ರಂಜಾನ್‌ ಹಬ್ಬದ ಸಂಭ್ರಮಕ್ಕೆ ಕೋವಿಡ್ ಕರಿನೆರಳು


Team Udayavani, May 25, 2020, 5:46 AM IST

ರಂಜಾನ್‌ ಹಬ್ಬದ ಸಂಭ್ರಮಕ್ಕೆ ಕೋವಿಡ್ ಕರಿನೆರಳು

ಕಲಬುರಗಿ: ಭಾವೈಕ್ಯತೆ ನೆಲೆ ಬೀಡು, ಸೂಫಿ-ಸಂತರ ನಾಡು, ಸೂರ್ಯ ನಗರಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್‌ ಮೇಲೆ ಕೋವಿಡ್  ಕರಿನೆರಳು ಬೀರಿದೆ. ಹೊಸ ಬಟ್ಟೆ ಖರೀದಿಸಿ ಸಂಭ್ರಮಿಸುತ್ತಿದ್ದವರ ಮೊಗದಲ್ಲಿ ಮಂಕು ಕವಿದಿದೆ. ಮನೆಯೊಳಗೆ ಹಬ್ಬವನ್ನು ಸರಳವಾಗಿ ಆಚರಿಸಲು ಮುಸ್ಲಿಮರು ಸಜ್ಜಾಗಿದ್ದಾರೆ.

ಸೌದಿ ಅರೇಬಿಯಾದಿಂದ ಮರಳಿದ್ದ ನಗರದ 76 ವರ್ಷದ ವೃದ್ಧನನ್ನು ದೇಶದಲ್ಲೇ ಮೊದಲು ಕೋವಿಡ್ ಬಲಿ ಪಡೆದಿತ್ತು. ವೃದ್ಧ ಕೋವಿಡ್ ಕ್ಕೆ ತುತ್ತಾದ ನಂತರ ಮಾ.12ರಿಂದಲೂ ಆತಂಕ ಮನೆ ಮಾಡಿದ್ದು, ನಿತ್ಯವೂ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಜನರು ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಮಹಾಮಾರಿ ರೋಗದ ಭೀತಿ ಹಿನ್ನೆಲೆಯಲ್ಲಿ ಯುಗಾದಿ, ಗುಡ್‌ಫ್ತೈಡೆ, ಮಹಾವೀರ ಜಯಂತಿ ಹಾಗೂ ಬುದ್ಧ ಜಯಂತಿ ಹಬ್ಬಗಳನ್ನು ಸರಳವಾಗಿ ಆಚರಿಸಲಾಗಿತ್ತು. ಅದರಂತೆ ಸೋಮವಾರ (ಮೇ 25) ರಂಜಾನ್‌ ಹಬ್ಬವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನ, ಮಸೀದಿ, ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಇಫ್ತಾರ್‌ ಕೂಟಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಕಾಣದ ಸಂಭ್ರಮ: ರಂಜಾನ್‌ ಮುಸ್ಲಿಮರ ದೊಡ್ಡ ಹಾಗೂ ಶ್ರೇಷ್ಠ ಹಬ್ಬ. ತಿಂಗಳ ಪೂರ್ತಿ ಉಪವಾಸ, ಪ್ರಾರ್ಥನೆ, ದಾನ-ಧರ್ಮ ಮಾಡಿ ಆಚರಿಸುವ ಪವಿತ್ರ ಹಬ್ಬ. ರಂಜಾನ್‌ ಮಾಸದುದ್ದಕ್ಕೂ ಖರೀದಿ, ಮಸೀದಿಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮತ್ತು ಇಫ್ತಾರ್‌ ಕೂಟಗಳು ನಡೆಯುತ್ತಿದ್ದವು. ಆದರೆ, ಈ ವರ್ಷ ಹಬ್ಬದ ಸಂಭ್ರಮವನ್ನೇ ಕೋವಿಡ್ ಕಸಿದಿದೆ.

