ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ: ಡಾ| ಖರ್ಗೆ
Team Udayavani, Apr 17, 2019, 4:26 PM IST
ಕಲಬುರಗಿ: ಸಂವಿಧಾನ ಬದಲಿಸುವ ಮತ್ತು ಮೀಸಲಾತಿ ರದ್ದುಗೊಳಿಸುವ ಮಾತನಾಡುತ್ತಿರುವ ಬಿಜೆಪಿಯವರು ಶೋಷಿತರನ್ನು ನುಂಗಿ ಜೀವಿಸುವ ಹುನ್ನಾರ ಹೊಂದಿದ್ದಾರೆ ಎಂದು ದಲಿತ ಹಿರಿಯ ನಾಯಕ, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ನಗರದ ವೀರಶೈವ ಕಲ್ಯಾಣ ಮಂಟಪದ ಮುಂಭಾಗದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಸಮುದಾಯದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಸ್ಪೃಶ್ಯರು, ಶೋಷಿತರು ದೇಶದ ಮಣ್ಣಿನ ಮಕ್ಕಳು. ಅಂಬೇಡ್ಕರ್ ಬರೆದಿರುವ ಸಂವಿಧಾನವಿಲ್ಲದೇ ದೇಶದ ಜನತೆಗೆ ಯಾವುದೇ ಹಕ್ಕುಗಳು ಇರುವುದಿಲ್ಲ, ಸರ್ವರಿಗೆ ಸ್ವಾತಂತ್ರ್ಯಾ, ಸಮಾನತೆ ಮತ್ತು ಬಂಧುತ್ವವನ್ನು ಕೊಟ್ಟಿರುವ ಸಂವಿಧಾನ ರಕ್ಷಣೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.
ಬಿಜೆಪಿ ಆಡಳಿತ ಹೊಂದಿದ್ದ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ದಲಿತರ ಮೇಲೆ ದಾಳಿ ನಡೆದಿದ್ದವು. ಗುಜರಾತ್‌ನಲ್ಲಿ ದನದ ಮಾಂಸ ತೆಗೆಯುತ್ತಿದ್ದ ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದರು. ಇದಕ್ಕೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ಸಹಕಾರ ಇತ್ತು ಎಂದು ದೂರಿದ ಅವರು, ಸಂವಿಧಾನ ಬದಲಿಸುವ ಮಾತನಾಡಿದ್ದ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ, ನಾನು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಕ್ಷಮೆಯಾಚಿಸಿದರು ಎಂದರು.
ಕೇಂದ್ರದಲ್ಲಿರುವ ಸುಳ್ಳು ಸರ್ಕಾರವನ್ನು ತೆಗೆಯಬೇಕಿದೆ. ಪ್ರಜಾಪ್ರಭುತ್ವ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕಾಗಿ ತಮಗೆ ಮತ ನೀಡುವಂತೆ ಸಮುದಾಯವರಿಗೆ ಖರ್ಗೆ ಮನವಿ ಮಾಡಿದರು.
ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಲು ಬಂಡೆ ಇದ್ದಂತೆ. ಅವರನ್ನು ಒಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯವರಿಗೆ ಹೇಳಿ ಬಂದಿದ್ದೇನೆ. ನಮ್ಮ ಜೀವ ಹೋದರೂ ಪರವಾಗಿಲ್ಲ ಖರ್ಗೆ ಅವರ ಜೀವ ಉಳಿಸಲು ಅಡ್ಡ ನಿಲ್ಲುತ್ತೇವೆ ಎಂದರು.
ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮುಖಂಡರಾದ ಅಲ್ಲಮಪ್ರಭುಪಾಟೀಲ, ಹೆಣ್ಣೂರು ಶ್ರೀನಿವಾಸ, ಶ್ಯಾಮರಾವ ಪ್ಯಾಟಿ, ವಿಜಯಕುಮಾರ, ಚಂದ್ರಿಕಾ ಪರಮೇಶ್ವರಿ, ಲಿಂಗರಾಜು ತಾರ್‌ಫೈಲ್, ಶಾಮನಾಟೀಕರ್, ಪರಮೇಶ್ವರ ಖಾನಪೂರೆ, ಸಿದ್ಧಾರ್ಥ್, ಗೋಪಿಕೃಷ್ಣ, ಬಸವರಾಜ ಜವಳಿ, ಸತೀಶ ಮುಂತಾದವರು ಇದ್ದರು.
ಮಲ್ಲಿಕಾರ್ಜುನ ಖರ್ಗೆ ನ್ಯಾ.ಸದಾಶಿವ ಆಯೋಗದ ವಿರೋಧಿ ಎಂದು ಬಿಜೆಪಿ ಪ್ರಾಯೋಜಿತರು ಹೇಳುತ್ತಿದ್ದಾರೆ. ಅದಕ್ಕಾಗಿ ಬಿಜೆಪಿ ಅವರನ್ನು ನೇಮಿಸಿದೆ.
ಎಲ್.ಹನುಮಂತಯ್ಯ, ರಾಜ್ಯಸಭಾ ಸದಸ್ಯ
ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಎರಡೂ ವರ್ಗದವರು ಒಟ್ಟಾಗಿ ಇರಬೇಕು. ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ಸಮುದಾಯದ ಎರಡು ವರ್ಗದವರೂ ಕುಳಿತುಕೊಂಡು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳೊಣ. ಹೋಗುವುದಾದರೆ ಎರಡೂ ವರ್ಗದವರು ಒಗ್ಗಟ್ಟಾಗಿ ಹೋಗೋಣ.
ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.