ಅರ್ಥಪೂರ್ಣ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ನಿರ್ಧಾರ
Team Udayavani, Sep 9, 2022, 3:46 PM IST
ಆಳಂದ: ಸೆ. 17ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅರ್ಥಪೂರ್ಣ ಆಚರಣೆಗೆ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಅಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಸಮಾಜ ಬಾಂಧವರನ್ನು ಆಮಂತ್ರಿಸಿ ಆಡಳಿತ ಸೌಧನಲ್ಲಿ ಇದೇ ವೇಳೆ ಜಯಂತಿ ಆಚರಿಸಲಾಗುವುದು ಎಂದು ತಹಶೀಲ್ದಾರರು ಸಭೆಯಲ್ಲಿ ಹೇಳಿದರು.
ಅಂದು ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನೆರವೇರಿಸಲು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿರ್ಧರಿಸಲಾಯಿತು. ಇದಕ್ಕೂ ಮುನ್ನಾದಿನ ಆಡಳಿತ ಸೌಧಕ್ಕೆ ವಿದ್ಯುತ್ ದೀಪಾಲಂಕಾರಗೊಳಿಸಿ ಕಂಗೊಳಿಸುವಂತೆ ಹಾಗೂ ಮರುದಿನದ ಸಮಾರಂಭದಲ್ಲಿ ವಿಮೋಚನಾ ಚಳವಳಿ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ ನೆರವೇರಿಸಲು ತೀರ್ಮಾನಿಸಿದರು. ಪ್ರತಿವರ್ಷದಂತೆ ನಿಗದಿತ ಸಮಯದಲ್ಲಿ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ಕೈಗೊಂಡು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ್ ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ, ಸಹಾಯಕ ಕೃಷಿ ನಿರ್ದೇಶಕ ಪಿ.ಎಂ. ಮಲ್ಲಿಕಾರ್ಜುನ, ಸಿಡಿಪಿಒ ಶಿವಮೂರ್ತಿ ಕುಂಬಾರ, ಸಮಾಜ ಕಲ್ಯಾಣಾಧಿಕಾರಿ ಮೋನಮ್ಮಾ ಸುತಾರ, ಬಿಸಿಎಂ ಸಿಬ್ಬಂದಿ ಇಲಾಖೆಯ ಸುನೀತಾ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಜಿಪಂ ಸಿಬ್ಬಂದಿ ಗಣಪತಿ ಚೌದ್ರಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.