ಗರ್ಭಿಣಿ ಸೇರಿ 11 ಜನರಿಗೆ ಕೋವಿಡ್
Team Udayavani, Jul 20, 2020, 11:33 AM IST
ಆಳಂದ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಮಹಾರಾಷ್ಟ್ರ ಸೇರಿ ಇನ್ನಿತರ ಸಂಪರ್ಕ ಮೂಲದಿಂದ ಬಂದ 11 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ತಾಲೂಕಿನ ಮಾದನಹಿಪ್ಪರಗಾದ 24 ವರ್ಷದ ಪುರುಷ, 65 ವರ್ಷದ ಪುರುಷ, ದರ್ಗಾದಶಿರೂರ ಗ್ರಾಮದಲ್ಲಿ 60 ವರ್ಷದ ಪುರುಷ, ಯಳಸಂಗಿ ಗ್ರಾಮದಲ್ಲಿ 35 ವರ್ಷದ ಪುರುಷ, ವಾಗ್ಮೆರಿಯ 25 ವರ್ಷದ ಮಹಿಳೆ (ಮಹಾರಾಷ್ಟ್ರದಿಂದ ಬಂದವರು), ಕರಹರಿ ಗ್ರಾಮದಲ್ಲಿ ಒಂದೇ ಕುಟುಂಬದ 17 ವರ್ಷದ ಬಾಲಕಿ, 24 ವರ್ಷದ ಮಹಿಳೆ, 44 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇವರು ಜೂ. 28 ರಂದು ಮಹಾರಾಷ್ಟ್ರದಿಂದ ಆಗಮಿಸಿದ್ದಾರೆ ಎನ್ನಲಾಗಿದೆ.
ನಿಂಬರಗಾದ 25 ವರ್ಷದ ಗರ್ಭಿಣಿಗೆ ಸೋಂಕು ದೃಢಪಟ್ಟಿದೆ. ತಡೋಳಾದಲ್ಲಿ 34 ವರ್ಷದ ಪುರುಷ, 25 ವರ್ಷದ ಪುರುಷರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಭಾನುವಾರ ಅಂಕಿ ಅಂಶ ನೀಡಿದೆ.
ಪಟ್ಟಣ ಸೇರಿ ಗ್ರಾಮೀಣ ಭಾಗದ 233 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 179 ಗುಣಮುಖರಾಗಿದ್ದು, ಇನ್ನೂಳಿದ 46 ಮಂದಿ ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಎಂಟು ಜನರು ಮೃತಪಟ್ಟಿದ್ದಾರೆ. ಶಂಕಿತ ಮತ್ತು ಸೋಂಕಿತ ರೋಗಿಗಳಿಗೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ಕಾರ್ಯ ಮುಂದುವರಿದಿದೆ. ಪಟ್ಟಣದಲ್ಲಿ ಜಿಲ್ಲಾಡಳಿತ ವಿ ಧಿಸಿದ ಲಾಕ್‌ಡೌನ್‌ಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.