ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಾಲೀಮು ಆರಂಭ


Team Udayavani, Feb 23, 2019, 7:28 AM IST

loka22.jpg

ರಾಮನಗರ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಾಗಿದ್ದು, ಕಾಂಗ್ರೆಸ್‌ ತಾಲೀಮು ಆರಂಭಿಸಿದೆ. ನಗರದಲ್ಲಿ ಜನ ಸಂಪರ್ಕ ಅಭಿಯಾನವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಿದೆ.

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ, ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳು ಹಾಗೂ ಹಾಲಿ ಮೈತ್ರಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ ಲೋಕಸಭೆ ಚುನಾವಣೆಯಲ್ಲಿ ತನ್ನ ಪರ ಮತದಾರರ ಗಮನ ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ನಗರದ ರಾಮದೇವರ ಬೆಟ್ಟದ ರಸ್ತೆಯ ಆರ್ಚ್‌ನ ಶ್ರೀಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾಂಗ್ರೆಸ್‌ ಮುಖಂಡರು ಅಭಿಯಾನಕ್ಕೆ ಚಾಲನೆ ನೀಡಿದರು. 

ಸಾಧನೆ ತಲುಪಿಸಲು ಜನಸಂಪರ್ಕ ಅಭಿಯಾನ: ಅಭಿಯಾನಕ್ಕೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌ ಮಾತನಾಡಿ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಸಾಧನೆಗಳು ಮತ್ತು ರಾಜ್ಯದಲ್ಲಿ ಮೈತ್ರಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾಂಗ್ರೆಸ್‌ ಜನಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ ಎಂದು ತಿಳಿಸಿದರು. 

ಅನುದಾನ ಬಿಡುಗಡೆ ಮಾಡುತ್ತಿಲ್ಲ: ನರೇಗಾದಂತಹ ಅತ್ಯುತ್ತಮ ಕಾರ್ಯಕ್ರಮವನ್ನು ಯುಪಿಎ ತನ್ನ ಆಡಳಿತಾವಧಿಯಲ್ಲಿ ದೇಶಕ್ಕೆ ನೀಡಿದೆ. ಈ ಕಾರ್ಯಕ್ರಮ ಮೂಲಕ ಇಂದು ಗ್ರಾಮೀಣ ಭಾಗದಲ್ಲಿ ರೈತರು ತಮ್ಮ ವೈಯಕ್ತಿಕ ಹಾಗೂ ಸಮುದಾಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆದರೆ, ಎನ್‌ಡಿಎ ಸರ್ಕಾರ ನರೇಗಾ ಕಾರ್ಯಕ್ರಮದ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ನಿರಂತರ ಜನಪರ ಆಂದೋಲನ: ಕಾಂಗ್ರೆಸ್‌ ಪಕ್ಷ ಒಂದು ರಾಜಕೀಯ ಪಕ್ಷ ಮಾತ್ರವಲ್ಲದೆ. ನಿರಂತರವಾದ ಜನಪರ ಆಂದೋಲನವಾಗಿದೆ. ದೇಶದ ಜನರು ಬದಲಾವಣೆ ಬಯಸುತ್ತಿದ್ದಾರೆ. ಪರಂಪರೆಯನ್ನು ಹೊಂದಿರುವ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಉತ್ತಮ ಆಡಳಿತ ನೀಡಬಲ್ಲದು ಎಂದು ಜನರು ನಿರೀಕ್ಷೆ ಮತದಾರರಲ್ಲಿ ಮರುಕಳಿಸಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸಲು ಕಾಂಗ್ರೆಸ್‌ ಪಕ್ಷದ ದೊಡ್ಡ ಜವಾಬ್ದಾರಿಯಾಗಿ ಸ್ವೀಕರಿಸಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲಾ ಬ್ಲಾಕ್‌ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬೂತ್‌ ಮಟ್ಟದ ಅಧ್ಯಕ್ಷರು ಸವಾಲಾಗಿ ಸ್ವೀಕರಿಸಿ, ಚುನಾವಣೆ ಎದುರಿಸಲು ಇಂದಿನಿಂದಲೇ ಸಿದ್ಧರಾಗಬೇಕು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರಧಾನಿಯಿಂದ ಸುಳ್ಳು ಭರವಸೆ: ಸಂಸದ ಡಿ.ಕೆ.ಸುರೇಶ್‌ ಮಾತನಾಡಿ, ಪ್ರಧಾನಿ ಅವರು ಕೇವಲ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ದೇಶದ ಜನರನ್ನು ವಂಚಿಸುತ್ತಿದ್ದಾರೆ. ಕಪ್ಪು ಹಣವನ್ನು ಭಾರತಕ್ಕೆ ವಾಪಸ್ಸು ತರುವುದಾಗಿ ಹೇಳಿದ್ದು, ಜನರ ಖಾತೆಗೆ ದುಡ್ಡು ಹಾಕುತ್ತೇನೆ ಎಂದಿದ್ದು ಹುಸಿಯಾಗಿದೆ. 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯೂ ಹುಸಿಯಾಗಿದೆ ಎಂದು ಲೇವಡಿ ಮಾಡಿದರು. 

