ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಳ್ಳಲಿದೆ: ವೇಣುಗೋಪಾಲ
ಚಿಂಚೋಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ•ಮನೆ-ಮನೆಗೆ ಹೋಗಿ ಪ್ರಚಾರ ನಡೆಸಲು ಕಾರ್ಯಕರ್ತರಿಗೆ ಕರೆ
Team Udayavani, May 14, 2019, 4:20 PM IST
ಚಿಂಚೋಳಿ: ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಎಐಸಿಸಿ(ಐ) ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಮಾತನಾಡಿದರು.
ಚಿಂಚೋಳಿ: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಾನ ಉಳಿಸಿಕೊಳ್ಳಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆ ಎಂದು ಎಐಸಿಸಿ(ಐ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಯಾಕೆ? ನಡೆಯುತ್ತಿವೆ ಎಂಬ ವಿಷಯ ಮತದಾರರಿಗೆ ಗೊತ್ತಿರುವ ವಿಷಯ. ಕುಂದಗೋಳ ಕ್ಷೇತ್ರದ ಸಚಿವ ಎಸ್.ಸಿ. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ. ಆದರೆ ಚಿಂಚೋಳಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಡಾ| ಜಾಧವ್ ಅವರು ಬಿಜೆಪಿಗೆ ಹೋಗಿದ್ದರಿಂದ ಮತಕ್ಷೇತ್ರದಲ್ಲಿ ಉಪಚುನಾವಣೆ ಎದುರಿಸಬೇಕಾಗಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದರು. ಬೀದರ ಮತ್ತು ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಮತ್ತು ಡಾ| ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಲಿದ್ದಾರೆ. ಆದರೆ ಕೇಂದ್ರದಲ್ಲಿ ಎನ್‌ಡಿಎ ಸರಕಾರ ಪತನವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಕೆಪಿಸಿಸಿ(ಐ) ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಸಚಿವರಾದ ಪ್ರಿಯಾಂಕ್ ಖರ್ಗೆ, ರಹೀಮಖಾನ್, ರಾಜಶೇಖರ ಪಾಟೀಲ, ಮಾಜಿ ಶಾಸಕ ಕೈಲಾಶನಾಥ ಪಾಟೀಲ, ಬಿ.ಕೆ. ಹರಿಪ್ರಸಾದ, ಬಿ.ಆರ್. ಪಾಟೀಲ, ರಾಜಾರಂಗಪ್ಪ ನಾಯಕ, ಸುಭಾಷ ರಾಠೊಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದಾರ, ತಾಲೂಕಾಧ್ಯಕ್ಷ ಅನಿಲಕುಮಾರವ ಜಮಾದಾರ, ರಾಮಶೆಟ್ಟಿ ಪವಾರ, ತುಕಾರಾಮ ಪವಾರ, ಗೋಪಾಲರಾವ ಕಟ್ಟಿಮನಿ, ಅಮರ ಲೊಡನೋರ, ಕೆ.ಎಂ. ಬಾರಿ, ಅಲ್ಲಮಪ್ರಭು ಪಾಟೀಲ, ಸಂತೋಷ ಗುತ್ತೆದಾರ, ಸವಿತಾ ಸಜ್ಜನಶೆಟ್ಟಿ, ಬಸವರಾಜ ಮಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.