ಡೈರಿ ಹಗರಣ: ಸಚಿವ ಶರಣಪ್ರಕಾಶ ಮನೆ ಎದುರು ಬಿಜೆಪಿ ಪ್ರತಿಭಟನೆ
Team Udayavani, Feb 26, 2017, 2:47 PM IST
ಕಲಬುರಗಿ: ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಸಾವಿರ ಕೋಟಿ ರೂ.ಗಳನ್ನು ರಾಜ್ಯದ ಹಲವಾರು ಕಾಂಗ್ರೆಸ್ ಪಕ್ಷದ ಸಚಿವರಿಂದ ಹಾಗೂ ಶಾಸಕರಿಂದ ಸಂಗ್ರಹಿಸಿ ಮುಖ್ಯಮಂತ್ರಿಗಳು ಹಂಚಿಕೆ ಮಾಡಿದ ವಿವರವುಳ್ಳ ಡೈರಿ ಶಾಸಕ ಗೋವಿಂದರಾಜ್ ಅವರ ಬಳಿ ಸಿಕ್ಕ ಬಗ್ಗೆ ಆಂಗ್ಲ ಸುದ್ದಿವಾಹಿನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಗ್ರಾಮಾಂತರ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದರು.
ಡೈರಿಯಲ್ಲಿ ಹಣ ನೀಡಿರುವ ಬಗ್ಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಡೈರಿಯಲ್ಲಿ ನಮೂದಿಸಲಾಗಿದೆ. ಒಟ್ಟು 602 ಕೋಟಿ ರೂ. ಸಂಗ್ರಹವಾಗಿದ್ದು, 473 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖವಾಡ ಕಳಚಿಬಿದ್ದಿದ್ದು, ರಾಜ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಪರಶುರಾಮ ಸಲವಾಯಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರವೀಣ ತೆಗನೂರ, ಸೂರ್ಯಕಾಂತ ಡೋಣಿ, ಶ್ರೀನಿವಾಸ ದೇಸಾಯಿ, ಸಂತೋಷ ಹಾದಿಮನಿ, ಶರಣು ಸಜ್ಜನ್, ಕೈಲಾಸ ಪಾಟೀಲ, ಸುನೀಲ, ಬಸವರಾಜ ಜವಳಿ, ನಾಗರಾಜ ಉಪಾಸೆ, ಮಹಿಂದ್ರಾ ನಾಯ್ಡು, ಶ್ರೀಧರ ಚವ್ಹಾಣ, ಸುನೀಲ ಮಹಾಗಾಂವಕರ, ಅಮೀತ ಚಿಡಗುಂಪಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ
Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
Tulu Cinema: ವಿನೀತ್ ಕುಮಾರ್ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.