ರಂಜಾನ್‌ ಮುನ್ನಾ ದಿನದ ರಾತ್ರಿಯಂತೂ ಸೂಪರ್‌ ಮಾರ್ಕೆಟ್‌ ಅಂಗಡಿಗಳಲ್ಲಿ ಖರೀದಿಗೆ ಕುಟುಂಬ ಸಮೇತರಾಗಿ ಜನರು ಮುಗಿಬೀಳುತ್ತಿದ್ದರು. ಹೊಸ ಬಟ್ಟೆ, ಚಪ್ಪಲಿ, ಶೂ, ಟೋಪಿ, ಸುಗಂಧ ದ್ರವ್ಯದ ಅಂಗಡಿಗಳು ತುಂಬಿ ತುಳುಕುತ್ತಿದ್ದವು. ಬಿರಿಯಾನಿ, ಸಿರಕುಂಬ ಹಾಗೂ ವಿಶಿಷ್ಟ ಖಾದ್ಯಗಳಿಗಾಗಿ ಒಣದ್ರಾಕ್ಷಿ, ಬಾದಾಮಿ, ಖರ್ಜೂರ, ಗೋಡಂಬಿ, ಗಸಗಸೆ, ಶಾವಿಗೆ ಮುಂತಾದ ಸಾಮಗ್ರಿಗಳಿಗೆ ಇನ್ನಿಲ್ಲದ ಬೇಡಿಕೆ ಬರುತ್ತಿತ್ತು. ಬಳೆ, ಫ್ಯಾನ್ಸಿ ಐಟಂಗಳ ಖರೀದಿ ಜೋರಾಗಿಯೇ ನಡೆಯುತ್ತಿತ್ತು. ಪ್ರತಿವರ್ಷ ಹಬ್ಬದ ಹೊತ್ತಲ್ಲಿ ಕಾಲಿಡಲು ಜಾಗವಿರುತ್ತಿರಲಿಲ್ಲ. ಈ ಬಾರಿ ಎಲ್ಲ ಅಂಗಡಿಗಳು ಮುಚ್ಚಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ. ಹಬ್ಬದ ಸಂಭ್ರಮವೇ ಕಾಣುತ್ತಿಲ್ಲ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರಳವಾಗಿ ಮನೆಯಲ್ಲೇ ಹಬ್ಬ ಆಚರಿಸುತ್ತಿದ್ದೇವೆ ಎನ್ನುತ್ತಾರೆ ಮುಸ್ಲಿಂ ಮುಖಂಡರು. ಹಬ್ಬವನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ 15 ದಿನಗಳ ಹಿಂದೆಯೇ ಪ್ರಮುಖ ಮುಖಂಡರು ನಿರ್ಧಾರ ತೆಗೆದುಕೊಂಡಿದ್ದರು. ಅಂತೆಯೇ ವರ್ತಕರು, ಅಂಗಡಿಗಳ ಮಾಲೀಕರು ರಂಜಾನ್‌ ಮುಗಿಯುವ ವರೆಗೆ ಬಟ್ಟೆ, ಚಪ್ಪಲಿ ಅಂಗಡಿಗಳನ್ನು ತೆರೆಯದಿರಲು ನಿರ್ಣಯ ಕೈಗೊಂಡಿದ್ದರು. ಕೆಲ ವರ್ತಕರು ಅಂಗಡಿಗಳಿಗೆ ಅವಕಾಶ ನೀಡಬೇಕೆಂದು ಕೋರಿದ್ದರು. ಆದರೆ, ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಮೇಲಾಗಿ ರವಿವಾರ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗಿದ್ದರಿಂದ ನಗರ ಸ್ತಬ್ಧಗೊಂಡಿತ್ತು. ಹೀಗಾಗಿ ಮುಸ್ಲಿಂ ಚೌಕ್‌, ಶೇಖ್‌ ರೋಜಾ, ಎಂಎಸ್‌ಕೆ ಮಿಲ್‌, ಸ್ಪೇಷನ್‌ ಪ್ರದೇಶದಲ್ಲಿ ಮಾಂಸ ಮಾರಾಟವೂ ಇರಲಿಲ್ಲ.

ರಂಜಾನ್‌ ಹಬ್ಬವನ್ನು ಸರಳವಾಗಿ ಮನೆಯಲ್ಲೇ ಆಚರಿಸಲು ತಯಾರಿ ನಡೆದಿದೆ. ಪ್ರಾರ್ಥನೆ ಸಹ ಮನೆಯಲ್ಲೇ ನಡೆಯಲಿದ್ದು, ಮಸೀದಿಗಳಲ್ಲಿ ಮೌಲ್ವಿಗಳು ಹಾಗೂ ಸಿಬ್ಬಂದಿ ಮಾತ್ರವೇ (ಐದರಿಂದ ಆರು ಜನ) ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇಸ್ಲಾಂ ಧರ್ಮ ಹೇಳುವುದು ಜೀವ ರಕ್ಷಣೆಯ ಬಗ್ಗೆಯೇ. ಅದರಂತೆ ಸರ್ಕಾರ ಸಹಿತ ಲಾಕ್‌ ಡೌನ್‌ ಜಾರಿ ಮಾಡಿದೆ. ಆದ್ದರಿಂದ ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. -ನಿಜಾಮ ಬಾಬಾ, ಕೆಬಿಎನ್‌ ದರ್ಗಾ

ಡಾ| ಸೈಯದ್‌ ಸಜ್ಜಾದೆ ಸಂದೇಶ ; ರಂಜಾನ್‌ ಹಬ್ಬದಂದು ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಖ್ವಾಜಾ ಬಂದೇ ನವಾಜ್‌ ದರ್ಗಾ ಮುಖ್ಯಸ್ಥ ಡಾ| ಸೈಯದ್‌ ಶಾ ಖುಸ್ರೋ ಹುಸೇನಿ ಸಜ್ಜಾದೆ ನಸೀನ್‌ ಮಾರ್ಗದರ್ಶನದಲ್ಲಿ ಮೌಲ್ವಿಗಳು ವಿಡಿಯೋ ಸಂದೇಶ ಸಿದ್ಧಪಡಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಮಾಡುವ ಪ್ರಾರ್ಥನೆಯನ್ನು ಮನೆಯಲ್ಲಿ ಹೇಗೆ ಮಾಡಬೇಕೆಂಬ ಕುರಿತು ವಿಡಿಯೋದಲ್ಲಿ ವಿವರಿಸಲಾಗಿದೆ. ಜತೆಗೆ ಕೋವಿಡ್ ರೋಗದಿಂದ ನಮ್ಮನ್ನು ರಕ್ಷಿಸಿಕೊಳ್ಳುವುದು ಸೇರಿದಂತೆ ಮತ್ತೂಬ್ಬರನ್ನು ರಕ್ಷಣೆ ಮಾಡುವುದು ಮುಖ್ಯವಾಗಿದೆ. ಹೀಗಾಗಿ ಮನೆಯಲ್ಲೇ ಹಬ್ಬದ ಪ್ರಾರ್ಥನೆ ಸಲ್ಲಿಸುವಂತೆ ಡಾ| ಸೈಯದ್‌ ಶಾ ಖುಸ್ರೋ ಹುಸೇನಿ ಸಜ್ಜಾದೆ ನಸೀನ್‌ ಸಂದೇಶ ನೀಡಿದ್ದಾರೆ.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.