ಐಜಿ ಕಚೇರಿಗೂ ಕಾಲಿಟ್ಟ ಕೋವಿಡ್

Team Udayavani, Jul 13, 2020, 2:05 PM IST

ಐಜಿ ಕಚೇರಿಗೂ ಕಾಲಿಟ್ಟ ಕೋವಿಡ್

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಹಾವಳಿ ವ್ಯಾಪಕವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಐಜಿ ಕಚೇರಿಗೂ ಮಹಾಮಾರಿ ರೋಗ ಕಾಲಿಟ್ಟಿದೆ.

ರವಿವಾರ ಮತ್ತೆ 79 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಕಲಬುರಗಿ ನಗರ ಮತ್ತು ತಾಲೂಕು ವ್ಯಾಪ್ತಿಯಲ್ಲೇ 69 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ಚಿಂಚೋಳಿ ತಾಲೂಕಿನಲ್ಲಿ ಮೂವರು, ಅಫಜಲಪುರ ಮತ್ತು ಆಳಂದ ತಾಲೂಕಿನಲ್ಲಿ ತಲಾ ಇಬ್ಬರು, ಚಿತ್ತಾಪುರ, ಜೇವರ್ಗಿ ತಾಲೂಕಿನಲ್ಲಿ ಒಬ್ಬರಿಗೆ ಕೋವಿಡ್‌ ಕಾಣಿಸಿಕೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,103ಕ್ಕೆ ಏರಿಕೆಯಾಗಿದೆ. 79 ಸೋಂಕಿತರಲ್ಲಿ 43 ಜನರ ಕೋವಿಡ್‌ ಸೋಂಕಿನ ಮೂಲವೇ ಗೊತ್ತಾಗಿಲ್ಲ. ಉಳಿದ 30 ಮಂದಿ ಸೋಂಕಿತರು ಉಸಿರಾಟ ಮತ್ತು ಜ್ವರದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರ ಮತ್ತು ಬಿಹಾರ ಪ್ರವಾಸ ಹಿನ್ನೆಲೆಯ ತಲಾ ಮೂವರಿಗೂ ಸೋಂಕು ಕಾಣಿಸಿಕೊಂಡಿದೆ.

ಇವರಲ್ಲಿ 23 ಮಹಿಳೆಯರು ಸೇರಿದ್ದು, 10 ಮಕ್ಕಳೂ ಇದ್ದಾರೆ. ಪೊಲೀಸ್‌ ಭವನದಲ್ಲಿ ಈಗಾಗಲೇ ಕೋವಿಡ್‌ ವಕ್ಕರಿಸಿದ್ದು, ಎಸ್‌ಪಿ ಕಚೇರಿಯ ಏಳು ಜನರಿಗೆ ಸೋಂಕು ಹರಡಿತ್ತು. ಈಗ ಇದೇ ಭವನದಲ್ಲಿರುವ ಐಜಿ ಕಚೇರಿಗೂ ಮಹಾಮಾರಿ ರೋಗ ಲಗ್ಗೆ ಇಟ್ಟಿದೆ.  ಇಲ್ಲಿ 30 ವರ್ಷ, 41 ವರ್ಷ, 46 ವರ್ಷ ಹಾಗೂ 59 ವರ್ಷದ ಪೊಲೀಸ್‌ ಸಿಬ್ಬಂದಿಗೆ ವೈರಾಣು ತಲುಗಿರುವುದು ಖಚಿತವಾಗಿದೆ. ಅಲ್ಲದೇ, ಡಿಆರ್‌ ಪೊಲೀಸ್‌ ಮುಖ್ಯ ಕಚೇರಿಯಲ್ಲಿ 32 ವರ್ಷದ ಸಿಬ್ಬಂದಿಗೆ ಕೋವಿಡ್‌ ಅಂಟಿದೆ.

ಮಹಿಳಾ ಪೊಲೀಸ್‌ ಠಾಣೆಯ 28 ವರ್ಷದ ಮಹಿಳಾ ಸಿಬ್ಬಂದಿಗೂ ಕೋವಿಡ್‌ ಸೋಂಕು ಪತ್ತೆಯಾಗಿದೆ. ನಾಗನಹಳ್ಳಿ ಸಮೀಪ ಪೊಲೀಸ್‌ ತರಬೇತಿ ಕೇಂದ್ರದಲ್ಲಿ 41 ವರ್ಷದ ಮಹಿಳಾ ಸಿಬ್ಬಂದಿ, ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯ 27 ವರ್ಷದ ಸಿಬ್ಬಂದಿಗೂ ಸೋಂಕು ಕಾಣಿಸಿಕೊಂಡಿದೆ.

ಜಯದೇವ ಆಸ್ಪತ್ರೆಗೂ ಕೊರೊನಾ ಪ್ರವೇಶಿಸಿದ್ದು, ಇಲ್ಲಿ ಇಬ್ಬರು ಸಿಬ್ಬಂದಿ 28 ವರ್ಷ ಮತ್ತು 34 ವರ್ಷದ ಸಿಬ್ಬಂದಿಗೆ ಸೋಂಕು ಅಂಟಿದೆ. ನಗರದ ಹೊರ ವಲಯದ ಕಪನೂರ ಕೈಗಾರಿಕಾ ಪ್ರದೇಶಕ್ಕೂ ವೈರಾಣು ವ್ಯಾಪಿಸಿದೆ. ಇದಲ್ಲಿ ಕೈಲಾಸ್‌ ಇಂಡಸ್ಟ್ರೀಸ್‌ನ ಮೂವರಿಗೆ ಸೋಂಕು ಪತ್ತೆಯಾಗಿದೆ. ವಿದ್ಯಾನಗರದಲ್ಲಿ ಏಳು ಜನರು, ಚಪ್ಪಲ್‌ ಬಜಾರ್‌, ಸೂಪರ್‌ ಮಾರ್ಕೆಟ್‌, ಹಳೆ ಜೇವರ್ಗಿ ರಸ್ತೆಯಲ್ಲಿ ಒಬ್ಬರಿಗೆ ಕೋವಿಡ್‌ ದೃಢಪಟ್ಟಿದೆ.

ಇದೇ ವೇಳೆ 17 ಜನ ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ 2,103 ಸೋಂಕಿತರಲ್ಲಿ ಇದುವರೆಗೆ 1,477 ಮಂದಿ ಆಸ್ಪತ್ರೆಯಿಂದ ಡಿಸ್ವಾರ್ಜ್‌ ಆಗಿದ್ದಾರೆ. ಇನ್ನು, 590 ಕೋವಿಡ್‌ ಪೀಡಿತರು ಐಸೋಲೇಷನ್‌ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.