ಚಿರತೆ ದಾಳಿಗೆ ಹಸು ಬಲಿ: ಅಣ್ಣಿಕೇರಾದಲ್ಲಿ ಆತಂಕ
Team Udayavani, Jan 11, 2022, 9:36 PM IST
ವಾಡಿ: ರಾತ್ರಿ ವೇಳೆ ಹೊಲದಲ್ಲಿ ಕಟ್ಟಲಾಗಿದ್ದ ಹಸುವೊಂದು ಕಾಡು ಮೃಗವೊಂದರ ದಾಳಿಗೆ ಬಲಿಯಾದ ಘಟನೆ ಲಾಡ್ಲಾಪುರ ಸಮೀಪದ ಅಣ್ಣಿಕೇರಾ ಗ್ರಾಮದ ಪರಿಸರದಲ್ಲಿ ಸಂಭವಿಸಿದ್ದು, ಚಿರತೆ ದಾಳಿಯಿಂದಲೇ ಹಸು ಮೃತಪಟ್ಟಿದೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಣ್ಣಿಕೇರಾ ತಾಂಡಾದ ರಮೇಶ ಶಂಕರ ಜಾಧವ ಎಂಬುವವರಿಗೆ ಸೇರಿದ ಹಸು ಚಿರತೆ ಬಾಯಿಗೆ ಆಹಾರವಾಗಿದೆ ಎನ್ನಲಾಗಿದ್ದು, ರವಿವಾರ ರಾತ್ರಿ ಎಂದಿನಂತೆ ಎರಡು ಎತ್ತು ಮತ್ತು ಎರಡು ಆಕಳನ್ನು ತಮ್ಮ ಹೊಲದಲ್ಲಿ ಕಟ್ಟಿ ಮನೆಗೆ ಬಂದಿದ್ದಾರೆ. ಅಣ್ಣಿಕೇರಾ, ಲಾಡ್ಲಾಪುರ, ಅಳ್ಳೊಳ್ಳಿ, ದಂಡಗುಂಡ ಗ್ರಾಮಗಳು ಗುಡ್ಡಗಾಡು ಅರಣ್ಯ ಪ್ರದೇಶಗಳಿಂದ ಕೂಡಿದ್ದರಿಂದ ಈ ಹಿಂದೆ ಇಲ್ಲಿ ಅನೇಕ ಸಲ ಚಿರತೆ ಪ್ರತ್ಯಕ್ಷವಾಗಿರುವ ವದಂತಿಗಳು ಹರಿದಾಡಿದ್ದವು.
ರವಿವಾರ ರಾತ್ರಿ ಕಟ್ಟಲಾದ ಹಸು ಸೋಮವಾರ ಬೆಳಗ್ಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಸುವಿನ ಕತ್ತು ಮತ್ತು ಹಿಂಬಾಗ ಕಾಡು ಪ್ರಾಣಿಯ ಬಾಯಿಗೆ ಆಹಾರವಾಗಿದೆ. ಇದು ಗ್ರಾಮಸ್ಥರ ಅನುಮಾನಕ್ಕೆ ಕಾರಣವಾಗಿದ್ದು, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಪಶು ವೈದ್ಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅ ಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಸುವಿನ ಕತ್ತಿಗೆ ಬಾಯಿ ಹಾಕಿ ರಕ್ತ ಹೀರಿದ ಬಳಿಕ ಮೃಗವು ಹಸುವಿನ ಬಾಲದ ಭಾಗವನ್ನು ಕತ್ತರಿಸಿ ತಿಂದಿದೆ. ಉಳಿದ ಎರಡು ಎತ್ತು ಹಾಗೂ ಇನ್ನೊಂದು ಆಕಳಿಗೆ ಯಾವೂದೇ ಹಾನಿಯಾಗಿಲ್ಲ. ಇದು ಖಚಿತವಾಗಿ ಚಿರತೆಯ ದಾಳಿಯೇ ಆಗಿದೆ ಎಂದು ಗ್ರಾಮಸ್ಥರು ಸಂಶಯ ಸ್ಪಷ್ಟಪಡಿದ್ದಾರೆ ಎಂದು ಗ್ರಾಮದ ಮುಖಂಡ ರತ್ನಮಣಿ ರಾಠೊಡ ಪ್ರತಿಕ್ರಿಯಿಸಿದ್ದಾರೆ.
ಗ್ರಾಮಸ್ಥರಲ್ಲಿ ಆತಂಕ: ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದ್ದು, ಚಿರತೆಯ ಹೆಸರು ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಷ್ಟುದಿನ ಚಿರತೆ ಪ್ರತ್ಯಕ್ಷವಾಗಿದೆ ಎಂದು ವದಂತಿ ಹಬ್ಬಿಸಲಾಗುತ್ತಿತ್ತು. ಆದರೆ ಈ ಘಟನೆಯಿಂದ ಚಿರತೆ ನಮ್ಮೂರ ಸುತ್ತಮುತ್ತ ಫೇರಿ ಹೊಡೆಯುತ್ತಿದೆ ಎಂಬುದು ಖಾತ್ರಿಯಾಗಿದೆ. ಹಗಲು ಹೊತ್ತಿನಲ್ಲಿ ಮಹಿಳೆಯರು, ಮಕ್ಕಳು, ರೈತರು, ದನ-ಕುರಿ ಕಾಯುವವರು ಅಡವಿಗೆ ಹೋಗುತ್ತಾರೆ. ಈ ವೇಳೆ ಚಿರತೆ ದಾಳಿ ನಡೆಸಿದರೆ ಹೇಗೆ ಎಂಬ ಚಿಂತೆ ಸ್ಥಳೀಯರನ್ನು ಕಾಡುತ್ತಿದೆ. ಲಾಡ್ಲಾಪುರ ಹಾಗೂ ಅಣ್ಣಿಕೇರಾ ಗ್ರಾಮಸ್ಥರಲ್ಲಿ ಚಿರತೆಯಿಂದ ಜೀವ ಭಯ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.