ಕಲಬುರಗಿ ಜಿಲ್ಲೆಗೆ ‘ಕೊರೊನಾ ಹೊಡೆತ’: ಇನ್ನೂ ಒಂದು ತಿಂಗಳು ಅಘೋಷಿತ ಬಂದ್ ಮುಂದುವರಿಕೆ?
Team Udayavani, Mar 16, 2020, 3:57 PM IST
ಕಲಬುರಗಿ: ಕೊರೊನಾ ಸೋಂಕು ನಿಯಂತ್ರಣ ಕಾರಣಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿ ಒಂದು ತಿಂಗಳು ಕಾಲ ಅಘೋಷಿತ ಬಂದ್ ವಾತಾವರಣ ಮುಂದುವರೆಯುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಹೊರಗಡೆ ಬರುವಂತೆ ಮಾಡಿರುವ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಸಹ ಸಾರ್ವಜನಿಕರು ಸ್ಪಂದಿಸಬೇಕು. ಅಗತ್ಯ ವಸ್ತುಗಳಿಗಾಗಿ ಮಾತ್ರ ಜನತೆ ಮನೆಯಿಂದ ಹೊರಬೇಕು. ಅನಗತ್ಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ಮತ್ತೊಮ್ಮೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಮನೆಯಲ್ಲಿ ಪಾರ್ಟಿ ಬೇಡ: ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸಭೆ, ಸಮಾವೇಶ ಹಾಗೂ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮನೆಗಳಲ್ಲಿ ಸ್ನೇಹಿತರು ಹಾಗೂ ಕುಟುಂಬಸ್ಥರನ್ನು ಸೇರಿಸಿಕೊಂಡು ಒಟ್ಟಾಗಿ ಮನೆಯಲ್ಲೂ ಪಾರ್ಟಿ ಮಾಡುವುದು ಬೇಡವೆಂದೂ ಅವರು ಎಚ್ಚರಿಸಿದರು.
ಕೊರೊನಾ ಸೋಂಕು ಕಲಬುರಗಿ ನಗರಕ್ಕೆ ಮಾತ್ರ ಸೀಮಿತವಲ್ಲ. ವಿದೇಶದಿಂದ ಬಂದವರು ನೇರವಾಗಿ ತಮ್ಮ ಊರುಗಳಿಗೆ ತೆರಳಿದ್ದಾರೆ. ಈಗ ಸೋಂಕು ಕಾಣಿಸಿಕೊಂಡ ಇಬ್ಬರಲ್ಲಿ ಒಬ್ಬರು ಚಿತ್ತಾಪುರ ಹಾಗೂ ಮತ್ತೊಬ್ಬರು ಚಿಂಚೋಳಿಗೆ ಸೇರಿದವರು ಆಗಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲೂ ಎಚ್ಚರ ವಹಿಸಬೇಕಾಗುತ್ತದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ 12 ಐಸೋಲೇಟೆಡ್ ಹಾಗೂ ಇಎಸ್ಐ ಆಸ್ಪತ್ರೆಯಲ್ಲಿ 50 ಐಸೋಲೇಟೆಡ್ ವಾರ್ಡ್ ಮತ್ತು 200 ಕ್ವಾರಂಟೈನ್ ವಾರ್ಡ್ ಸಿದ್ಧ ಪಡಿಸಲಾಗಿದೆ. ಪ್ರತಿ ತಾಲೂಕಾ ಕೇಂದ್ರದಲ್ಲಿ ಎರಡರಿಂದ ಐದಕ್ಕೆ ಐಸೋಲೇಟೆಡ್ ವಾರ್ಡ್ ಗಳನ್ನು ಏರಿಸಲಾಗಿದೆ. ವಿದೇಶದಿಂದ ಬಂದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಇದಕ್ಕಾಗಿ 24 ಗಂಟೆ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 08472 – 278604/ 278677 ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಾರ್ವಜನಿಕರು ಸಾಮಾಜಿಕ ಜಾಲತಾಣದ ಸುದ್ದಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಜಿಲ್ಲಾಡಳಿತ ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಿದರು.
ಇನ್ನು, ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಜನರು ಸೇರದಂತೆ ನೀಡಿಕೊಳ್ಳಲು ಕೆಲ ಸರ್ಕಾರಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಉಪನೋಂದಣಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕಂದಾಯ ಇಲಾಖೆಯಲ್ಲಿ ಪಹಣಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ನೀಡುವ ಸೇವೆಗಳನ್ನು ರದ್ದು ಮಾಡಲಾಗಿದೆ. ಕಲಬುರಗಿಗೆ ಬೇರೆ ಜಿಲ್ಲೆಯ ಜನರು ಬರುವುದನ್ನು ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಕಡಿತಗೊಳಿಸಲಾಗಿದೆ.
ರವಿವಾರದಿಂದ ಜಿಲ್ಲಾದ್ಯಂತ ಎಲ್ಲ ರೀತಿಯ ಸಂತೆ, ಜಾತ್ರೆ ಮತ್ತು ಉರುಸುಗಳನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಲದೇ, ಎಲ್ಲ ತರಹದ ಮದ್ಯ ಮಾರಾಟ ಹಾಗೂ ಬಾರ್, ಮತ್ತು ರೆಸ್ಟೋರೆಂಟ್ ಗಳಿಗೂ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.