ಪಾಕಿಸ್ತಾನದ ಕೃತ್ಯ ಬೆಂಬಲಿಸುವುದಿಲ್ಲ: ದೇಶದಲ್ಲಿನ ಹಲವು ಸಮಸ್ಯೆ ಮತ್ತು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿ, ಭಾರತಕ್ಕೆ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯನ್ನು ಹಾಕಿಕೊಟ್ಟ ಕೀರ್ತಿ ಕಾಂಗ್ರೆಸ್‌ ಪಕ್ಷದ್ದು. ಕಾಂಗ್ರೆಸ್‌ ಪಕ್ಷದಲ್ಲಿಯೂ ಹಿಂದೂಗಳಿದ್ದಾರೆ. ದೇಶ ಪ್ರೇಮ ಎಲ್ಲರಲ್ಲೂ ಇದೆ. ಕಾಂಗ್ರೆಸ್‌ ಪಾಕಿಸ್ತಾನದ ಕೃತ್ಯಗಳನ್ನು ಬೆಂಬಲಿಸುವುದಿಲ್ಲ, ದೇಶದಲ್ಲಿ ಒಗ್ಗಟ್ಟು , ಐಕ್ಯತೆ ಹೆಚ್ಚು ಒತ್ತು ಕೊಟ್ಟ ಪಕ್ಷ ಕಾಂಗ್ರೆಸ್‌ ಎಂದರು. 

22 ಸ್ಥಾನಗಳಲ್ಲಿ ಗೆಲುವು ಸಾಧಿಸಿ: ರಾಜ್ಯದಲ್ಲಿರುವ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ, ದೇಶದ ಹೂಸ ಚೈತನ್ಯವಾಗಿರುವ ರಾಹುಲ್‌ಗಾಂಧಿ ಅವರಿಗೆ ದೇಶವನ್ನು ನಡೆಸುವ ಜವಾಬ್ದಾರಿ ವಹಿಸಬೇಕಾಗಿದೆ. ಯುಪಿಎ ಸರ್ಕಾರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಇಂದಿನ ಮೈತ್ರಿ ಸರ್ಕಾರದ ಯೋಜನೆಗಳನ್ನು ಕಾರ್ಯಕರ್ತರು ಮತ್ತು ಮುಖಂಡರು ಮನೆಮನೆಗಳಿಗೆ ತಲುಪಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಅಭಿಯಾನದಲ್ಲಿ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ್‌, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಇಕ್ಬಾಲ್‌ಹುಸೇನ್‌ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಎನ್‌.ನಾಗರಾಜು, ನಗರಸಭೆ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಮಂಗಳಾ, ಕಿಸಾನ್‌ ಮಜ್ದೂರ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಪುಟ್ಟರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ ಮುಂತಾದವರು ಹಾಜರಿದ್ದರು. 

ಕೆಪಿಸಿಸಿ ಉಪಾಧ್ಯಕ್ಷ ಆರ್‌.ಸುದರ್ಶನ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೂಡಿ ಮನೆಮನೆಗೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮದ ಕರಪತ್ರಗಳನ್ನು ನೀಡಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.