Congress Govt ಶಕ್ತಿ ಯೋಜನೆಯಿಂದ ದೇವರ ಹುಂಡಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಡಾ. ವೀರೇಂದ್ರ ಹೆಗ್ಗಡೆಯವರೇ ಶಕ್ತಿ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Team Udayavani, Dec 19, 2023, 9:06 PM IST

Congress Govt ಶಕ್ತಿ ಯೋಜನೆಯಿಂದ ದೇವರ ಹುಂಡಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ವಾಡಿ: ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಡಿ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣದಿಂದ ರಾಜ್ಯದ ದೇವಸ್ಥಾನಗಳ ಹುಂಡಿಗಳು ಭರ್ತಿಯಾಗುತ್ತಿವೆ ಎಂದು ಪಂಚಾಯತರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮಂಗಳವಾರ ಕೊಲ್ಲೂರ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕೊಲ್ಲೂರ ಬನ್ನೇಟಿ ಗ್ರಾಮದ ರಸ್ತೆ ಸುಧಾರಣೆ ಸೇರಿದಂತೆ ತರ್ಕಸ್‌ಪೇಟೆ, ಕಮರವಾಡಿ, ಕೈಲಾಸನಗರ, ಕುಂದನೂರ, ರಾಮನಗರ ತಾಂಡಾ, ಕಮರವಾಡಿ ಗ್ರಾಮಗಳಲ್ಲಿ ಒಟ್ಟು 17.98 ಕೋಟಿ ರೂ. ಅನುದಾನದಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಇದ್ದಾಗ ದೇವಸ್ಥಾನಗಳಿಗೆ ಬನ್ನಿ ಎಂದು ಕರೆದರೂ ಭಕ್ತರು ಹೋಗುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ನಾಡಿನ ವಿವಿಧ ಪ್ರಖ್ಯಾತ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಹೀಗೆ ದೇವಸ್ಥಾನಕ್ಕೆ ಭೇಟಿ ನೀಡುವ ಮಹಿಳೆಯರು ಕಾಣಿಕೆಯಾಗಿ ದೇವರ ಹುಂಡಿಗೆ ಹಣ ಹಾಕುತ್ತಾರೆ. ಇದರಿಂದ ದೇವರ ಹುಂಡಿ ಮತ್ತು ಪೂಜಾರಿಗಳ ಆರತಿ ತಟ್ಟೆಗೆ ಅನಿರೀಕ್ಷಿತ ಹಣ ಬೀಳುತ್ತಿದೆ. ಪರಿಣಾಮ ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆಯವರೇ ಸರ್ಕಾರಕ್ಕೆ ಪತ್ರ ಬರೆದು ಶಕ್ತಿ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸುವ ಜತೆಗೆ ಧನ್ಯವಾದ ತಿಳಿಸಿದ್ದಾರೆ ಎಂದರು.

ಬಸವ ತತ್ವದಡಿ ರಾಜ್ಯದ ಪ್ರತಿ ಪಂಚಾಯತಿ ಕೇಂದ್ರ ಸ್ಥಾನಗಳಲ್ಲಿ ಅರಿವು ಕೇಂದ್ರ ಹೆಸರಿನಡಿ ಹೈಬ್ರಿಡ್ ಡಿಜಿಟಲ್ ಗ್ರಂಥಾಲಯ ತೆರೆಯಲಾಗುತ್ತಿದೆ. ಪ್ರತಿ ಗ್ರಾಮಗಳ ಸಂಪರ್ಕ ರಸ್ತೆಗಳ ಸುಧಾರಣೆ ಮತ್ತು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.

ಚಿತ್ತಾಪುರ ತಹಶೀಲ್ದಾರ ಸೈಯದ್ ಷಾಷಾವಲಿ, ಬಿಇಒ ಸಿದ್ದವೀರಯ್ಯ ರುದ್ನೂರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ, ಏಕಲವ್ಯ ಪ್ರಾಂಶುಪಾಲ ಗಂಗಾಧರ ಅಂಕಲಗಿ, ತಾಲೂಕು ಪಶು ಆರೋಗ್ಯಾಧಿಕಾರಿ ಶಂಕರ ಕಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ, ಮುಖಂಡರಾದ ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ಅರವಿಂದ ಚವ್ಹಾಣ, ವೀರಣ್ಣಗೌಡ ಪರಸರೆಡ್ಡಿ, ಕೃಷ್ಣಾರೆಡ್ಡಿ ಈರಾರೆಡ್ಡಿ, ಅಬ್ದುಲ್ ಅಜೀಜ್‌ಸೇಠ ರಾವೂರ, ಶರಣು ಸಾಹು ಬಿರಾಳ, ಗುರುಗೌಡ ಇಟಗಿ, ಬಸವರಾಜಗೌಡ ಮಾರಡಗಿ, ಮಲ್ಲಿನಾಥಗೌಡ ಸನ್ನತಿ, ಭೀಮಾಶಂಕರ ತೇಲಕರ, ಸೂರ್ಯಕಾಂತ ರದ್ದೇವಾಡಿ, ಶರಣಗೌಡ ತರ್ಕಸ್‌ಪೇಟೆ, ಶರಣು ವಾರದ್, ಸಾಯಬಣ್ಣ ಬನ್ನೇಟಿ, ದೇವೆಗೌಡ ತೆಲ್ಲೂರ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಭಾಗಪ್ಪ ಯಾದಗಿರಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.