ಸರ್ಕಾರಿ ಕಾಲೇಜು ಅಧ್ಯಾಪಕರ ಹುದ್ದೆಗೆ ಇಲ್ಲೇ ಕೌನ್ಸೆಲಿಂಗ್‌ ಮಾಡಿ


Team Udayavani, Apr 26, 2017, 3:42 PM IST

gul5.jpg

ಕಲಬುರಗಿ: ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ಪದವಿ ಕಾಲೇಜುಗಳಲ್ಲಿನ ಖಾಲಿ ಇರುವ ಅಧ್ಯಾಪಕರ ಹುದ್ದೆಗಳ ಭರ್ತಿ ಹಾಗೂ ವರ್ಗಾವಣೆಗೆ ಕಲಬುರಗಿಯಲ್ಲೇ ಕೌನ್ಸೆಲಿಂಗ್‌ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೈದ್ರಾಬಾದ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘ ಆಗ್ರಹಿಸಿದೆ. 

ಕಾಲೇಜು ಶಿಕ್ಷಣ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು, ಕೌನ್ಸೆಲಿಂಗ್‌ಗಾಗಿ ಬೆಂಗಳೂರಿಗೆ ಹೋಗಿ ಬರುವುದು ಬೇಸಿಗೆ ದಿನಗಳಲ್ಲಿ ಕಷ್ಟ ಸಾಧ್ಯ. ಆದ್ದರಿಂದ ಕಲಬುರಗಿಯಲ್ಲಿಯೇ ನಡೆಸಿ ಎಂದು ಒತ್ತಾಯಿಸಿದ್ದಾರೆ. ಈಗಾಗಲೇ ಕಾಲೇಜು ಶಿಕ್ಷಣ ಇಲಾಖೆ ಅಧ್ಯಾಪಕರ ವರ್ಗಾವಣೆಗೆ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ.

ಇದರಿಂದ ಹಲವಾರು ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಂತಾಗಿದೆ. ಒಂದೇ ಕಡೆ ನಿರ್ದಿಷ್ಟ ಸೇವೆ ಸಲ್ಲಿಸಿದ ಅವಧಿಧಿ ಪ್ರಕಟಿಸದೆ ಸತತ ಸೇವೆ ಎಂದು ನಮೂದಿಸಿ ಗೊಂದಲ ಸೃಷ್ಟಿಸಿದೆ. ಅದರ ಬದಲಾಗಿ ಒಂದೇ ಕಡೆ ಎಷ್ಟು ವರ್ಷ ಸೇವೆ ಸಲ್ಲಿಸಿದ ಅಧ್ಯಾಪಕರು ವರ್ಗಾವಣೆಗೆ ಅರ್ಹರು ಎನ್ನುವುದರ ಬಗ್ಗೆ ಇಲಾಖೆ ನಿಖರ ಮಾಹಿತಿ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ. 

ಇಡೀ ವರ್ಗಾವಣೆ ಕಡ್ಡಾಯ ಹಾಗೂ ಕೋರಿಕೆ ಎಂದು ವರ್ಗೀಕರಿಸಿರುವುದು ಸಮಂಜಸವಾಗಿಲ್ಲ. ಕರ್ನಾಟಕದಲ್ಲಿರುವ ಒಟ್ಟು 412 ಪದವಿ ಕಾಲೇಜುಗಳನ್ನು ಎ.ಬಿ.ಸಿ ಎಂದು ಮೂರು ವಲಯಗಳಾಗಿ ವರ್ಗೀಕರಿಸಿರುವುದು ಅವೈಜ್ಞಾನಿಕ ಅಷ್ಟೇ ಅಲ್ಲ ಅಸಾಂವಿಧಾನಿಕವಾಗಿದೆ. ಕಾಲೇಜುಗಳನ್ನು ಎಬಿಸಿ ಎಂದು ವರ್ಗೀಕರಿಸುವಾಗ ಸಮರ್ಪಕ ಮಾನದಂಡ ಅನುಸರಿಸಿಲ್ಲ. 

