ಬೈಕ್‌ನಲ್ಲಿ ಶಾಸಕ ಅಜಯಸಿಂಗ್ ನಗರ ಸಂಚಾರ
Team Udayavani, Apr 15, 2017, 3:52 PM IST
ಜೇವರ್ಗಿ: ಪಟ್ಟಣದ 20 ವಾರ್ಡ್‌ಗಳಲ್ಲಿ ಶುಕ್ರವಾರ ಶಾಸಕ ಡಾ| ಅಜಯಸಿಂಗ್ ಪುರಸಭೆ ಸದಸ್ಯರ ಹಾಗೂ ಅಧಿಕಾರಿಗಳ ಜೊತೆ ಬೈಕ್‌ನಲ್ಲಿ ನಗರ ಸಂಚಾರ ಮಾಡಿ ಸ್ಥಳಿಯ ಜನರ ಸಮಸ್ಯೆ ಆಲಿಸಿದರು. ಅಂಬೇಡ್ಕರ್ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಶಿವಪೂಜೆ, ಕಿರಿಯ ಇಂಜಿನೀಯರ್ ನಾನಾಸಾಹೇಬ ಹಾಗೂ ಸದಸ್ಯರ ಜೊತೆ ಬೈಕ್ ಮೂಲಕ ಪ್ರತಿ ವಾರ್ಡ್‌ಗಳಿಗೆ ತೆರಳಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಅಖಂಡೇಶ್ವರ ವೃತ್ತದಿಂದ ಷಣ್ಮುಖ ಶಿವಯೋಗಿ ವಿರಕ್ತ ಮಠದ ವರೆಗೆ ಸಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಶಾಸಕರು ನಗರ ಸಂಚಾರ ಕೈಗೊಂಡ ವೇಳೆ ಬಹುತೇಕ ವಾರ್ಡ್‌ಗಳಲ್ಲಿ ಜನ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಬಗ್ಗೆ ಗಮನಕ್ಕೆ ಬಂತು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ|ಅಜಯಸಿಂಗ್, ಪಟ್ಟಣದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಒದಗಿಸಲಾಗಿದೆ. ಪ್ರತಿ ಗಲ್ಲಿ ಗಲ್ಲಿಯಲ್ಲೂ ಸಿಸಿ ರಸ್ತೆ, ಚರಂಡಿ, ಶೌಚಾಲಯ, ಬೀದಿ ದೀಪ, ಕಸ ವಿಲೇವಾರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಪಟ್ಟಣದ ಸೌಂದಯಿìಕರಣಕ್ಕಾಗಿ ಫುಟ್‌ಪಾತ್ ನಿರ್ಮಾಣ, ಟೌನ್ ಹಾಲ್, ಶಾಪಿಂಗ್ ಮಹಲ್, ತರಕಾರಿ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಬರುವ ವರ್ಷದೊಳಗೆ ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಭರವಸೆ ನೀಡಿದರು. ಸ್ಲಂ ಬೋರ್ಡ್ ವತಿಯಿಂದ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಖಂಡೇಶ್ವರ ವೃತ್ತದಿಂದ ಮಹಾಲಕ್ಷಿ ಮಂದಿರದವರೆಗೆ, ಅಂಚೆ ಕಚೇರಿಯಿಂದ ಜೋಪಡಪಟ್ಟಿಯ ಮದೀನಾ ಮಸೀದಿವರೆಗೆ ಸಿಸಿ ರಸ್ತೆ, ಬೀದಿ ದೀಪ, ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಪುರಸಭೆ ಅಧಿಕಾರಿಗಳಿಗೆ ಪ್ರತಿ ವಾರ್ಡ್‌ಗಳಲ್ಲಿ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆ ಆಲಿಸುವ ಕೆಲಸ ಮಾಡಬೇಕು.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು, ಅವಶ್ಯವಿದ್ದ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು. ಪುರಸಭೆ ಅಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ರವಿ ಕೋಳಕೂರ, ಇಬ್ರಾಹಿಂ ಪಟೇಲ, ಸೋಮಣ್ಣ ಕಲ್ಲಾ, ನಿಂಗಣ್ಣ ರದ್ಧೇವಾಡಗಿ, ಗನಿಸಾಬ ಮಿರ್ಚಿ, ನಿಂಗಣ್ಣ ಹಳಿಮನಿ ಹಾಗೂ ಪುರಸಭೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.