ಸಂಸ್ಕೃತಿ ಪ್ರತೀಕ ಸ್ಮಾರಕ ರಕ್ಷಣೆ ಅಗತ್ಯ
Team Udayavani, Jan 5, 2019, 5:57 AM IST
ಕಲಬುರಗಿ: ನಮ್ಮ ನಡೆ, ನುಡಿ ಬಿಂಬಿಸುವ ಸಂಸ್ಕೃತಿ ಪ್ರತೀಕವಾಗಿರುವ ಸ್ಮಾರಕಗಳ ರಕ್ಷಣೆಗೆ ಸರ್ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸುವುದು ಹೆಚ್ಚು ಅಗತ್ಯವಿದೆ ಎಂದು ಆಗಾಖಾನ್ ಸಂಸ್ಕೃತಿ ಟ್ರಸ್ಟ್ ನಿರ್ದೇಶಕ ಕೆ.ಕೆ ಮಹ್ಮದ್ ಹೇಳಿದರು.
ನಗರದ ಶರಣಬಸವ ವಿಶ್ವವಿದ್ಯಾಲಯ, ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯ ಸಂಯುಕ್ತವಾಗಿ ಶುಕ್ರವಾರ
ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಹಮ್ಮಿಕೊಂಡಿದ್ದ ಸ್ಮಾರಕಗಳ ಸಮಗ್ರ ಸಂರಕ್ಷಣಾ ವಿಧಾನಗಳು ರಾಷ್ಟ್ರ ಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪುರಾತನ ಸ್ಮಾರಕಗಳ ರಕ್ಷಣೆ ಮಾಡುವ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅಲ್ಲದೇ ಅವು ವಿಕೋಪಕ್ಕೆ ಹೋಗಿ ಸಮಾಜದ ಸ್ವಾಸ್ಥ ಹಾಳಾಗುವ ಸನ್ನಿವೇಶ ನಿರ್ಮಾಣವಾಗಬಹುದು. ಆದ್ದರಿಂದ ಸ್ಮಾರಕಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
ಸ್ಮಾರಕಗಳನ್ನು ರಕ್ಷಿಸುವುದರಿಂದ ಪ್ರವಾಸೋದ್ಯಮ ಬೆಳೆದು ಆರ್ಥಿಕ ಸಂಪನ್ಮೂಲ ವೃದ್ಧಿಯಾಗಿ ಬಡತನ ಕಡಿಮೆಯಾಗುತ್ತದೆ. ಮುಂದಿನ ಪೀಳಿಗೆಗೆ ಇತಿಹಾಸ ಹೇಳಲು ಅನುಕೂಲವಾಗುತ್ತದೆ. ಹೀಗಾಗಿ ಪ್ರಾಚೀನ ಕಾಲದಲ್ಲಿ ನಿರ್ಮಾಣಗೊಂಡಿರುವ ಸ್ಮಾರಕಗಳನ್ನು ರಕ್ಷಿಸಬೇಕಿದೆ ಎಂದರು.
ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ ನಿಷ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಮಾರಕಗಳು ಇತಿಹಾಸದ
ಪ್ರತೀಕವಾಗಿವೆ. ಹೀಗಾಗಿ ನಮ್ಮ ಆಸ್ತಿಯಂತೆ ಕಾಪಾಡುವುದು ಅಗತ್ಯವಾಗಿದೆ ಎಂದರು.
ಮೈಸೂರಿನ ಭಾರತೀಯ ಇತಿಹಾಸ ಸಂಕಲನ ಸಮಿತಿಯ ಕಾರ್ಯದರ್ಶಿ ಡಾ| ಶ್ರೀನಿವಾಸರಾವ್ ಮಾತನಾಡಿ, ನಮ್ಮನ್ನು ನಾವು ಅರಿಯುವುದಕ್ಕೆ ಇತಿಹಾಸ ಸಹಕಾರಿಯಾಗಿದೆ. ಇತಿಹಾಸವನ್ನು ತಿಳಿದುಕೊಂಡರೇ ನಾವು ಶ್ರೀಮಂತರಾಗಬಹುದು ಎಂದು ಹೇಳಿದರು.
ಪ್ರೊ| ಶಾಂತಲಾ ನಿಷ್ಟಿ, ಜಗದೇವಿ ಕಲಶೆಟ್ಟಿ, ಪ್ರೊ| ರೇಣುಕಾ ಕನಕೇರಿ, ಡಾ| ವೆಂಕಣ್ಣ ಡೊಣ್ಣೆಗೌಡರ್ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಡಾ| ಎನ್.ಎಸ್. ಪಾಟೀಲ ಸ್ವಾಗತಿಸಿದರು. ಡಾ| ಸುರೇಶ ನಂದಗಾಂವ ನಿರೂಪಿಸಿದರು, ಡಾ| ಶಿವರಾಜ ಶಾಸ್ತ್ರೀ ಹೇರೂರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.