ಜಾತ್ರೆಯಲ್ಲಿ ಮದ್ದು ಸಿಡಿದು 20ಕ್ಕೂ ಅಧಿಕ ಮಂದಿಗೆ ಗಾಯ; ಬಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ
Team Udayavani, Oct 21, 2022, 5:35 PM IST
ಕಲಬುರಗಿ: ಜಾತ್ರೆ ನಡೆಯುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು 20 ಕ್ಕೂ ಅಧಿಕ ಜನರು ಗಂಭೀರ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮರಗಮ್ಮ ದೇವಿ ಜಾತ್ರೆ ಹಾಗೂ ಈ ಹಿಂದೆ ಭಗ್ನವಾದ 15 ದೇವಿಗಳ ಮೂರ್ತಿ ಮರು ಪ್ರತಿಷ್ಠಾಪನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ಹಾರಿಸಲು ಮದ್ದು ಸಿಡಿಸಿ ಸಂಭ್ರಮಿಸಲಾಗುತಿತ್ತು. ಆಕಾಶದತ್ತ ಮದ್ದು ಸಿಡಿಸಿದಾಗ ಬೆಂಕಿಯ ಕಿಡಿ ಪಕ್ಕದಲ್ಲಿಯೇ ಸಂಗ್ರಹಿಸಿ ಹಾರಿಸಲು ಇಟ್ಟಿದ್ದ ಮದ್ದಿನ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ
ಅಂದಾಜು ಐದು ಕೆಜಿಯಷ್ಟಿದ್ದ ಮದ್ದು ಸಿಡಿದಾಗ ಹಲವರು ಗಾಯಗೊಂಡಿದ್ದಾರೆ. ಮದ್ದು ಸಿಡಿಸುವ ವ್ಯಕ್ತಿ, ಓರ್ವ ಮಗು ಸೇರಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರ ದೇಹದ ಅಂಗಾಂಗಗಳು ಸುಟ್ಟಿದ್ದು ಗ್ರಾಮಸ್ಥರು ಕಾರುಗಳ ಮುಖಾಂತರ ಅವರನ್ನು ಸ್ಥಳೀಯ ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.