಅಣವಾರ, ಪರದಾರ ಮೋತಕಪಳ್ಳಿ ಗ್ರಾಮಕ್ಕೆ ವಾಹನಗಳು ಸಂಚರಿಸುತ್ತಿರುವುದರಿಂದ ದ್ವಿಚಕ್ರ ವಾಹನಗಳ ಸವಾರರು ಬಿದ್ದು ಗಾಯಮಾಡಿಕೊಳ್ಳುತ್ತಿದ್ದಾರೆ. ರಸ್ತೆ ಕೆಸರುಮಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೋಲಕಪಳ್ಳಿ ಗ್ರಾಮಕ್ಕೆ ಕೂಡು ಸಂಪರ್ಕ ರಸ್ತೆ ಕಾಮಗಾರಿಯನ್ನು ತರಾತುರಿಯಲ್ಲಿ ಉದ್ಘಾಟಿಸಿ, ನಂತರ ಕೆಲಸ ಪ್ರಾರಂಭಿಸದೇ ಇರುವುದರಿಂದ ಜನರಿಗೆ ತೀವ್ರ ತೊಂದರೆ ಆಗುತ್ತಿದೆ. ಜಿಪಂ ಎಇಇ ಮತ್ತು ಜೆಇ ಈ ಕುರಿತು ಗಮನಹರಿಸುತ್ತಿಲ್ಲ. ಕೆಸರಿನಲ್ಲಿ ತಿರುಗಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮದ ಮುಖಂಡ ಶಂಕರರಾವ್ ಹಣಮಂತರಾವ ಕೊಡದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.