ಆದ್ದರಿಂದ ಅವೈಜ್ಞಾನಿಕವಾಗಿ ವರ್ಗೀಕರಿಸಿದ ಮೂರು ವಲಯಗಳನ್ನು ರದ್ದುಪಡಿಸಬೇಕೆಂದು ಅಧ್ಯಾಪಕರ ಸಂಘವು ಈಗಾಗಲೇ ಹಲವು ಭಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ದೂರಿದ್ದಾರೆ. ಒಂದೇ ವಲಯದಲ್ಲಿ ಐದು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಕಡೆ ಸೇವೆ ಸಲ್ಲಿಸಿದ ಅಧ್ಯಾಪಕರನ್ನು ಸಾರ್ವತ್ರಿಕ ವರ್ಗಾವಣೆಗೆ ಅರ್ಹರೆಂದು ಪರಿಗಣಿಸಿ ಅವರ ಹುದ್ದೆಯನ್ನು ಖಾಲಿ ಎಂದು ಪ್ರಕಟಿಸಬೇಕು.

ಪ್ರತಿವರ್ಷ ವರ್ಗಾವಣೆಗೆ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಅಧ್ಯಾಪಕರ ಮಕ್ಕಳ ಶಿಕ್ಷಣ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಸಂವಿಧಾನದ 371(ಜೆ) ತಿದ್ದುಪಡಿಯಾಗಿ ಮೂರು ವರ್ಷ ಕಳೆದರೂ ಕಾಲೇಜು ಶಿಕ್ಷಣ ಇಲಾಖೆ ಸ್ಥಳೀಯ ವೃಂದ ರಚಿಸದೆ ಇರುವುದು ಹೈದ್ರಾಬಾದ ಕರ್ನಾಟಕದ ಬಗ್ಗೆ ಇಲಾಖೆ ಹೊಂದಿರುವ ತಾರತಮ್ಯ ಧೋರಣೆ ತೋರುತ್ತದೆ.

ಇದನ್ನು ಅಧ್ಯಾಪಕರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಹೈದ್ರಾಬಾದ ಕರ್ನಾಟಕ ಪ್ರದೇಶದ ಅಧ್ಯಾಪಕರ ವರ್ಗಾವಣೆಗೆ ಕರ್ನಾಟಕ ಆಡಳಿತ ನ್ಯಾಯ ಪೀಠ (ಕೆಎಟಿ) ನೀಡಿರುವ ತಡೆಯಾಜ್ಞೆ  ಶೀಘ್ರವೇ ತೆರವುಗೊಳಸಬೇಕು. ಹೈಕ ಹೊರತು ಪಡಿಸಿ ಇರುವ ಶೇ.8ರಷ್ಟು ಹುದ್ದೆಗಳಗೆ ಹೈದ್ರಾಬಾದ ಕರ್ನಾಟಕದವರನ್ನು ವರ್ಗಾವಣೆ ಮಾಡಬೇಕು. 

ಕೌನ್ಸೆಲಿಂಗ್‌ ನಡೆಸುವ ದಿನಾಂಕ, ಸ್ಥಳ ಮತ್ತು ಸ್ಪಷ್ಟ ಮಾರ್ಗದರ್ಶಿ ಸೂತ್ರಗಳನ್ನು ಮುಂಚಿತವಾಗಿ ಪ್ರಕಟಿಸಿ ಅಧ್ಯಾಪಕರಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಬೇಕು. ಆದ್ದರಿಂದ ವಿಭಾಗೀಯ ಕೇಂದ್ರವಾದ ಕಲಬುರಗಿಯಲ್ಲೇ ಹೈದ್ರಾಬಾದ ಕರ್ನಾಟಕ ಭಾಗದ ಕಾಲೇಜು ಅಧ್ಯಾಪಕರ ವರ್ಗಾವಣೆಗೆ ಕೌನ್ಸೆಲಿಂಗ್‌ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ, ಕಾರ್ಯದರ್ಶಿ ಡಾ| ಶ್ರೀಮಂತ ಹೋಳ್ಕರ್‌, ಡಾ| ಮಲ್ಲಿಕಾರ್ಜುನ ಶೆಟ್ಟಿ, ಡಾ| ಚಿನ್ನಾ ಆಶಪ್ಪ, ಡಾ| ನಾಗಪ್ಪ ಗೋಗಿ, ಪ್ರೊ| ಮಹಮದ್‌ ಯೂನುಸ್‌, ಡಾ| ನುಝಹತ್‌ ಫಾತಿಮಾ, ಪ್ರೊ| ರವಿ ನಾಯಕ, ಡಾ| ಪ್ರಭುಶೆಟ್ಟಿ , ಗುರುಪಾದಯ್ಯ ಮಠಪತಿ ಮತ್ತಿತರರು ಈ ಸಂದರ್ಭದಲ್ಲಿದ್ದರು.  

ಟಾಪ್ ನ್ಯೂಸ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

1-mnk

ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.