ಚಿಂಚೋಳಿ ಕ್ಷೇತ್ರಕ್ಕೆ ಕರಾಳ ದಿನ: ರವಿಶಂಕರರೆಡ್ಡಿ
Team Udayavani, Mar 7, 2019, 6:52 AM IST
ಚಿಂಚೋಳಿ: ಎರಡು ಸಲ ಶಾಸಕರಾಗಿ ಗೆಲುವು ಸಾಧಿಸಿ ಕೇವಲ ಹತ್ತು ತಿಂಗಳಲ್ಲಿಯೇ ಶಾಸಕ ಡಾ| ಉಮೇಶ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಖಂಡನೀಯವಾಗಿದ್ದು, ಕ್ಷೇತ್ರದ ಮತದಾರರಿಗೆ ಕರಾಳ ದಿನವಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ ಡಾ| ಉಮೇಶ ಜಾಧವ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ರಾಜಕೀಯ ಇತಿಹಾಸದಲ್ಲಿಯೇ ಇದೊಂದು ದೊಡ್ಡ ಕರಾಳ ದಿನವಾಗಿದೆ. ಆಯ್ಕೆ ಮಾಡಿದ ಮತದಾರರ ಬೆನ್ನಿಗೆ ಚೂರಿ ಹಾಕಿ ಸ್ವಾರ್ಥ ರಾಜಕಾರಣಕ್ಕಾಗಿ ಮತ್ತು ಬಿಜೆಪಿ ಆಪರೇಶನ್ ಕಮಲಕ್ಕೆ ಒಳಗಾಗಿ ಜನರಿಗೆ ನೀಡಿದ ಆಶ್ವಾಸನೆ, ಭರವಸೆಗಳನ್ನು ಹುಸಿಗೊಳಿಸಿ ಬಿಜೆಪಿಗೆ ಸೇರ್ಪಡೆಗೊಳ್ಳುವ ಮೂಲಕ ಕ್ಷೇತ್ರದ ಜನತಗೆ ಅವಮಾನ ಮಾಡಿದ್ದಾರೆ ಎಂದರು.
ಚಿಂಚೋಳಿ ಮತಕ್ಷೇತ್ರಕ್ಕೆ ತನ್ನದೇ ರಾಜಕೀಯ ಇತಿಹಾಸವಿದೆ. ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲ ಎರಡು ಬಾರಿ ಮುಖ್ಯಮಂತ್ರಿಯಾಗಿ, ದಿ| ದೇವೇಂದ್ರಪ್ಪ ಘಾಳಪ್ಪ ಜಮಾದಾರ, ಮಾಜಿ ಸಚಿವ ವೈಜನಾಥ ಪಾಟೀಲ, ಮಾಜಿ ಶಾಸಕರಾದ ಎಂ. ವೀರಯ್ಯ ಸ್ವಾಮಿ, ಕೈಲಾಶನಾಥ ಪಾಟೀಲ ಈ ಕ್ಷೇತ್ರದಿಂದ ಪ್ರತಿನಿಧಿ ಸಿದ್ದಾರೆ. ಆದರೆ ಇಂತಹ ಕೆಟ್ಟ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಹೇಳಿದರು.
ರಾಮಣ್ಣ ಸುಂಕಾ, ವಾಮನರಾವ್ ಕೊರವಿ, ಮಗದುಮ್ ಟೇಲರ್, ಶಿವಕುಮಾರ ಸೇರಿಕಾರ, ಮಾಜೀದ ಪಟೇಲ ದಸ್ತಾಪುರ, ಮಹೆಬೂಬ ಶಾ, ಖದೀರ ಪಟೇಲ, ಪುರಸಭೆ ಸದಸ್ಯ ನಾಗೇಂದ್ರಪ್ಪ ಗುರಂಪಳ್ಳಿ, ವಿಜಯಕುಮಾರ ಶಾಬಾದಿ, ವಿಶ್ವನಾಥ ಬೀರನಳ್ಳಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.