ಡಿಸಿಸಿ ಬ್ಯಾಂಕ್‌ಗೆ ಸಾಲ ಮನ್ನಾ ಹಣ ಬಾಕಿ
Team Udayavani, Nov 19, 2018, 10:22 AM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದ್ದ ರೈತರ ಬೆಳೆ ಸಾಲ ಮನ್ನಾ ಹಣದಲ್ಲಿ ಡಿಸಿಸಿ ಬ್ಯಾಂಕ್ ಗೆ ಇನ್ನು 100 ಕೋಟಿ ರೂ. ಬಿಡುಗಡೆ ಆಗಬೇಕಿದ್ದರಿಂದ ರೈತರಿಗೆ ಸಾಲ ಮನ್ನಾ ಹಣ ಪಾವತಿಸಲು ವಿಳಂಬವಾಗುತ್ತಿದೆ.
ರೈತರು ಯಾವುದೇ ಆತಂಕ ಪಡದೇ ಸಹಕರಿಸಬೇಕೆಂದು ಕಲಬುರಗಿ-ಯಾದಗಿರಿ ಸಹಕಾರ ಬ್ಯಾಂಕ್ (ಡಿಸಿಸಿ)ನ ನಿರ್ದೇಶಕ ಕೇದಾರಲಿಂಗಯ್ಯ ಹಿರೇಮಠ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಮಾಡಿರುವ 50 ಸಾವಿರ ರೂ. ವರೆಗಿನ ಸಾಲ ಮನ್ನಾದಲ್ಲಿ ಡಿಸಿಸಿ ಬ್ಯಾಂಕ್‌ಗೆ ಒಟ್ಟು 307 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ 50 ಕೋಟಿ ರೂ. ಸಾಲದ ಹಣ ಮತ್ತು 50 ಕೋಟಿ ರೂ. ಬಡ್ಡಿ ಹಣ ಸೇರಿದಂತೆ 100 ಕೋಟಿ ರೂ. ಬಾಕಿ ಇದೆ. ಈ ಕುರಿತು ಬೆಂಗಳೂರಿಗೆ ನಿಯೋಗ ಸಮೇತ ತೆರಳಿ ಸೋಮವಾರ ಮುಖ್ಯಮಂತ್ರಿ, ಸಹಕಾರ ಸಚಿವರನ್ನು ಭೇಟಿ ಮಾಡಿ ಬಾಕಿ ಹಣ ಬಿಡುಗಡೆಗೆ ಮನವಿ ಮಡಲಾಗುವುದು ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್‌ನಿಂದ ಒಟ್ಟು 38 ಸಾವಿರ ರೈತರಿಗೆ 72 ಕೋಟಿ ರೂ. ಸಾಲ ಮನ್ನಾ ಹಣ ಸಂದಾಯ ಆಗಬೇಕಿದೆ. ಸರ್ಕಾರದಿಂದ ಹಣ ಬಿಡುಗಡೆ ಬಾಕಿಯಿರುವುದಿಂದ
ರೈತರಿಗೆ ಸಾಲ ಮನ್ನಾ ಹಣ ವಿತರಿಸಲು ವಿಳಂಬವಾಗುತ್ತಿದೆ ಎಂದರು. ಬ್ಯಾಂಕ್‌ನ ಎದುರು ರೈತರು ಪ್ರತಿಭಟನೆ ನಡೆಸುವುದು ನ್ಯಾಯಯುತವಾಗಿದೆ. ಆದರೆ, ಡಿಸಿಸಿ ಬ್ಯಾಂಕ್‌ನಲ್ಲಿ ಯಾವುದೇ ರೀತಿಯ ಅವ್ಯವಹಾರವಾಗಿಲ್ಲ. ಹೀಗಾಗಿ ರೈತರು ಆತಂಕಕ್ಕೆ ಈಡಾಗುವುದು ಬೇಡ ಎಂದು ಸ್ಪಷ್ಟಪಡಿಸಿದರು.
ಪ್ರಭಾವಿಗಳಿಂದ ಸಾಲ ಬಾಕಿ: ಡಿಸಿಸಿ ಬ್ಯಾಂಕ್‌ನಿಂದ ಪಂಪ್ ಸೆಟ್, ಟ್ರ್ಯಕ್ಟರ್ ಸೇರಿದಂತೆ ಕೃಷಿ ಯಂತ್ರೋಪಕರಣಗಳಿಗೆ ರೈತರು ಪಡೆದ ಸಾಲದಲ್ಲಿ 120 ಕೋಟಿ ರೂ. ಮರು ಪಾವತಿ ಆಗಬೇಕಿದೆ. ಇದರಲ್ಲಿ ಪ್ರಭಾವಿ ರಾಜಕಾರಣಿಗಳೇ ಹೆಚ್ಚಾಗಿರುವುದಿಂದ ಸಾಲ ಮರು ಪಾವತಿಸುತ್ತಿಲ್ಲ. ಅಂತಹವರನ್ನು ಸುಸ್ತಿಗಾರರೆಂದು ಪರಿಗಣಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಶೀಘ್ರವೇ ಚರ್ಚೆ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಜೇವರ್ಗಿ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎಸ್. ಕೋಬಾಳ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.