ಅನಾರೋಗ್ಯದಿಂದ ಬಳಲುತ್ತಿದ್ದ ಒಂದು ವರ್ಷದ ಮಗುವಿಗೂ ಕೋವಿಡ್-19 ಸೋಂಕು!
Team Udayavani, Apr 15, 2020, 1:34 PM IST
ಸಾಂದರ್ಭಿಕ ಚಿತ್ರ
ಕಲಬುರಗಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಒಂದು ವರ್ಷದ ಮಗುವಿಗೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕಲಬುರಗಿ ತಾಲೂಕಿನ ಕವಲಗಾ (ಕೆ) ಗ್ರಾಮದ ಮಗು ಕೆಲ ದಿನಗಳಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿತ್ತು. ಹೀಗಾಗಿ ಪೋಷಕರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ತೋರಿಸಿದ್ದರು.
ಆದರೆ, ಕೋವಿಡ್-19 ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಜಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
ಅಲ್ಲಿಂದ ಮಗುವಿನ ರಕ್ತ ಮತ್ತು ಗಂಟಲು ದ್ರವ ಮಾದರಿಯನ್ನು ಪಡೆದ ವೈದ್ಯರು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಇದೀಗ ಪ್ರಯೋಗಾಲಯದ ವರದಿಯಲ್ಲಿ ಮಗುವಿಗೆ ಕೋವಿಡ್-19 ಪಾಸಿಟಿವ್ ಇರೋದು ಖಚಿತವಾಗಿದೆ.
ಮಗುವಿನ ಪೋಷಕರು ಮತ್ತು ಕುಟುಂಬದವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ಗೊತ್ತಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೋಷಕರು ಹಾಗೂ ಮಗುವಿನ ಈ ಮೊದಲು ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರನ್ನು ತಪಾಸಣೆಗೆ ಒಳಪಡಿಸಲು ಜಿಲ್ಲಾಡಳಿತ ಮುಂದಾಗಿದೆ.
ಇನ್ನು, ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ 17 ಜನರಲ್ಲಿ ಮೂವರು ಮಕ್ಕಳಿಗೆ ಮಹಾಮಾರಿ ರೋಗ ಕಾಣಿಸಿಕೊಂಡಿರುವುದು ನಾಗರಿಕರಿಗೆ ಆಘಾತ ಉಂಟು ಮಾಡಿದೆ. ಈ ಹಿಂದೆ ವಾಡಿ ಪಟ್ಟಣದ ಎರಡು ವರ್ಷದ ಮಗು ಹಾಗೂ ಮಂಗಳವಾರ ಹತ್ತು ವರ್ಷದ ಬಾಲಕಿಗೆ ಕೋವಿಡ್-19 ಸೋಂಕು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.