ಸಮ್ಮೇಳನ ಯಶಸ್ವಿ, ಶ್ರೇಯಸ್ಸು ತರುವಂತೆ ಶ್ರಮಿಸಲು ಅಧಿಕಾರಿಗಳಿಗೆ ಡಿಸಿಎಂ ತಾಕೀತು
Team Udayavani, Dec 12, 2019, 12:50 PM IST
ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ ಶ್ರಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಕೀತು ಮಾಡಿದರು.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಸಮ್ಮೇಳನ ಯಶಸ್ವಿ ಶ್ರೇಯಸ್ಸು ಆಗಲು ಮಹತ್ವ ಕೊಡಿ. ಬಹು ಮುಖ್ಯವಾಗಿ ವಹಿಸಿ ಕೊಡಲಾಗುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.
ತೊಗರಿ ಖರೀದಿಗೆ ಸಂಬಂಧಿಸಿದಂತೆ ಡಿ. 13 ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿರುವುದಾಗಿ ಡಿಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಸರ್ಕಾರಿ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಶಿಷ್ಟಾಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕೆಂದು ಡಿಸಿಎಂ ಕಾರಜೋಳ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರು ತಮ್ಮ ತಾಲ್ಲೂಕಿನ ಲ್ಲಿ ಅದರಲ್ಲೂ ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಸಂಬಂಧ ಸಭೆಗೆ ತಮ್ಮನ್ನು ಆಹ್ವಾನಿಸದೇ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
15 ತಿಂಗಳ ನಂತರ ಕೆಡಿಪಿ: ಉಪಮುಖ್ಯಮಂತ್ರಿ ಕಾರಜೋಳ ಅಧ್ಯಕ್ಷತೆಯಲ್ಲಿ ಸುಮಾರು 15 ತಿಂಗಳ ಬಳಿಕ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು.
ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್, ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಆಳಂದ ಶಾಸಕ ಸುಭಾಷ್ ಗುತ್ತೇದಾರ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಬಿ.ಜಿ.ಪಾಟೀಲ, ಜಿ.ಪಂ. ಅಧ್ಯಕ್ಷೆ ಸುವರ್ಣ ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ, ಜಿ.ಪಂ. ಸಿಇಒ ಡಾ.ರಾಜಾ ಪಿ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಫ್ಎಸ್ ಅಧಿಕಾರಿ ವಾನತಿ ಇದ್ದಾರೆ.
ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತ ಮಂದಿರದ ಅಭಿವೃದ್ಧಿಗಾಗಿ ₹ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಯಾವ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ನಿರ್ಧಾರ ಕೈಗೊಳ್ಳುವ ಸಭೆಗೆ ತಮ್ಮನ್ನು ಆಹ್ವಾನಿಸದೇ ಅವಮಾನ ಮಾಡಲಾಗಿದೆ ಎಂದು ಶಾಸಕ ಎಂ.ವೈ.ಪಾಟೀಲ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಶಂಕುಸ್ಥಾಪನೆಗೆ ಖಂಡಿತ ಕರೆಯಲಾಗುತ್ತದೆ ಎಂದು ಹೇಳಿ ಸಚಿವರು ಶಿಷ್ಟಾಚಾರದ ಚರ್ಚೆಗೆ ತೆರೆ ಎಳೆದರು.
ಕಾಂಗ್ರೆಸ್ ಶಾಸಕ ಡಾ ಅಜಯ್ ಸಿಂಗ್ ಹಾಗೂ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ಸಭೆಗೆ ಗೈರು ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.