ಕೋವಿಡ್‌ ಹೆಸರಿನಲ್ಲಿ ಕೋಟಿ ಲೂಟಿ


Team Udayavani, Jul 4, 2020, 8:34 AM IST

ಕೋವಿಡ್‌ ಹೆಸರಿನಲ್ಲಿ ಕೋಟಿ ಲೂಟಿ

ಕಲಬುರಗಿ: ಕೋವಿಡ್‌ ಹೆಸರಿನಲ್ಲಿ ಸ್ಯಾನಿಟೈಸರ್‌, ಪಿಪಿಇ ಕಿಟ್‌ಗಳು, ಥರ್ಮಲ್‌ ಸ್ಕ್ರೀನಿಂಗ್‌ ಗನ್‌ಗಳನ್ನು ಕಳಪೆ ಗುಣಮುಖದಲ್ಲಿ ಖರೀದಿಸುತ್ತಿದ್ದು, ಕೋಟ್ಯಂತರ ರೂ.ಗಳನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಆರೋಪಿಸಿದರು.

ನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 200ರೂ.ಗೆ ಸಿಗುವ ಸ್ಯಾನಿಟೈಸರ್‌ ಗಳನ್ನು 600ರೂ., ಎರಡು ಸಾವಿರ ರೂ. ಗಳ ಥರ್ಮಲ್‌ ಸ್ಕ್ರೀನಿಂಗ್‌ ಗನ್‌ಗಳನ್ನು ಒಂಭತ್ತು ಸಾವಿರ ರೂ.ಗೆ ಖರೀದಿ ಮಾಡಲಾಗಿದೆ. ವೈದ್ಯರಿಗೆ ನೀಡುವ ಪಿಪಿಇ ಕಿಟ್‌ಗಳು ಕಳಪೆಯಾಗಿವೆ. ಈ ಬಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಬೀದಿಗೆ ಬಂದು ಪ್ರತಿಭಟನೆಯನ್ನು ಮಾಡಿದ್ದಾರೆ. ಆದರೆ, ಸಚಿವರು ಹಾಗೂ ಅಧಿಕಾರಿಗಳು ಸುಳ್ಳು ಮಾಹಿತಿ ನೀಡುತ್ತ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಬಳಸಿದ ಹಳೆಯ ವೆಂಟಿಲೇಟರ್‌ಗಳನ್ನೇ ದುಬಾರಿ ಹಣಕ್ಕೆ ಖರೀದಿ ಮಾಡಲಾಗಿದೆ. ಒಂದು ಕೋಟಿ ರೂ. ಮೌಲ್ಯದ ಒಂದುಯೂನಿಟ್‌ ಸ್ಯಾನಿಟೈಸರ್‌ಗೆ 11 ಕೋಟಿ ರೂ. ಭರಿಸಿದ್ದಾರೆ. ಆರೋಗ್ಯದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದವರನ್ನು ಆರೋಗ್ಯ ಸಚಿವರನ್ನಾಗಿ ಮಾಡಲಾಗಿದೆ. ಕೋವಿಡ್‌ ಅವ್ಯವಹಾರದ ಬಗ್ಗೆ ಶಾಸಕರೇ ಇರುವ “ಪಿಎಸಿ’ ಕಮಿಟಿಯಲ್ಲಿ ಚರ್ಚೆಯಾಗಬೇಕು. ಈ ಕುರಿತು ಎಸಿಬಿಗೆ ದೂರು ನೀಡಲಾಗಿದೆ ಎಂದರು.

ಪಕ್ಷದ ಉಪಾಧ್ಯಕ್ಷ ಎಸ್‌.ಎಚ್‌. ಲಿಂಗೇಗೌಡ, ರಘುಪತಿ ಭಟ್‌, ಸೋಮಸುಂದರ, ಸೈಬಣ್ಣ ಜಮಾದಾರ, ಜಗದೇವಿ ಚವ್ಹಾಣ ಹಾಜರಿದ್ದರು.

ಚುನಾವಣೆಯಲ್ಲಿ ಕಣಕ್ಕೆ ಪ್ರಾಮಾಣಿಕ ಹಾಗೂ ಜನಪರ ರಾಜಕಾರಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಥಾಪಿಸಲಾಗಿದೆ. ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ಆಡಳಿತ ವೈಖರಿಯಿಂದ ಜನ ಬೇಸತ್ತಿದ್ದಾರೆ. ಅಲ್ಲಿ ಸ್ವಾರ್ಥಿಗಳೆ ತುಂಬಿದ್ದಾರೆ. ಮುಂದಿನ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ.  –ರವಿ ಕೃಷ್ಣಾರೆಡ್ಡಿ, ಅಧ್ಯಕ್ಷರು, ಕರ್ನಾಟಕ ರಾಷ್ಟ್ರ ಸಮಿತಿ

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.