ದೇಶದಲ್ಲಿ ಕೋವಿಡ್ ಸೋಂಕು, ಸಾವು ಹೆಚ್ಚಾಗಲು ಕಾಂಗ್ರೆಸ್ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
Team Udayavani, May 21, 2021, 1:30 PM IST
ಕಲಬುರಗಿ: ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಾಗಲು ಕಾಂಗ್ರೆಸ್ ಕಾರಣ. ಸೋಂಕಿನಿಂದ ಸಂಭವಿಸುತ್ತಿರುವ ಸಾವುಗಳಿಗೂ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಎರಡು ದಿನಗಳ ಹಿಂದೆ ಕೋವಿಡ್ ನಿಂದ ಮೃತಪಟ್ಟ ಕಲಬುರಗಿ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದತ್ತಾತ್ರೇಯ ತೂಗಾಂವಕರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಶುಕ್ರವಾರ ಬೀದರ್ ಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದೇಶದ ಲಸಿಕೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಈ ಲಸಿಕೆ ಪರಿಣಾಮಕಾರಿ ಇಲ್ಲ. ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ. ಅದು ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೆಲ್ಲ ಅಪಪ್ರಚಾರ ಮಾಡಿದರು. ಇದರಿಂದ ಲಸಿಕೆ ಪಡೆಯಲು ಜನರು ಹಿಂಜರಿದರು. ಅದರ ಪರಿಣಾಮವೇ ಈಗ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಾಗಿದೆ ಎಂದು ದೂರಿದರು.
ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಸತ್ಯದಿಂದ ಕೂಡಿದೆ. ಲಸಿಕೆ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ. ಕಾಂಗ್ರೆಸ್ ಸುಳ್ಳು ಹೇಳಿಕೆಯಿಂದ ಜನರು ಭಯಭೀತರಾಗಿ ಲಸಿಕೆಯಿಂದ ದೂರ ಉಳಿದರು ಎಂದು ಕಿಡಿಕಾರಿದರು.
ಇದನ್ನೂ ಓದಿ:ಗೋವಾ: ಲೈಂಗಿಕ ಕಿರುಕುಳ ಆರೋಪಗಳಿಂದ ಪತ್ರಕರ್ತ ತರುಣ್ ತೇಜ್ ಪಾಲ್ ಖುಲಾಸೆ
ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಫೆಬ್ರವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದು ಜನರಿಗೆ ಪ್ರೇರಣೆ ನೀಡಿದರು. ಆದರೂ, ಜನ ಮೇ ತಿಂಗಳವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಇದು ಸರಿಯಲ್ಲ. ದೇಶ ವಿರೋಧಿ ಕೆಲಸದಲ್ಲಿ ಅವರು ತೊಡಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಕೂಡ ಹೊರತಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯನವರೂ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಸಿದ್ದರಾಮಯ್ಯನವರನ್ನು ಓಡಿಸುತ್ತಾರೆ ಎಂದು ಕಟೀಲ್ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.