200 ಅಕ್ರಮ ಕಲ್ಲು ಗಣಿಗಳ ವಿದ್ಯುತ್‌ ಕಡಿತಕ್ಕೆ ಡಿಸಿ ಆದೇಶ


Team Udayavani, Jun 21, 2017, 2:59 PM IST

gul2.jpg

ವಾಡಿ: ಪಟ್ಟಣ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ದೂರಿನನ್ವಯ ಸ್ಥಳ ಪರಿಶೀಲನೆಗೆ ಮುಂದಾದ ಜಿಲ್ಲಾ ಧಿಕಾರಿ ಉಜ್ವಲಕುಮಾರ ಘೋಷ್‌ ಸುಮಾರು ಸುಮಾರು 200 ಕಲ್ಲುಗಣಿಗಳ ವಿದ್ಯುತ್‌ ಕಡಿತಕ್ಕೆ ಆದೇಶ ನೀಡುವ ಮೂಲಕ ಗಣಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. 

ಪಟ್ಟಣ ಸೇರಿದಂತೆ ಬಳವಡಗಿ, ಕೊಂಚೂರ, ರಾವೂರ, ಮಾಲಗತ್ತಿ, ಲಕ್ಷಿಪುರವಾಡಿ, ಕುಂದನೂರ, ಕಮರವಾಡಿ, ಕಡಬೂರ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನೂರಾರು ಅಕ್ರಮ ಕಲ್ಲುಗಣಿಗಳು ಪದೇಪದೆ ವಿದ್ಯುತ್‌ ಕಡಿತಕ್ಕೆ ತುತ್ತಾಗುತ್ತಿದ್ದವು. ಆದರೆ ಈ ಬಾರಿ ಜಿಲ್ಲಾಧಿಕಾರಿಗಳೇ ರಾವೂರ ವ್ಯಾಪ್ತಿಯ ಕೆಲ ಗಣಿಗಳಿಗೆ ಭೇಟಿ ನೀಡುವ ಮೂಲಕ ಪರವಾನಿಗೆಯಿಲ್ಲದೆ ಗಣಿಗಾರಿಕೆ ನಡೆಸುತ್ತಿದ್ದ ಗಣಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. 

ಬಳವಡಗಿ, ಕೊಂಚೂರು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಬಾಹುಗಳು ಗ್ರಾಮಗಳ ರಸ್ತೆಗಳನ್ನೇ ಕಬಳಿಸಿದರೆ, ರಾವೂರ ಹಾಗೂ ಮಾಲಗತ್ತಿ ಭಾಗದ ಗಣಿಗಳು, ಕಲಬುರಗಿ-ರಾಯಚೂರ ರಾಷ್ಟ್ರೀಯ ಹೆದ್ದಾರಿ-150ಕ್ಕೆ ಧಕ್ಕೆಯುಂಟು ಮಾಡಿವೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ರಾಯಲ್ಟಿ ಪಾವತಿಸಿ ಲೀಜ್‌ ಪಡೆಯಬೇಕಾದ ಗಣಿ ಮಾಲೀಕರು, ಕಾನೂನಿನ ನಿಯಮ ಗಾಳಿಗೆ ತೂರಿ ಅಕ್ರಮ ದಂಧೆಗೆ ಮುಂದಾಗಿರುವುದು ಜಿಲ್ಲಾಧಿಕಾರಿ ಖಡಕ್‌ ಆದೇಶಕ್ಕೆ ಕಾರಣ ಎನ್ನಲಾಗಿದೆ. 

ಪರವಾನಿಗೆ ಪಡೆದುಕೊಳ್ಳುವ ವರೆಗೂ ಗಣಿಗಳಿಗೆ ವಿದ್ಯುತ್‌ ಸಂಪರ್ಕ ನೀಡಬೇಡಿ ಎಂಬ ಆದೇಶ ಜೆಸ್ಕಾಂ ಅಧಿಕಾರಿಗಳಿಗೆ ನೀಡಿರುವ  ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌, ಅಕ್ರಮ ಗಣಿಗಾರಿಕೆಗೆ ಮುಂದಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದರಿಂದ ನೂರಾರು ಗಣಿಗಳಲ್ಲಿ ಕ್ವಾರಿ ಕಟಿಂಗ್‌  ಕೆಲಸ ಸ್ಥಗಿತಗೊಂಡಿದೆ. ಗಣಿಗಾರಿಕೆಗೆ ಬೀಗ ಬಿದ್ದ ಪರಿಣಾಮ 800ಕ್ಕೂ ಹೆಚ್ಚು ಗಣಿ ಕಾರ್ಮಿಕರು ಮನೆಗಳತ್ತ ಮುಖಮಾಡಿದ್ದಾರೆ. 

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.