ಬಾಕಿ ಕಡತ ಪೂರ್ಣಗೊಳಿಸಲು ಡಿಸಿ ಸೂಚನೆ
Team Udayavani, Aug 17, 2022, 1:46 PM IST
ಯಡ್ರಾಮಿ: ಗ್ರಾಮೀಣ ಭಾಗದ ಜನರ ಕುಂದು ಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ “ಜಿಲ್ಲಾಧಿ ಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಜಿಲ್ಲಾಧಿಕಾರಿ ಯಶವಂತ ಗುರಕರ್ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಬೆಳಗ್ಗೆ 11ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 70ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ಬಹುತೇಕ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಕಂದಾಯ ಇಲಾಖೆಯಲ್ಲಿ ಕಡತಗಳ ವಿಲೇವಾರಿ ಮಾಡಲು ಅಲೆದಾಡಿಸುತ್ತಾರೆ ಎನ್ನುವ ಜನರ ಆರೋಪಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಶಾಂತಗೌಡ ಬಿರಾದಾರ ಮೇಲೆ ಸಿಡಿಮಿಡಿಗೊಂಡು ಬಾಕಿ ಇರುವ ಕಡತಗಳನ್ನು ಮೂರು ದಿನದಲ್ಲಿ ಪರಿಹರಿಸಬೇಕೆಂದು ಸೂಚಿಸಿದರು.
ಹಳ್ಳಿಗಳಲಿ ವಿವಿಧ ಸಮುದಾಯಗಳಿಗೆ ಸ್ಮಶಾನ ಭೂಮಿ ಮಂಜೂರು ಮಾಡಲು ಅರ್ಜಿಗಳಿಗೆ ಸಂಬಂಧಿಸಿದಂತೆ ಶೀಘ್ರವೆ ಒಂದು ಸಾರ್ವಜನಿಕ ಸಭೆಯನ್ನು ಮಾಡಿ, ಸಮುದಾಯಗಳಿಗೆ ಪ್ರತ್ಯೇಕವಾಗಿ ಸ್ಮಶಾನ ಭೂಮಿ ಮಂಜೂರು ಮಾಡಲು ಬರುವುದಿಲ್ಲ. ಎಲ್ಲ ಸಮುದಾಯಗಳಿಗೂ ಒಂದೇ ಕಡೆ ಅಗತ್ಯ ಸ್ಥಳವನ್ನು ನೀಡಲಾಗುವುದು ಎಂದು ಅರಿವು ಮೂಡಿಸಲು ತಹಶೀಲ್ದಾರ್‌ಗೆ ತಿಳಿಸಿದರು.
ಹಾಗೆಯೇ ಹಳ್ಳಿಗಳಲ್ಲಿ ನಡೆಯುತ್ತಿರುವ ಜೆಜೆಎಂ ಕಳಪೆ ಕಾಮಗಾರಿ ಸೇರಿದಂತೆ ಶಾಲೆಯ ಕಟ್ಟಡ ದುರಸ್ತಿ ಹಾಗೂ ವಿದ್ಯುತ್ ಸೌಲಭ್ಯ, ರಸ್ತೆ ನಿರ್ಮಾಣದ ಬಗ್ಗೆ ದೂರುಗಳು ಬಂದಿವೆ. ಶೀಘ್ರವೆ ಪರಿಹರಿಸಲು ಇಒ ಮಹಾಂತೇಶ ಪುರಾಣಿಕಗೆ ಸೂಚನೆ ನೀಡಿದರು. ಇದೇ ವೇಳೆ, ತಾಲೂಕಿನ ವಿವಿಧ ಸಂಘಟನೆಗಳಿಂದ ನೂತನ ತಾಲೂಕಿಗೆ ಅಗತ್ಯ ಕಚೇರಿಗಳನ್ನು ಕೂಡಲೇ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಕೋರಲಾಯಿತು.
ಜನತೆಯಿಂದ ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದ ನಂತರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ, ಜಿಲ್ಲೆಯಲ್ಲಿರುವ 127 ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಮಹತ್ತರ ಕಾರ್ಯಕ್ರಮವನ್ನು ರಾಜ್ಯ ಕಂದಾಯ ಸಚಿವರು ಚಾಲನೆ ನೀಡಲಿದ್ದಾರೆ. ಸುಮಾರು 30,040 ಮನೆಗಳಿಗೆ ಹಕ್ಕು ಪತ್ರಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.