ಮಡಿವಾಳ ಮಾಚಿದೇವ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
Team Udayavani, Jan 25, 2019, 7:13 AM IST
ಕಲಬುರಗಿ: ನಗರ ಮತ್ತು ಜಿಲ್ಲೆಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ. 1ರಂದು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ನಿರ್ಧರಿಸಿತು.
ಅಂದು ಬೆಳಗ್ಗೆ 11:30ಕ್ಕೆ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಿಲ್ಲಾಮಟ್ಟದ ಜಯಂತಿಗೆ ಚಾಲನೆ ನೀಡಲಾಗುವುದು. ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಸಮಾರಂಭದಲ್ಲಿ ಶರಣರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ಆಯೋಜಿಸಲಾಗುವುದು.
ಇದಕ್ಕೂ ಮುನ್ನ ಹುಮನಾಬಾದ ರಿಂಗ್ ರಸ್ತೆಯ ಮಡಿವಾಳ ಮಾಚಿದೇವರ ವೃತ್ತದಿಂದ ವಿವಿಧ ಕಲಾ ತಂಡಗಳೊಂದಿಗೆ ಶರಣ ಮಡಿವಾಳ ಮಾಚಿದೇವರ ಭಾವಚಿತ್ರವೊಳಗೊಂಡ ಭವ್ಯ ಮೆರವಣಿಗೆ ಬೆಳಗ್ಗೆ 9:30ಕ್ಕೆ ಆರಂಭಗೊಂಡು ಸೂಪರ್ ಮಾರ್ಕೇಟ್, ಜಗತ್ ವೃತ್ತ ಮಾರ್ಗವಾಗಿ ಡಾ| ಎಸ್.ಎಂ. ಪಂಡಿತ ರಂಗಮಂದಿರಕ್ಕೆ ಆಗಮಿಸಲಿದೆ.
ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರಿನ ವ್ಯವಸ್ಥೆ, ಕಾರ್ಯಕ್ರಮದ ಸ್ಥಳ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಕಾಶ ಚಿಂಚೋಳಿಕರ ಸೂಚಿಸಿದರು. ಸಭೆಯಲ್ಲಿ ಭಾಗವಹಿಸಿದ ಸಮಾಜದ ಮುಖಂಡರು ಜಯಂತಿಯ ಯಶಸ್ವಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಜಯಂತಿ ಅಂಗವಾಗಿ ಕೈಗೊಂಡ ಪೂರ್ವ ಸಿದ್ಧತೆ ಬಗ್ಗೆ ವಿವರಿಸಿದರು. ಜಿಲ್ಲಾ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷರು ಸೇರಿದಂತೆ ಸಮಾಜದ ಹಿರಿಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.